ತಿಂಗಳಾಂತ್ಯಕ್ಕೆ ಭಾಗಮಂಡಲ ಸೇತುವೆ ಕಾರ್ಯ ಮುಕ್ತಾಯಕ್ಕೆ ಗಡುವು: ಸಚಿವ ಭೋಸರಾಜು

KannadaprabhaNewsNetwork |  
Published : Jan 11, 2024, 01:30 AM IST
ಚಿತ್ರ : 10ಎಂಡಿಕೆ6 : ಸಭೆಯಲ್ಲಿ ಸಚಿವ ಭೋಸರಾಜು ಮಾತನಾಡಿದರು.  | Kannada Prabha

ಸಾರಾಂಶ

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಜಲ ಸಂಪನ್ಮೂಲ ಇಲಾಖೆ ಮತ್ತು ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್ ಅವರು ಹಾಗೂ ಕಾವೇರಿ ಜಲ ನಿಗಮ ನಿಯಮಿತದ ಅಧಿಕಾರಿಗಳು ಭಾಗವಹಿಸಿದ್ದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಅಪೂರ್ಣಗೊಂಡಿರುವ ಭಾಗಮಂಡಲ ಮೇಲ್ಸೇತುವೆ ಕಾಮಗಾರಿ ಯನ್ನ ಜನವರಿ ತಿಂಗಳಾಂತ್ಯಕ್ಕೆ ಮುಗಿಸುವಂತೆ ಕಾವೇರಿ ಜಲ ನಿಗಮ ನಿಯಮಿತದ ಅಧಿಕಾರಿಗಳಿಗೆ ಗಡುವು ನಿಗದಿಗೊಳಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ.

ಸಚಿವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಜಲ ಸಂಪನ್ಮೂಲ ಇಲಾಖೆ ಮತ್ತು ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್ ಅವರು ಹಾಗೂ ಕಾವೇರಿ ಜಲ ನಿಗಮ ನಿಯಮಿತದ ಅಧಿಕಾರಿಗಳು ಭಾಗವಹಿಸಿದ್ದರು.

ಹಲವಾರು ವರ್ಷಗಳಿಂದ ಈ ಸೇತುವೆಯ ಕಾಮಗಾರಿ ನಡೆಯುತ್ತಿದೆ. ಆದರೆ, ಇದುವರೆಗೂ ಪೂರ್ಣಗೊಳಿಸಲಾಗಿಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ಇದನ್ನ ಶೀಘ್ರವಾಗಿ ಸಿದ್ಧಗೊಳಿಸುವ ಅವಶ್ಯಕತೆಯಿದೆ. ಅಂತಿಮ ಹಂತದ ಕಾಮಗಾರಿಯನ್ನ ಮುಗಿಸುವ ಅವಶ್ಯಕತೆಯಿದ್ದು, ತಿಂಗಳಾಂತ್ಯದ ಒಳಗೆ ಕಾಮಗಾರಿ ಮುಗಿಸವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಜಲ ಸಂಪನ್ಮೂಲ ಇಲಾಖೆ ಮತ್ತು ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್ ಮಾತನಾಡಿ, ಅಧಿಕಾರಿಗಳು ಕಾಮಗಾರಿಯನ್ನ ಮುಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರತಿ ದಿನ ಕಾಮಗಾರಿ ಪ್ರಗತಿಯ ವರದಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಲೀಲಾ ಪಾಟೀಲರಿಗೆ ‘ಸೌಭಾಗ್ಯವತಿ ಸಿಂಧು ಸುಭಾಷ ಮ್ಹಮಾಣೆ ಮಾತೃಶಕ್ತಿ ಪ್ರಶಸ್ತಿ’ ಪ್ರದಾನ
ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ : ಸೂರಜ್‌ ರೇವಣ್ಣಗೆ ಕೋರ್ಟ್‌ ಶಾಕ್‌