ಕನ್ನಡರಾಜ್ಯೋತ್ಸವದಲ್ಲಿ ಕನ್ನಡ ವಿದ್ಯಾರ್ಥಿಗಳ ಸನ್ಮಾನಕ್ಕೆ ನಿರ್ಧಾರ

KannadaprabhaNewsNetwork |  
Published : Oct 24, 2026, 01:45 AM IST
23ಎಚ್ಎಸ್ಎನ್3 : ಚನ್ನರಾಯಪಟ್ಟಣದ ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿದರು. ತಹಶೀಲ್ದಾರ್ ಜಿ.ಎಸ್. ಶಂಕರಪ್ಪ, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. | Kannada Prabha

ಸಾರಾಂಶ

ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸುವುದು, ಕನ್ನಡ ಅಧ್ಯಯನಕ್ಕೆ ಪ್ರೋತ್ಸಾಹ ನೀಡುವುದು ಹಾಗೂ ಕನ್ನಡ ವಿ?ಯದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯ ಮಹತ್ವವನ್ನು ಯುವ ಪೀಳಿಗೆಗೆ ಪರಿಚಯಿಸುವುದರೊಂದಿಗೆ, ವಿದ್ಯಾರ್ಥಿಗಳು ಕನ್ನಡದಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಲು ಪ್ರೇರಣೆ ನೀಡಬೇಕು ಎಂದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಕನ್ನಡ ವಿಷಯದಲ್ಲಿ ಶೇ. ೧೦೦ರಷ್ಟು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು ಎಂದು ಶಾಸಕ ಸಿ. ಎನ್. ಬಾಲಕೃಷ್ಣ ತಿಳಿಸಿದರು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿಯಾಗಿ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸುವುದು, ಕನ್ನಡ ಅಧ್ಯಯನಕ್ಕೆ ಪ್ರೋತ್ಸಾಹ ನೀಡುವುದು ಹಾಗೂ ಕನ್ನಡ ವಿ?ಯದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯ ಮಹತ್ವವನ್ನು ಯುವ ಪೀಳಿಗೆಗೆ ಪರಿಚಯಿಸುವುದರೊಂದಿಗೆ, ವಿದ್ಯಾರ್ಥಿಗಳು ಕನ್ನಡದಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಲು ಪ್ರೇರಣೆ ನೀಡಬೇಕು ಎಂದರು.ಕನ್ನಡ ನಾಡು, ನುಡಿ, ನೆಲ ಮತ್ತು ಜಲದ ಗೌರವವನ್ನು ಕಾಪಾಡುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ. ಕರ್ನಾಟಕದ ಶ್ರೀಮಂತ ಇತಿಹಾಸ, ಭವ್ಯ ಸಂಸ್ಕೃತಿ ಹಾಗೂ ಪರಂಪರೆಯನ್ನು ಸ್ಮರಿಸುವುದರ ಜತೆಗೆ ಅವುಗಳನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಸಂಕಲ್ಪದೊಂದಿಗೆ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಬೇಕು ಎಂದು ಹೇಳಿದರು.ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರನ್ನು ಗುರುತಿಸಿ ಸನ್ಮಾನಿಸಲಾಗುವುದು. ರಂಗಭೂಮಿ, ಸಾಹಿತ್ಯ, ಕೃಷಿ, ಕಲೆ, ಕ್ರೀಡೆ, ರಕ್ಷಣಾ, ಆರೋಗ್ಯ, ಪೌರಸೇವೆ ಹಾಗೂ ಆಟೋ ಚಾಲನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರನ್ನು ಗೌರವಿಸಲು ಕ್ರಮ ಕೈಗೊಳ್ಳಲಾಗುವುದು. ಪಟ್ಟಣದಾದ್ಯಂತ ಕನ್ನಡ ಧ್ವಜಗಳನ್ನು ಹಾರಿಸುವುದರೊಂದಿಗೆ ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಬೇಕು. ಕನ್ನಡದ ಹಬ್ಬವನ್ನು ಎಲ್ಲರೂ ಒಗ್ಗಟ್ಟಿನಿಂದ ಸಂಭ್ರಮದಿಂದ ಆಚರಿಸಬೇಕು ಎಂದು ತಿಳಿಸಿದರು.ಪಟ್ಟಣದ ಪೊಲೀಸ್ ಠಾಣೆ ಎದುರಿನ ಮಾಧ್ಯಮಿಕ ಶಾಲಾ ಆವರಣದಲ್ಲಿ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಹಾಗೂ ಉಪಾಹಾರದ ವ್ಯವಸ್ಥೆ ಕಲ್ಪಿಸಲಾಗುವುದು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಸ್ತಬ್ಧಚಿತ್ರಗಳೊಂದಿಗೆ ತಾಯಿ ಭುವನೇಶ್ವರಿಯ ಭಾವಚಿತ್ರವನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಗುವುದು ಎಂದರು.ಕನ್ನಡಪರ, ರೈತಪರ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ತಾಲೂಕು ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ರಾಜ್ಯೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ತಹಸೀಲ್ದಾರ್‌ ಜಿ. ಎಸ್. ಶಂಕರಪ್ಪ ಮಾತನಾಡಿ, ಕನ್ನಡ ರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ಸಿದ್ಧಪಡಿಸಿರುವ ರೂಪುರೇಷೆಗಳನ್ನು ಸಭೆಯ ಗಮನಕ್ಕೆ ತಂದು, ಕಾರ್ಯಕ್ರಮದ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು.

ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಸ್. ಸತೀಶ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಕೆ.ಟಿ. ಆನಂದ್, ಪುರಸಭಾ ಮಾಜಿ ಅಧ್ಯಕ್ಷ ಸಿ. ಎನ್. ಮೋಹನ್, ಎಪಿಸಿಎಂಎಸ್‌ನ ನಿರ್ದೇಶಕ ಅನಿಲ್ ಮರಗೂರು, ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಕರವೇ ಜಿಲ್ಲಾ ಉಪಾಧ್ಯಕ್ಷ ಗಣೇಶ್‌ ಗೌಡ, ಕೆಂಪೇಗೌಡ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಆನಂದ್ ಕಾಳೇನಹಳ್ಳಿ, ಕರುನಾಡು ವೇದಿಕೆ ರಾಜಾಧ್ಯಕ್ಷ ಶರತ್ ಗೌಡ, ಕರವೇ ಜಿಲ್ಲಾ ಸಂಚಾಲಕ ಧರ್ಮರಾಜ್, ಭೂಮಿ ಕ್ಷೇಮಾಭಿವೃದ್ಧಿ ಸಂಘದ ಗೌ. ಅಧ್ಯಕ್ಷ ರಾಜಕುಮಾರ್‌, ರಾಜೇಶ್ ಕೆಂಚನಹಳ್ಳಿ, ಮಹಾದೇವ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ಉಜ್ವಲ ಭವಿಷ್ಯ ರೂಪಿಸಲು ಪೋಷಕರು ಪಣ ತೊಡಬೇಕು: ನಯನಾ ಮೋಟಮ್ಮ
ಮತದಾನ ಕೇಂದ್ರಗಳಿಗೆ ಸಚಿವ ಕೆ.ಎಸ್.ಬಸವಂತಪ್ಪ ಭೇಟಿ