ಸರಳ ಬಸವ ಜಯಂತಿ ಆಚರಣೆಗೆ ನಿರ್ಧಾರ: ಚನ್ನಮಲ್ಲಪ್ಪ ಘಂಟಿ

KannadaprabhaNewsNetwork |  
Published : May 10, 2024, 01:40 AM IST
09ಕೆಪಿಡಿವಿಡಿ01 | Kannada Prabha

ಸಾರಾಂಶ

ದೇವದುರ್ಗದ ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ಬಸವ ಜಯಂತಿಯ ಪೂರ್ವಭಾವಿ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ದೇವದುರ್ಗ

ನೀತಿ ಸಂಹಿತೆ ಜಾರಿಯಲ್ಲಿರುವದರಿಂದಾಗಿ ಸಾಂಸ್ಕೃತಿಕ ನಾಯಕ ಬಸವಣ್ಣ ಹಾಗೂ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ತಾಲೂಕಾಡಳಿತದಿಂದ ಅತ್ಯಂತ ಸರಳವಾಗಿ ಆಚರಿಸಲಾಗುವದು ಎಂದು ಸಮಿತಿ ಅಧ್ಯಕ್ಷರು ಹಾಗೂ ತಹಸೀಲ್ದಾರ್‌ ಚನ್ನಮಲ್ಲಪ್ಪ ಘಂಟಿ ತಿಳಿಸಿದರು.

ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ಗುರುವಾರ ಜರುಗಿದ ಪೂರ್ವಭಾವಿ ಸಭೆಯಲ್ಲಿ ಎಲ್ಲ ಅಧಿಕಾರಿಗಳ ಹಾಗೂ ಬಸವಪರ ಸಂಘಟನೆಗಳ ಸಲಹೆ ಪಡೆದು ಎಲ್ಲ ಕಚೇರಿಗಳಲ್ಲಿ ಸರ್ಕಾರಿ ನಿಯಾಮಾನುಸಾರ ಸಾಂಸ್ಕೃತಿಕ ನಾಯಕ ಬಸವಣ್ಣ ಹಾಗೂ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಬೇಕು. ನಂತರ ಪಟ್ಟಣದ ಬಸವೇಶ್ವರ ಹಾಗೂ ಹೇಮರೆಡ್ಡಿ ಮಲ್ಲಮ್ಮ ವೃತ್ತದಲ್ಲಿ ಎಲ್ಲರೂ ಹಾಜರಾಗಿ ಸಾಮೂಹಿಕವಾಗಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಗ್ರೇಡ್-2 ತಹಸೀಲ್ದಾರ್ ವೆಂಕಟೇಶ ಕುಲಕರ್ಣಿ, ಪಿಡಬ್ಲ್ಯೂಡಿ ಎಇಇ ಬಕ್ಕಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಡೋಣಿ, ತಾಲೂಕು ಆರೋಗ್ಯಾಧಿಕಾರಿ ಡಾ.ಜಿ.ಬನದೇಶ್ವರ, ದೈಹಿಕ ಶಿಕ್ಷಣಾಧಿಕಾರಿ ಎಂ.ವಿ.ಕವಡಿಮಟ್ಟಿ, ಪಶು ಸಂಗೋಪನಾ ಇಲಾಖೆ ಬಸವರಾಜ ಮಿರಸ್ದಾರ್, ತಾಪಂ ರಾಘವೇಂದ್ರ, ಕಂದಾಯ ಇಲಾಖೆ ಶರಣಯ್ಯಸ್ವಾಮಿ, ಭೀಮರಾಯ, ಭೀಮನಗೌಡ, ಪ್ರವೀಣ, ಪುರಸಭೆ ಗಂಗಾಧರ ಗಬ್ಬೂರು, ಬಸವ ಕೇಂದ್ರದ ಅಧ್ಯಕ್ಷ ಸುಭಾಶ್ಚಂದ್ರ ಪಾಟೀಲ್, ತಾಲೂಕು ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸಂಘದ ಅಧ್ಯಕ್ಷ ದೇವೇಂದ್ರಪ್ಪಗೌಡ ಹಂಚಿನಾಳ, ಶ್ರೀ ಗುರು ಬಸವ ದೇವರು ಅರಿವಿನ ಮನೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವೆಂಕಟರಾಯಗೌಡ ಬೆನಕನ್, ಜಾಗತಿಕ ಲಿಂಗಾಯತ ಮಹಾಸಭಾದ ಪದಾಧಿಕಾರಿ ಬಸವರಾಜ ಬ್ಯಾಗವಾಟ, ಹೂಗಾರ ಸಮಾಜದ ಅಧ್ಯಕ್ಷ ಮಲ್ಲಪ್ಪ ಮುಂಡರಗಿ, ಕರವೇ ಮುಖಂಡ ಶಿವುಕುಮಾರ ಚಲುವಾದಿ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ