ರಾಣಿ ಚೆನ್ನಮ್ಮನ ಜಯಂತಿ ಅದ್ಧೂರಿಯಾಗಿ ಆಚರಿಸಲು ನಿರ್ಧಾರ

KannadaprabhaNewsNetwork |  
Published : Oct 27, 2026, 02:30 AM IST
ಪೊಟೋ- ಲಕ್ಷ್ಮೇಶ್ವರದ ಪಂಚಮಸಾಲಿ ಸಂಘದ ಅಡಿಯಲ್ಲಿ ಕಿತ್ತೂರು ರಾಣಿ ಚನ್ನಮ್ಮನ ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ. ಈ ವೇಳೆ ಮಂಜುನಾಥ ಮಾಗಡಿ ಮಾತನಾಡಿದರು.  | Kannada Prabha

ಸಾರಾಂಶ

ತಾಲೂಕಾ ಘಟಕದ ಅಧ್ಯಕ್ಷ ಮಂಜುನಾಥ ಮಾಗಡಿ ಅಧ್ಯಕ್ಷತೆಯಲ್ಲಿ ಭಾನುವಾರ ಸಂಜೆ ತಾಲೂಕಾ ಘಟಕದ ಪದಾಧಿಕಾರಿಗಳ ಸಭೆ ಹಾಗೂ ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತ್ಯುತ್ಸವ ಆಚರಣೆಯ ಕುರಿತ ಪೂರ್ವಭಾವಿ ಸಭೆ ಜರುಗಿತು.

ತಾಲೂಕಾ ಘಟಕದ ಪದಾಧಿಕಾರಿಗಳ ಸಭೆ, ಚೆನ್ನಮ್ಮ ಜಯಂತ್ಯುತ್ಸವ ಆಚರಣೆಯ ಕುರಿತ ಪೂರ್ವಭಾವಿ ಸಭೆ

ಕನ್ನಡಪ್ರಭ ವಾರ್ತೆ ಲಕ್ಷ್ಮೇಶ್ವರ

ತಾಲೂಕಾ ಘಟಕದ ಅಧ್ಯಕ್ಷ ಮಂಜುನಾಥ ಮಾಗಡಿ ಅಧ್ಯಕ್ಷತೆಯಲ್ಲಿ ಭಾನುವಾರ ಸಂಜೆ ತಾಲೂಕಾ ಘಟಕದ ಪದಾಧಿಕಾರಿಗಳ ಸಭೆ ಹಾಗೂ ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತ್ಯುತ್ಸವ ಆಚರಣೆಯ ಕುರಿತ ಪೂರ್ವಭಾವಿ ಸಭೆ ಜರುಗಿತು.

ಈ ವೇಳೆ ತಾಲೂಕಾ ಘಟಕದ ಪ್ರ. ಕಾರ್ಯದರ್ಶಿ ನಾಗರಾಜ ಚಿಂಚಲಿ, ಸಂಘಟನಾ ಕಾರ್ಯದರ್ಶಿ ಮಂಜುನಾಥ ಗೌರಿ ಮಾತನಾಡಿ, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಲಕ್ಷ್ಮೇಶ್ವರ ತಾಲೂಕಾ ಘಟಕದ ಅಧ್ಯಕ್ಷರಾಗಿ ಮಂಜುನಾಥ ಮಾಗಡಿ ಕಳೆದ ೫ ವರ್ಷಗಳಲ್ಲಿ ಸಮಾಜ ಸಂಘಟನೆಗಾಗಿ ತನು ಮನ ಧನದಿಂದ ಸೇವೆ ಮಾಡಿದ್ದಾರೆ. ಗ್ರಾಮ ಘಟಕಗಳನ್ನು ಸಂಘಟಿಸಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಇದು ಸಮಾಜದವರಿಗೂ ಗೊತ್ತು ಮತ್ತು ದಾಖಲೆಗಳೂ ಇವೆ.

ಸಮಾಜ ಬಾಂಧವರ ಮನೆಯಲ್ಲಿ ಚೆನ್ನಮ್ಮನ ಮನೆ, ಇತರೇ ಸಮಾಜ ಬಾಂಧವರ ಮನೆಯಲ್ಲಿ ಹರ ಮನೆ ಕಾರ್ಯಕ್ರಮ, ಧರ್ಮ, ಸಮಾಜ ಜಾಗೃತಿ, ಚನ್ನಮ್ಮನ ಜಯಂತೋತ್ಸವ ಸೇರಿ ಅನೇಕ ಕಾರ್ಯ ಮಾಡಿದ್ದಾರೆ. ಆ ಮೂಲಕ ಲಕ್ಷ್ಮೇಶ್ವರ ತಾಲೂಕಾ ಘಟಕ ರಾಜ್ಯದಲ್ಲಿಯೇ ಅತ್ಯಂತ ಕ್ರಿಯಾಶೀಲ, ಸಂಘಟನಾ ಶೀಲ ಸಂಘ ಎಂದು ಗುರುತಿಸಿಕೊಂಡಿದೆ. ಅವರ ಅಧ್ಯಕ್ಷತೆಯಲ್ಲಿಯೇ ಈ ವರ್ಷವೂ ಅತ್ಯಂತ ಅರ್ಥಪೂರ್ಣವಾಗಿ ವೀರರಾಣಿ ಕಿತ್ತೂರು ಚೆನ್ನಮ್ಮನ ಜಯಂತ್ಯುತ್ಸವ ಜರುಗಲಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲೂಕಾ ಘಟಕದ ಅಧ್ಯಕ್ಷ ಮಂಜುನಾಥ ಮಾಗಡಿ, ನ.೨೨ರಂದು ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳು ಸೇರಿ ಅನೇಕ ಹರಗುರುಚರ ಮೂರ್ತಿಗಳ ಸಾನಿಧ್ಯದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮನ ಜಯಂತ್ಯುತ್ಸವ ಮತ್ತು ವಿಜಯೋತ್ಸವ ಕಾರ್ಯಕ್ರಮ ಮಾಡಲಾಗುತ್ತದೆ. ಕಾರ್ಯಕ್ರಮಕ್ಕೆ ರಾಜ್ಯ ಸಂಘದ ಅಧ್ಯಕ್ಷರು ಸೇರಿ ಎಲ್ಲ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಲಕ್ಷ್ಮೇಶ್ವರ, ಶಿರಹಟ್ಟಿ, ಮುಂಡರಗಿ ಸೇರಿ ಜಿಲ್ಲೆಯಾದ್ಯಂತ ಇರುವ ಸಮಾಜ ಬಾಂಧವರು ಪಾಲ್ಗೊಳ್ಳಲಿದ್ದಾರೆ. ನನ್ನ ಅಧಿಕಾರಾವಧಿಯಲ್ಲಿ ತಾಲೂಕಾ ಸಂಘದ ಅಧ್ಯಕ್ಷನಾಗಿ ಅತ್ಯಂತ ಪ್ರಮಾಣಿಕ ಸೇವೆ ಸಲ್ಲಿಸಿದ್ದೇನೆ. ಜನವರಿ ತಿಂಗಳಲ್ಲಿ ರಾಜ್ಯ ಸಂಘದ ನಿರ್ದೇಶನದಂತೆ ಹೊಸ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬು ಬೆಳೆಗಾರರ ಸಭೆ ವಿಫಲ: ಪರಿಹಾರವಿಲ್ಲ
ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ ₹215 ಕೋಟಿ ಅಭಿವೃದ್ಧಿ ಯೋಜನೆ!