ಭುವನಾ ಮನೆಗೆ ಡಿಸಿಎಂ ಪರಮೇಶ್ವರ್ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

KannadaprabhaNewsNetwork |  
Published : Jul 07, 2026, 01:15 AM IST
ಪೋಟೋ 6 : ಅಪಘಾತದಲ್ಲಿ ಮೃತಪಟ್ಟ ವಿಎಒ ಭುವನಾ ರವರ ಸ್ವಗ್ರಾಮಕ್ಕೆ ಡಿಸಿಎಂ ಜಿ.ಪರಮೇಶ್ವರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. | Kannada Prabha

ಸಾರಾಂಶ

ದಾಬಸ್‍ಪೇಟೆ: ಶನಿವಾರ ತುಮಕೂರಿನ ಗುಳೂರು ಗ್ರಾಮ ಆಡಳಿತಾಧಿಕಾರಿ ಭುವನಾ ಎಸ್‍ಐಆರ್ ಕರ್ತವ್ಯಕ್ಕೆ ತೆರಳುತ್ತಿದ್ದಾಗ ತುಮಕೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಜಿ.ಪರಮೇಶ್ವರ್ ಅವರು ಭಾನುವಾರ ರಾತ್ರಿ ಮೃತ ವಿಎಒ ಭುವನಾ ಅವರ ಸ್ವಗ್ರಾಮ ನೆಲಮಂಗಲ ತಾಲೂಕಿನ ವರದನಾಯಕನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಭುವನಾ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು

ದಾಬಸ್‍ಪೇಟೆ: ಶನಿವಾರ ತುಮಕೂರಿನ ಗುಳೂರು ಗ್ರಾಮ ಆಡಳಿತಾಧಿಕಾರಿ ಭುವನಾ ಎಸ್‍ಐಆರ್ ಕರ್ತವ್ಯಕ್ಕೆ ತೆರಳುತ್ತಿದ್ದಾಗ ತುಮಕೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಜಿ.ಪರಮೇಶ್ವರ್ ಅವರು ಭಾನುವಾರ ರಾತ್ರಿ ಮೃತ ವಿಎಒ ಭುವನಾ ಅವರ ಸ್ವಗ್ರಾಮ ನೆಲಮಂಗಲ ತಾಲೂಕಿನ ವರದನಾಯಕನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಭುವನಾ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ ವೇಳೆ ಮಾತನಾಡಿದ ಡಿಸಿಎಂ ಜಿ.ಪರಮೇಶ್ವರ್, ಕರ್ತವ್ಯ ನಿರ್ವಹಣೆ ವೇಳೆ ಸಂಭವಿಸಿದ ದುರ್ಘಟನೆಯಲ್ಲಿ ಅಮೂಲ್ಯ ಜೀವ ಕಳೆದುಕೊಂಡಿರುವುದು ದುಃಖಕರ ಸಂಗತಿ. ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ಕೊಡಲಿ ಎಂದು ಪ್ರಾರ್ಥಿಸುತ್ತೇನೆ. ಘಟನೆಗೆ ಸಂಬಂಧಿಸಿದಂತೆ ಸಮಗ್ರ ಪರಿಶೀಲನೆಗೆ ಸೂಚಿಸಲಾಗಿದೆ. ಪರಿಶೀಲನಾ ವರದಿ ಬಂದ ಬಳಿಕ ಮುಂದಿನ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮೃತರ ಕುಟುಂಬಕ್ಕೆ ಸರ್ಕಾರದಿಂದ ದೊರೆಯಬೇಕಾದ ಎಲ್ಲ ಅಗತ್ಯ ನೆರವು, ಪರಿಹಾರ ಹಾಗೂ ಸೌಲಭ್ಯಗಳನ್ನು ಶೀಘ್ರವಾಗಿ ಒದಗಿಸಲು ಕ್ರಮ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ತುಮಕೂರಿನಲ್ಲಿ ಗ್ರಾಮ ಆಡಳಿತಾಧಿಕಾರಿಗಳು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭಾನುವಾರ ಭೇಟಿ ನೀಡಿ ಪ್ರತಿಭಟನೆ ಹಿಂಪಡೆಯುವಂತೆ ಮನವೊಲಿಸಿದ್ದೇನೆ. ನಾನು ಯಾವತ್ತು ಸರ್ಕಾರಿ ಅಧಿಕಾರಿಗಳನ್ನು ನಿರ್ಲಕ್ಷ್ಯ ಮಾಡಿಲ್ಲ, ಮಾಡಲು ಸಹ ಬಿಡಲ್ಲ ಎಂದು ಹೇಳಿದರು. ಪೋಟೋ 6 : ಅಪಘಾತದಲ್ಲಿ ಮೃತಪಟ್ಟ ವಿಎಒ ಭುವನಾ ಮನೆಗೆ ಡಿಸಿಎಂ ಜಿ.ಪರಮೇಶ್ವರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಸವೇಶ್ವರ ಆಂಗ್ಲ ಪ್ರೌಢಶಾಲೆಯಲ್ಲಿ ಅಕ್ಷರಾಭ್ಯಾಸ
ಶಿಕ್ಷಕರ ಮಾರ್ಗದರ್ಶನದಿಂದ ಅಧ್ಯಯನ ನಡೆಸಿ