ಸೆಪ್ಟೆಂಬರ್‌ನಲ್ಲಿ 9ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಿರ್ಧಾರ

KannadaprabhaNewsNetwork |  
Published : Aug 05, 2025, 11:45 PM IST
ಫೋಟೋ- ತಾಲೂಕ | Kannada Prabha

ಸಾರಾಂಶ

9ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ನಡೆಸಲು ತಾಲೂಕು ಕಾರ್ಯಕಾರಿ ಸಮಿತಿ ನಿರ್ಧರಿಸಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಶಿವಲೀಲಾ ಎಸ್ ಕಲಗುರ್ಕಿ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕಲಬುರಗಿ

9ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ನಡೆಸಲು ತಾಲೂಕು ಕಾರ್ಯಕಾರಿ ಸಮಿತಿ ನಿರ್ಧರಿಸಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಶಿವಲೀಲಾ ಎಸ್ ಕಲಗುರ್ಕಿ ತಿಳಿಸಿದ್ದಾರೆ.ನಗರದ ಕನ್ನಡ ಭವನದಲ್ಲಿ ನಡೆಸಿದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಅರ್ಥಪೂರ್ಣ ಸಮ್ಮೇಳನವನ್ನು ನಡೆಸಲು ಸಿದ್ಧತೆಗಳ ಕುರಿತು ಚರ್ಚಿಸಲಾಯಿತು. ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ನೇತೃತ್ವದಲ್ಲಿ ಅದ್ಧೂರಿಯಾಗಿ ವೈವಿಧ್ಯಮಯ ಸಮ್ಮೇಳನ ನಡೆಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸಮ್ಮೇಳನ ಕೇವಲ ಸಾಂಕೇತಿಕವಾಗಿರದೇ ಈ ನೆಲ-ಜಲ, ಭಾಷೆ ಮತ್ತು ಸಂಸ್ಕೃತಿಯ ಕುರಿತು ಚಿಂಥನ ಮಂಥನ ನಡೆಸುವಂತಾಗುವಲ್ಲಿ ಸಮ್ಮೇಳನ ರೂಪಿಸಲಾಗುತ್ತಿದೆ. ಜಾಗತೀಕರಣದ ಪರಿಣಾಮ ಭಾಷೆ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ನಾವೆಲ್ಲರೂ ಕನ್ನಡ ಭಾಷೆ ಕಟ್ಟುವುದು ಮತ್ತು ಅದನ್ನು ಸದೃಢಗೊಳಿಸುವತ್ತ ವಿಶೇಷ ಗಮನ ಕೊಡಬೇಕಿದೆ ಎಂದು ಆಶಾಭಾವನೆ ಹೊಂದಲಾಗಿದೆ ಎಂದು ತಾಲೂಕಾಧ್ಯಕ್ಷ ಶಿವಲೀಲಾ ಕಲಗುರ್ಕಿ ಅವರು ವಿವರಿಸಿದರು.

ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಕನ್ನಡ ನಾಡಿನ ಇತಿಹಾಸ ಹಾಗೂ ಸಾಹಿತ್ಯಿಕ ಮತ್ತು ಸಾಂಸ್ಕೃತಿಕವಾಗಿ ಜಿಲ್ಲೆಯ ಸಂಪತ್ತು ಅಪಾರವಾದದ್ದು. ಭಾಷೆ, ನೆಲ, ಜಲ ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉಳಿಸುವಲ್ಲಿ ಈ ಸಮ್ಮೇಳನ ಜರುಗಲಿ ಎಂದು ಸಲಹೆ ನೀಡಿದರು.

ಜಿಲ್ಲಾ ಕಸಾಪ ಗೌ.ಕಾ ಡಾ. ಬಿ.ಎ.ಪಾಟೀಲ, ತಾಲೂಕು ಘಟಕದ ಪದಾಧಿಕಾರಿ ವಿಶಾಲಾಕ್ಷಿ ಮಾಯಣ್ಣನವರ್, ಮಲ್ಲಿಕಾರ್ಜುನ ಇಬ್ರಾಹಿಂಪುರ, ಕೋಶಾಧ್ಯಕ್ಷ ಕುಪೇಂದ್ರ ಬರಗಾಲಿ, ಪ್ರಭವ ಪಟ್ಟಣಕರ್, ಈರಣ್ಣ ಸೋನಾರ, ಸುನೀತಾ ಮಾಳಗಿ, ಚಂದ್ರಕಾಂತ ಸೂರನ್, ಶರಣು ಹಾಗರಗುಂಡಗಿ, ಕುಶಾಲ ಧರ್ಗಿ, ಕವಿತಾ ಕಾವಳೆ, ರೇವಯ್ಯಾ ಸ್ವಾಮಿ ಸರಡಗಿ, ಲಲಿತಾ, ಭಾಗ್ಯಶ್ರೀ ಮರಗೋಳ ಇದ್ದರು.

PREV

Recommended Stories

ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''