ಜಾತಿ ಮರುಗಣತಿಗೆ ನಿರ್ಧಾರ : ಮುಖ್ಯಮಂತ್ರಿ

KannadaprabhaNewsNetwork |  
Published : Jun 12, 2025, 01:47 AM ISTUpdated : Jun 12, 2025, 04:17 AM IST
ಸಿಕೆಬಿ-2 ಸುದ್ದಿಗೋಷ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು | Kannada Prabha

ಸಾರಾಂಶ

ಈಗಾಗಲೇ ಪರಿಶಿಷ್ಟ ಜಾತಿಗಳ ಜನಗಣತಿ ನಡೆದಂತೆ, ಇತರೆ ಜಾತಿಗಳ ಗಣತಿಯನ್ನು ಹೊಸದಾಗಿ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ. ಸಮೀಕ್ಷಾ ಕಾರ್ಯವನ್ನು 90 ದಿನದೊಳಗೆ ಪೂರ್ಣಗೊಳಿಸಿ ವರದಿ ನೀಡಬೇಕು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷದ ವರಿಷ್ಠರು ಮರುಗಣತಿ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ.

 ಚಿಕ್ಕಬಳ್ಳಾಪುರ/ಗೌರಿಬಿದನೂರು :  ಇಂದು ಕರ್ನಾಟದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗಿದೆ. ಜಾತಿಗಣತಿ ವರದಿಯನ್ನು ತಾತ್ವಿಕವಾಗಿ ಒಪ್ಪಿಕೊಳ್ಳಲಾಗುವುದು ಹಾಗೂ ಜಾತಿ ಗಣತಿಯ ದತ್ತಾಂಶ ಹತ್ತು ವರ್ಷ ಹಳೆಯದಾಗಿರುವುದರಿಂದ ಮರುಗಣತಿ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜಿಲ್ಲೆಯ ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮ ಹೆಲಿಪ್ಯಾಡ್‌ನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿ, ಈಗಾಗಲೇ ಪರಿಶಿಷ್ಟ ಜಾತಿಗಳ ಜನಗಣತಿ ನಡೆದಂತೆ, ಇತರೆ ಜಾತಿಗಳ ಗಣತಿಯನ್ನು ಹೊಸದಾಗಿ ಕೈಗೊಳ್ಳಲು ನಿರ್ಧರಿಸಲಾಗಿದೆ. ಸಮೀಕ್ಷಾ ಕಾರ್ಯವನ್ನು 90 ದಿನದೊಳಗೆ ಪೂರ್ಣಗೊಳಿಸಿ ವರದಿ ನೀಡಬೇಕಾಗುವುದು. ಈ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ಕಡಿಮೆ ಅವಧಿಯಲ್ಲಿ ಮರುಗಣತಿ ಕೈಗೊಳ್ಳಲು ಸೂಚಿಸಿದ್ದಾರೆ ಎಂದರು.

ಕಾನೂನಿಗೆ ಅಡ್ಡಿ ಮಾಡೋಲ್ಲಇಡಿ ಯವರು ದಾಳಿ ಮಾಡಿದ್ದು ಯಾವುದೇ ಕಾನೂನಿನ ಉಲ್ಲಂಘನೆಯಾಗಿದ್ದರೆ ಅದಕ್ಕೆ ನಾವು ಬೆಂಬಲಿಸುವುದಿಲ್ಲ. ಕಾನೂನು ಪ್ರಕಾರವಾಗಿ ಕ್ರಮ ಕೈಗೊಳ್ಳಲಿ. ಕಾನೂನಿನ ಅನುಷ್ಠಾನಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ತಿಳಿಸಿದರು.

ಕಾಲ್ತುಳಿತ ಪ್ರಕರಣದ ತನಿಖೆಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣದ ತನಿಖೆ ಕೈಗೊಳ್ಳಲು ಏಕ ವ್ಯಕ್ತಿ ಆಯೋಗ ರಚನೆ ಮಾಡಿದ್ದು, ಅದು 30 ದಿನಗಳಲ್ಲಿ ವರದಿ ಸಲ್ಲಿಸಲಿದೆ. ಈ ಬಗ್ಗೆ ಹೆಚ್ಚಿಗೆ ಮಾತನಾಡಲು ಇಚ್ಛಿಸುವುದಿಲ್ಲ ಎಂದರು.

ಕುಂಭ ಮೇಳದಲ್ಲಿ 40-50 ಜನ ಕಾಲ್ತುಳಿತದಲ್ಲಿ ಸತ್ತರು. ಆಗ ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಿದರೇ, ಸೇತುವೆಯೊಂದು ಉದ್ಘಾಟನೆಯಾದ ದಿನವೇ ಬಿದ್ದು 140 ಜನ ಸತ್ತರು ಆಗ ಪ್ರಧಾನಿಗಳ ರಾಜಿನಾಮೆ ಕೇಳಿದರೇ, ಗೋಧ್ರಾ ಹತ್ಯಾಕಾಂಡದಲ್ಲಿ ಎಷ್ಟು ಜನ ಸತ್ತರು. ಆಗ ಗುಜರಾತ್ ಮುಖ್ಯಮಂತ್ರಿ ಯಾರಾಗಿದ್ದರು, ಅವರ ರಾಜಿನಾಮೆ ಕೇಳಿದರೇ, ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಸರಬರಾಜು ಮಾಡದೇ 23 ಜನ ಸತ್ತಾಗ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಿದರೆ ಎಂದು ಪ್ರಶ್ನಿಸಿದರು.ರಾಜ್ಯದ ಅನುದಾನ, ಕೇಂದ್ರದ ಹೆಸರುಮೋದಿ ಆಡಳಿತದಲ್ಲಿ ದೇಶದಲ್ಲಿ ಬಡತನ ಕಡಿಮೆಯಾಗಿದೆ ಎಂಬ ವರದಿಯ ಬಗ್ಗೆ ಪ್ರತಿಕ್ರಿಯೆ ನೀಡಿ ಬಡತನ ಅವರಿಂದ ಕಡಿಮೆಯಾಗಿಲ್ಲ. ಗರೀಬಿ ಹಟಾವೋ ಸೇರಿದಂತೆ ಹಲವಾರು ಕಾರ್ಯಕ್ರಮಗಳಿಂದ ಬಡತನ ಕಡಿಮೆಯಾಗಿದೆ. ಕೇಂದ್ರ ಪುರಸ್ಕೃತ ಹಲವಾರು ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಅನುದಾನವೇ ಹೆಚ್ಚಾಗಿದ್ದರೂ ಕೇಂದ್ರ ಸರ್ಕಾರದ ಯೋಜನೆಯಂತೆ ಬಿಂಬಿಸಲಾಗುತ್ತಿದೆ ಎಂದರು.

2 ವರ್ಷಗಳಲ್ಲಿ ಎತ್ತಿನಹೊಳೆಎತ್ತಿನಹೊಳೆ ಯೋಜನೆ ಎರಡು ವರ್ಷಗಳಲ್ಲಿ ಮುಕ್ತಾಯವಾಗಬಹುದು ಎಂದು ತಿಳಿಸಿದರಲ್ಲದೇ,ಎತ್ತಿನಹೊಳೆ ಯೋಜನೆ ಕುರಿತು ಈ ಭಾಗದ ಸಚಿವರು, ಶಾಸಕರು, ಹಾಗೂ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ ಎಂದರು. ಈ ವೇಳೆ ಇಂಧನ ಸಚಿವ ಕೆ.ಜೆ.ಜಾರ್ಜ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕರಾದ ಕೆ.ಹೆಚ್.ಪುಟ್ಟಸ್ವಾಮಿಗೌಡ, ಪ್ರದೀಪ್ಈಶ್ವರ್, ಎಸ್.ಎನ್.ಸುಬ್ಬಾರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್, ಎಂಎಲ್ ಸಿ ಅನಿಲ್ ಕುಮಾರ್, ಎಚ್ ನರಸಿಂಹಯ್ಯ ಪ್ರಾಧಿಕಾರದ ಅಧ್ಯಕ್ಷ ಶಿವಶಂಕರ್ ರೆಡ್ಡಿ, ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ಮತ್ತಿತರರು ಇದ್ದರು.

PREV
Read more Articles on

Recommended Stories

ಕಾರ್ಮಿಕರು ಒಪ್ಪಿದ್ರೆ 10 ಗಂಟೆ ಕೆಲಸಕ್ಕೆ ಓಕೆ : ಲಾಡ್‌
‘ಸಾವಿರಾರು ಶವ ಹೂಳಲು ಧರ್ಮಸ್ಥಳ ಗ್ರಾಮದಲ್ಲಿ ಮಹಾಭಾರತ ಯುದ್ಧ ನಡೆದಿಲ್ಲ’