ಸಂಭ್ರಮದ ರಾಜ್ಯೋತ್ಸವ ಆಚರಣೆಗೆ ನಿರ್ಧಾರ: ಇಕ್ರಂ ಶರೀಫ್

KannadaprabhaNewsNetwork |  
Published : Oct 24, 2026, 01:15 AM IST
 | Kannada Prabha

ಸಾರಾಂಶ

Decision taken to celebrate Rajyotsava with great enthusiasm: Ikram Shariff

ಸುರಕ್ಷತೆಗೆ ಆದ್ಯತೆ ನೀಡಿ

--

-ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆ

--

ಕನ್ನಡಪ್ರಭ ವಾರ್ತೆ ಕಲಬುರಗಿ

ಬರುವ ನವೆಂಬರ್ 1 ರಂದು ಜಿಲ್ಲೆಯಾದ್ಯಂತ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ಇಕ್ರಂ ಶರೀಫ್ ತಿಳಿಸಿದ್ದಾರೆ.ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿ ವರ್ಷದಂತೆ ಈ ಬಾರಿಯೂ ನವೆಂಬರ್ 1 ರಂದ ಬೆಳಿಗ್ಗೆ 9 ಗಂಟೆಗೆ ಗಂಜ್‌ ಪ್ರದೇಶದ ನಗರೇಶ್ವರ ಶಾಲಾ ಮೈದಾನದಲ್ಲಿ ನಾಡ‌ದೇವತೆ ಶ್ರೀ ಭುವನೇಶ್ವರಿ ದೇವಿಯ ಪೂಜೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ.

ಶಿಷ್ಠಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರೆವೇರಿಸಿ ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ.

ಕಾರ್ಯಕ್ರಮ ವ್ಯವಸ್ಥಿತವಾಗಿ ಸಂಘಟಿಸಬೇಕು. ಕಾರ್ಯಕ್ರಮ‌ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚಿಸಿ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗುತ್ತದೆ.

ಅಧಿಕಾರಿಗಳು ತಮಗೆ ನೀಡಲಾದ ಜವಾಬ್ದಾರಿಯನ್ನು ಯಾವುದೇ ಲೋಪವಿಲ್ಲದೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಇಕ್ರಂ ಶರೀಫ್ ಹೇಳಿದರು.

ನಗರೇಶ್ವರ ಶಾಲಾ ಆವರಣ ಸಂಪೂರ್ಣ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಶಾಲಾ-ಕಾಲೇಜು ಮಕ್ಕಳು ಆಗಮಿಸುವುದರಿಂದ ಶ್ಯಾಮಿಯಾನ ಹಾಕಬೇಕು. ಕುಡಿಯುವ ನೀರಿನ ವ್ಯವಸ್ಥೆ, ಆಸನದ ವ್ಯವಸ್ಥೆ ಮಾಡಬೇಕು. ನಗರೇಶ್ವರ ಶಾಲೆಯಿಂದ ರಂಗಮಂದಿರದ ವರೆಗೆ ಮೆರವಣಿಗೆ ಸಾಗಲಿರುವುದರಿಂದ ಸಾರ್ವಜನಿಕರಿಗೆ ಯಾವುದೇ ಸಂಚಾರ ದಟ್ಟಣೆಯಾಗದಂತೆ ಸೂಕ್ತ ಟ್ರಾಫಿಕ್ ಮ್ಯಾನೇಜ್‍ಮೆಂಟ್ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಡಿ.ಸಿ. ನಿರ್ದೇಶಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು.

ತುರ್ತು ಪರಿಸ್ಥಿತಿ ಎದುರಿಸಲು ಆರೋಗ್ಯ ಇಲಾಖೆಯ ಸಿಬ್ಬಂದಿ, ಆಂಬುಲೆನ್ಸ್ ಹಾಗೂ ಅಗ್ನಿಶಾಮಕ ವಾಹನಗಳನ್ನು ಸಿದ್ಧ ಸ್ಥಿತಿಯಲ್ಲಿಡಲು ಸೂಚಿಸಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಡಿ.ಸಿ.ಪಿ ಶಾಲು, ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ಮಹೇಶ ಮೇಘಣ್ಣನವರ್, ಕಲಬುರಗಿ ಉಪ ವಿಭಾಗದ ಸಹಾಯಕ ಆಯುಕ್ತರಾದ ರಿತಿಕಾ ವರ್ಮಾ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೆಲಮಂಗಲ ತಾಲೂಕಲ್ಲಿ ಶೇ. 98 ಶಾಂತಿಯುತ ಮತದಾನ
ಅರವಿಂದ್ ಲಿಮಿಟೆಡ್ ಅರಸೀಕೆರೆ ಘಟಕಕ್ಕೆ ಪ್ರಶಸ್ತಿ