ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ಗಣರಾಜ್ಯೋತ್ಸವ ಆಚರಣೆ ಕುರಿತು ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದ ಕಟ್ಟಡದ ಮೇಲೆ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ, 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವರಿಂದ ಧ್ವಜಾರೋಜಹಣ ಹಾಗೂ ಸಚಿವರಿಂದ ಗಣರಾಜ್ಯೋತ್ಸವದ ಸಂದೇಶದ ನಂತರ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.
ಪಥಸಂಚಲನ ಕಾರ್ಯಕ್ರಮದಲ್ಲಿ ಪೊಲೀಸ್, ಗೃಹರಕ್ಷಕ ದಳ, ಸೇವಾದಳ, ಸ್ಕೌಟ್ಸ್ ಆ್ಯಂಡ್ ಗೈಡ್ಸ್, ಎನ್‌ಸಿಸಿ ಕೆಡೆಟ್‌ಗಳನ್ನು ಆಹ್ವಾನಿಸಲು ಸೂಚಿಸಲಾಯಿತು. ಧ್ವಜಾರೋಹಣ ವ್ಯವಸ್ಥೆ ಮಾಡಲು ಭಾರತ ಸೇವಾದಳ, ಪೊಲೀಸ್ ಇಲಾಖೆ, ತಹಸೀಲ್ದಾರ್ ಹಾಗೂ ಯುವಜನ ಸೇವಾ ಹಾಗೂ ಕ್ರೀಡಾಧಿಕಾರಿಗಳಿಗೆ ವಹಿಸಲಾಯಿತು. ಕಾರ್ಯಕ್ರಮಗಳ ಸಿದ್ಧತೆಗೆ ಸಮಿತಿ ರಚಿಸಲಾಗಿದೆ. ಪೂರ್ವ ತಯಾರಿಗಾಗಿ ಉಪ ಸಮಿತಿಗಳ ಸಭೆ ಕರೆದು ಬೇಕಾಗುವ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದರು.ಸಂಪೂರ್ಣವಾಗಿ ಪ್ಲಾಸ್ಟಿಕ್ ದ್ವಜ ಬಳಸುವುದನ್ನು ಹಾಗೂ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಶಾಲಾ ಮಕ್ಕಳಿಗೆ ಪ್ಲಾಸ್ಟಿಕ್ ಧ್ವಜಗಳನ್ನು ತರುವುದನ್ನು ನಿರ್ಭಂದಿಸುವ ಕುರಿತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಿವೇಕಾನಂದಗೆ ಕ್ರಮಕೈಗೊಳ್ಳುವಂತೆ ತಿಳಿಸಿದರು. ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ, ಗಣ್ಯರಿಗೆ ಶಾಸಕರಿಗೆ, ಸಂಸದರಿಗೆ ಹಾಗೂ ಪತ್ರಕರ್ತರಿಗೆ ಸೂಕ್ತ ಆಸನಗಳ ವ್ಯವಸ್ಥೆ, ಧ್ವನಿವರ್ಧಕ ಹಾಗೂ ಜನರೇಟರ್ ವ್ಯವಸ್ಥೆ ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸದರಿ ದಿನದಂದು ಪೊಲೀಸ್ ಬಂದೊಬಸ್ತ್ ವ್ಯವಸ್ಥೆ ಮಾಡುವಂತೆ ಇಲಾಖೆಗೆ ಸೂಚಿಸಲಾಯಿತು. ರಾಷ್ಟ್ರೀಯ ಕಾರ್ಯಕ್ರಮವಾಗಿರುವುದರಿಂದ ಜಿಲ್ಲೆಯ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಹಾಜರಾಗಿ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಕರೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿಪಂ ಸಿಇಒ ಶಶಿಧರ ಕುರೇರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ಶ್ವೇತಾ ಬೀಡಿಕರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ವಿವೇಕಾನಂದ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಶೇಖರ ಪಟ್ಟಣಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪೂರ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.