ಬೇಡಿಕೆ ಈಡೇರಿಸಲು 25ರ ಗಡುವು

KannadaprabhaNewsNetwork |  
Published : Aug 15, 2025, 01:00 AM IST
೧೪ಕೆಎಲ್‌ಆರ್-೧ಕೋಲಾರದಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಶಾಖೆಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಡಿಸಿ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

೨೦೨೪ರ ಸೆಪ್ಟೆಂಬರ್ ೪ ರಂದು ಶಿಕ್ಷಣ ಸಚಿವರ ನೇತೃತ್ವದಲ್ಲಿ ಸಭೆನಡೆಸಿ ಒಂದು ಸಮಿತಿ ರಚಿಸುವ ಮೂಲಕ ೩೦ ದಿನಗಳಲ್ಲಿ ವರದಿ ಪಡೆದು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಗಿರುವ ಅನ್ಯಾಯ ಸರಿಪಡಿಸುವ ಸ್ಪಷ್ಟ ಭರವಸೆ ನೀಡಿದ್ದರು. ಆದರೆ ಇಲ್ಲಿಯವರೆಗೂ ಆ ಭರವಸೆ ಈಡೇರಿಸಿಲ್ಲ. ತಕ್ಷಣ ಮುಖ್ಯಮಂತ್ರಿಗಳು ಸಂಪುಟ ಸಭೆಯ ಅನುಮತಿ ಪಡೆದು ಜಾರಿಗೊಳಿಸಲಿ.

ಕನ್ನಡಪ್ರಭ ವಾರ್ತೆ ಕೋಲಾರಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ೨೦೨೪ರ ಶಿಕ್ಷಕರ ದಿನಾಚರಣೆಯಂದು ನೀಡಿದ ಭರವಸೆಯಂತೆ ಪ್ರಾಥಮಿಕ ಶಾಲಾ ಸೇವಾ ನಿರತ ಪದವೀಧರ ಶಿಕ್ಷಕರಿಗೆ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕಡತಕ್ಕೆ ತಕ್ಷಣ ಅನುಮೋದನೆ ನೀಡಲು ನಿರ್ದೇಶನ ನೀಡುವಂತೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಡಿಸಿಗೆ ಮನವಿ ಸಲ್ಲಿಸಿತು.ಈ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಕ ಮುಖಂಡರು, ೨೦೨೪ರ ಸೆಪ್ಟೆಂಬರ್ ೪ ರಂದು ಶಿಕ್ಷಣ ಸಚಿವರ ನೇತೃತ್ವದಲ್ಲಿ ಸಭೆನಡೆಸಿ ಒಂದು ಸಮಿತಿ ರಚಿಸುವ ಮೂಲಕ ೩೦ ದಿನಗಳಲ್ಲಿ ವರದಿ ಪಡೆದು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಗಿರುವ ಅನ್ಯಾಯ ಸರಿಪಡಿಸುವ ಸ್ಪಷ್ಟ ಭರವಸೆ ನೀಡಿದ್ದರು. ಆದರೆ ಇಲ್ಲಿಯವರೆಗೂ ಆ ಭರವಸೆ ಈಡೇರಿಸಿಲ್ಲ ಎಂದರು.25ರೊಳಗೆ ನ್ಯಾಯ ಒದಗಿಸಿ

ಈ ಸಂಬಂಧ ಈಗಾಗಲೇ ಕಾನೂನು ಇಲಾಖೆ ತಮ್ಮ ಸ್ಪಷ್ಟ ಅಭಿಪ್ರಾಯ ಎರಡು ಸಲ ನೀಡಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯೂ ಕೂಡ ತಮ್ಮ ಅಭಿಪ್ರಾಯ ಮಂಡಿಸಿದೆ, ಇನ್ನು ಆರ್ಥಿಕ ಇಲಾಖೆ ತನ್ನ ಅಭಿಪ್ರಾಯ ನೀಡಬೇಕಾಗಿದ್ದು, ತಕ್ಷಣ ಮುಖ್ಯಮಂತ್ರಿಗಳು ಸದರಿ ಇಲಾಖೆಯಿಂದ ಅಭಿಪ್ರಾಯ ಪಡೆದು ಸಚಿವ ಸಂಪುಟದ ಅನುಮೋದನೆ ಪಡೆದು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ೨೦೨೫ರ ಆಗಸ್ಟ್ ೨೫ ರೊಳಗಾಗಿ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದರು.ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ನಾಗರಾಜ್, ಪ್ರಧಾನ ಕಾರ್ಯದರ್ಶಿ ಅಪ್ಪಯ್ಯಗೌಡ ಸೇರಿದಂತೆ ಎಲ್ಲಾ ಪದಾಧಿಕಾರಿಗಳು,ಶಿಕ್ಷಕರು ಹಾಜರಿದ್ದು, ಇದೇ ಸಂದರ್ಭದಲ್ಲಿ ಮನವಿಯನ್ನು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಡಿಡಿಪಿಐಗೂ ನೀಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ