ಕನ್ನಡಪ್ರಭ ವಾರ್ತೆ ಬೆಂಗಳೂರು
ಹೀಗೆ, ಅನೇಕ ಭಾವುಕ ಕ್ಷಣಗಳಿಗೆ ಯಲಹಂಕದ ನ್ಯೂ ಟೌನ್‌ನ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ನಡೆದ 2ನೇ ದಿನದ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮ ಸಾಕ್ಷಿಯಾಯಿತು.
ಸುಮಾರು 3 ಸಾವಿರ ಅಹವಾಲುಗಳನ್ನು ಸ್ವೀಕರಿಸಿದ ಅವರು, ಸರಿಯಾದ ದಾಖಲೆಗಳಿದ್ದರೂ ಖಾತಾ ಮಾಡಿಕೊಡುತ್ತಿಲ್ಲ ಎಂದು ಮಹಿಳೆಯೊಬ್ಬರು ದೂರು ನೀಡಿ ಆಸ್ತಿ ರಕ್ಷಣೆ ಮಾಡಿಕೊಡುವಂತೆ ಕಣ್ಣೀರಿಟ್ಟರು. ಅದಕ್ಕೆ ಸ್ಪಂದಿಸಿದ ಶಿವಕುಮಾರ್, ಅಳಬೇಡಮ್ಮ ನಮ್ಮ ಸರ್ಕಾರವಿದೆ, ನಾನಿದ್ದೇನೆ, ನಿನ್ನ ಜಾಗದಲ್ಲೇ ಇರು ಎಂದು ಧೈರ್ಯ ತುಂಬಿದರು. ಜತೆಗೆ ಎಂಜಿನಿಯರ್‌ಗೆ ಒಂದು ವಾರದಲ್ಲಿ ಸಮಸ್ಯೆ ಬಗೆಹರಿಯಬೇಕು ಎಂಬ ತಾಕೀತು ಮಾಡಿದರು.ಅಲ್ಲದೇ, ಈ ಭಾಗದಲ್ಲಿ ಇಷ್ಟೊಂದು ಭೂಮಿಯ ಸಮಸ್ಯೆ ಇದೆ. ಎಲ್ಲಾ ದಾಖಲೆಗಳು ಸರಿ ಇದ್ದರೂ ಖಾತೆ ಮಾಡಿಕೊಡಲು ಏನಾಗಿದೆ ನಿಮಗೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ದೋಷವಿದ್ದರೂ ಬಿಎ ಪದವಿ ಪೂರ್ಣ ಮಾಡಿದ್ದೇನೆ. ಮನೆ ಮತ್ತು ಕೆಲಸ ಬೇಕು ಎಂದು ದಾಸರಹಳ್ಳಿಯ ಹಿವ್ಯಾಂಜಲಿ ಮನವಿ ಸಲ್ಲಿಸಿದಾಗ, ಬಿಡಿಎ ಆಯುಕ್ತ ಜಯರಾಮ್ ಅವರಿಗೆ ಅಂಗವಿಲರ ಕೋಟಾದ ಅಡಿಯಲ್ಲಿ ಫ್ಲಾಟ್ ನೀಡುವಂತೆ ಸೂಚಿಸಿದರು. ಜತೆಗೆ ಪಾಲಿಕೆಯಲ್ಲಿ ಕೆಲಸ ಕೊಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ಗೆ ನಿರ್ದೇಶಿಸಿದರು.ದಯಾಮರಣ ಇಲ್ಲ, ಸಮಸ್ಯೆ ಪರಿಹಾರ ಅಷ್ಟೇ
ಇನ್ನು ನೀರು ಬರುವುದಿಲ್ಲ. ಆದರೆ, ಜಲಮಂಡಳಿಯ ಮೀಟರ್ ಓಡುತ್ತದೆ ಎಂದು ಗಂಗೇಗೌಡ ಅವರ ಮನವಿಗೆ ಸ್ಪಂದಿಸಿದ ಡಿಸಿಎಂ, ಜಲಮಂಡಳಿ ಎಂಜಿನಿಯರ್ ಒಂದು ವಾರದೊಳಗೆ ಇವರ ಮನೆ ನೀರಿನ ಸಮಸ್ಯೆ ಬಗೆಹರಿಯಬೇಕು ಎಂದು ಗಡುವು ನೀಡಿದರು. ವಿದ್ಯಾರಣ್ಯಪುರದ ಬೀದಿ ಬದಿ ಪಡ್ಡು ವ್ಯಾಪಾರಿ ವಲ್ಲಿಮಾ ಅವರು ರಸ್ತೆ ಬದಿ ವ್ಯಾಪಾರ ಮಾಡಲು ಅವಕಾಶ ನೀಡುವಂತೆ ಮನವಿಗೆ ಸ್ಪಂದಿಸಿ ‘ತಳ್ಳುವ ಗಾಡಿ ಕೊಡಿಸುವುದಾಗಿ ಭರವಸೆ ನೀಡಲಾಗಿದೆ.
ಉಚಿತ ಮಾಡಿ!