ಒಪಿಎಸ್ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆಗೆ ತೀರ್ಮಾನ

KannadaprabhaNewsNetwork |  
Published : Jun 28, 2026, 03:15 AM IST
ಹಾವೇರಿ ಜಿಲ್ಲಾ ಗುರುಭವನದಲ್ಲಿ ಒಪಿಎಸ್ ಜಾರಿ ಕುರಿತು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಪಿಂಚಣಿಗೋಸ್ಕರ ಪ್ರತಿಭಟನೆ ಕರಪತ್ರಗಳನ್ನು ಪದಾಧಿಕಾರಿಗಳು ಬಿಡುಗಡೆಗೊಳಿಸಿದರು. | Kannada Prabha

ಸಾರಾಂಶ

ಒಪಿಎಸ್ ಜಾರಿ ಮಾಡುವ ಕುರಿತು ನಗರದ ಜಿಲ್ಲಾ ಗುರುಭವನದಲ್ಲಿ ಶನಿವಾರ ಮಧ್ಯಾಹ್ನ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಪಿಂಚಣಿಗೋಸ್ಕರ ಬೃಹತ್ ಪ್ರತಿಭಟನೆ ನಡೆಸುವುದರ ಬಗ್ಗೆ ಅಂತಿಮವಾಗಿ ತೀರ್ಮಾನವನ್ನು ತೆಗೆದುಕೊಳ್ಳಲಾಯಿತು.

ಹಾವೇರಿ: ಒಪಿಎಸ್ ಜಾರಿ ಮಾಡುವ ಕುರಿತು ನಗರದ ಜಿಲ್ಲಾ ಗುರುಭವನದಲ್ಲಿ ಶನಿವಾರ ಮಧ್ಯಾಹ್ನ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಪಿಂಚಣಿಗೋಸ್ಕರ ಬೃಹತ್ ಪ್ರತಿಭಟನೆ ನಡೆಸುವುದರ ಬಗ್ಗೆ ಅಂತಿಮವಾಗಿ ತೀರ್ಮಾನವನ್ನು ತೆಗೆದುಕೊಳ್ಳಲಾಯಿತು.

ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ನೇತೃತ್ವದಲ್ಲಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪಿಂಚಣಿಗೋಸ್ಕರ ಪ್ರತಿಭಟನೆ ಹಮ್ಮಿಕೊಳ್ಳುವ ಬಗ್ಗೆ ಒಕ್ಕೊರಲಿನ ಅಭಿಪ್ರಾಯ ವ್ಯಕ್ತವಾಯಿತು. ಜು.4ರಿಂದ ತಾಲೂಕಾ ಹಂತದಲ್ಲಿ, ಜು.18ರಂದು ಜಿಲ್ಲಾ ಹಂತದಲ್ಲಿ ಹಾಗೂ ಆ.1ರಂದು ರಾಜ್ಯ ಮಟ್ಟದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಯಿತು. ಎಲ್ಲ ಹಂತದ ಪ್ರತಿಭಟನೆಗಳನ್ನು ಕೇಂದ್ರ ಸಮಿತಿಯ ನಿರ್ದೇಶನದಂತೆ ಯಶಸ್ವಿಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಆರ್.ಎಚ್. ಬೆಟ್ಟಳ್ಳೇರ, ಸಹ ಶಿಕ್ಷಕ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಶಾಂತಗಿರಿ, ಪ್ರೌಢ ಶಾಲಾ ಮಂಡಳಿಯ ಅಧ್ಯಕ್ಷ ಎಂ.ಎಸ್. ಕೆಂಚನಗೌಡ್ರ, ಪದವಿ ಪೂರ್ವ ಉಪನ್ಯಾಸಕ ಸಂಘದ ರಾಜ್ಯ ಉಪಾಧ್ಯಕ್ಷ ಸಂಗಾಪುರ ಮತ್ತು ಅನುದಾನಿತ ಪದವಿ ಪೂರ್ವ ಸಂಘದ ಜಿಲ್ಲಾಧ್ಯಕ್ಷ ಗಚ್ಚಿನ ಮತ್ತು ಪದವಿಪೂರ್ವ ಉಪನ್ಯಾಸಕ ಸಂಘದ ಅಧ್ಯಕ್ಷ ಎಸ್.ಎಸ್.ನಿಸ್ಸೀಮಗೌಡ್ರ, ಎಸ್.ಎಲ್. ಕಾಡದೇವರಮಠ, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜ, ಪಿಂಚಣಿ ವಂಚಿತ ನೌಕರರ ಸಂಘದ ಅಧ್ಯಕ್ಷ ಜಿ. ಹನುಮಂತಪ್ಪ, ದೈಹಿಕ ಶಿಕ್ಷಕ ಸಂಘದ ಜಿಲ್ಲಾಧ್ಯಕ್ಷ ಗ್ಯಾನಗೌಡ್ರ, ಹೊಸಗೌಡ್ರ, ಶಂಕರ್ ಸೇರಿದಂತೆ ತಾಲೂಕು ಹಂತಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಪದಾಧಿಕಾರಿಗಳು ಹಾಗೂ ಮುಖ್ಯೋಪಾಧ್ಯಾಯರುಗಳು ಪಾಲ್ಗೊಂಡಿದ್ದರು.

ಜಿಲ್ಲಾ ಕಾರ್ಯದರ್ಶಿ ಎನ್.ಎನ್. ಕುಂದೂರು ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮ ನಿರ್ವಹಿಸಿದರು. ಎಂ.ಬಿ. ರಮೇಶ ಸ್ವಾಗತಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚರಂಡಿ ಸಮಸ್ಯೆಗೆ ರಸ್ತೆ ತಡೆ ಪ್ರತಿಭಟನೆ
ಹಾವೇರಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಕಲಾಪ ಸ್ಥಗಿತ, ತಪಾಸಣೆ ನಡೆಸಿದ ಪೊಲೀಸರು