ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಒತ್ತಾಯಿಸಿ ಪ್ರಬಲ ಹೋರಾಟಕ್ಕೆ ತೀರ್ಮಾನ

KannadaprabhaNewsNetwork |  
Published : Oct 10, 2026, 02:15 AM IST
ಫೋಟೋ ವಿವರ- (9ಎಚ್‌ಪಿಟಿ1) ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಒತ್ತಾಯಿಸಿ ಹೋರಾಟ ರೂಪಿಸುವ ಕುರಿತು ಸ್ಥಳೀಯ ಎಪಿಎಂಸಿ ಆವರಣದಲ್ಲಿ ವಿವಿಧ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು | Kannada Prabha

ಸಾರಾಂಶ

ಕಾರ್ಖಾನೆ ಸ್ಥಾಪನೆ ಆಗುವ ವರೆಗೆ ಪ್ರಬಲ ಹೋರಾಟ ರೂಪಿಸಬೇಕು. ಸರ್ಕಾರದ ಗಮನ ಸೆಳೆಯಲು ಹೊಸಪೇಟೆ ಬಂದ್ ಸೇರಿದಂತೆ ಜಿಲ್ಲೆಗೆ ಆಗಮಿಸುವ ಸಚಿವರಿಗೆ ಮುತ್ತಿಗೆ ಹಾಕುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಹೊಸಪೇಟೆ: ಈ ಭಾಗದ ರೈತರ ಬಹುದಿನಗಳ ಬೇಡಿಕೆಯಾದ ಸಕ್ಕರೆ ಕಾರ್ಖಾನೆಯನ್ನು ಸ್ಥಾಪಿಸುವ ಕುರಿತಂತೆ ನಗರದಲ್ಲಿ ನಡೆದ ವಿವಿಧ ಸಂಘಟನೆಗಳ ಮುಖಂಡರನ್ನು ಒಳಗೊಂಡ ಹೋರಾಟ ಸಮಿತಿ ಸಭೆಯಲ್ಲಿ ಪ್ರಬಲ ಹೋರಾಟ ರೂಪಿಸಲು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಸ್ಥಳೀಯ ಎಪಿಎಂಸಿ ಆವರಣದಲ್ಲಿರುವ ಸಮುದಾಯ ಭವನದಲ್ಲಿ ಹೋರಾಟ ಸಮಿತಿ ಸಭೆ ನಡೆಯಿತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಥಳೀಯ ಶಾಸಕ ಎಚ್.ಆರ್. ಗವಿಯಪ್ಪ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಈ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸುವ ಭರವಸೆ ನೀಡಿದ್ದರು. ಆದರೆ ಅಧಿಕಾರಕ್ಕೆ ಬಂದು ಮೂರೂವರೆ ವರ್ಷಗಳು ಕಳೆದರೂ ಸಕ್ಕರೆ ಕಾರ್ಖಾನೆ ಆರಂಭವಾಗದ ಹಿನ್ನೆಲೆಯಲ್ಲಿ ಶಾಸಕರ ನಿವಾಸದ ಎದುರು ಪ್ರತಿಭಟನೆ ನಡೆಸುವಂತೆ ಹಲವು ಸಂಘಟನೆಗಳ ಮುಖಂಡರು ಒತ್ತಾಯಿಸಿದರು.

ಕಾರ್ಖಾನೆ ಸ್ಥಾಪನೆ ಆಗುವ ವರೆಗೆ ಪ್ರಬಲ ಹೋರಾಟ ರೂಪಿಸಬೇಕು. ಸರ್ಕಾರದ ಗಮನ ಸೆಳೆಯಲು ಹೊಸಪೇಟೆ ಬಂದ್ ಸೇರಿದಂತೆ ಜಿಲ್ಲೆಗೆ ಆಗಮಿಸುವ ಸಚಿವರಿಗೆ ಮುತ್ತಿಗೆ ಹಾಕುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಅ. 12ರಂದು ಹೋರಾಟದ ರೂಪುರೇಷೆ ಪ್ರಕಟ: ಸಭೆಯ ನಂತರ ಸುದ್ದಿಗಾರರೊಂದಿಗೆ ಸಕ್ಕರೆ ಕಾರ್ಖಾನೆ ಹೋರಾಟ ಸಮಿತಿ ಮುಖಂಡ ಮರಡಿ ಜಂಬಯ್ಯ ನಾಯಕ ಮಾತನಾಡಿ, ಈ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಒತ್ತಾಯಿಸಿ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಪ್ರಬಲ ಹೋರಾಟ ರೂಪಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಂದಿನ ಹೋರಾಟದ ರೂಪುರೇಷೆಗಳ ಕುರಿತು ಅ. 12ರಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಲಾಗುವುದು. ಸಕ್ಕರೆ ಕಾರ್ಖಾನೆ ಆರಂಭವಾಗುವ ವರೆಗೆ ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದರು.

ರೈತ ಮುಖಂಡರಾದ ಖಾಜಾ ಹುಸೇನ್ ನಿಯಾಜಿ, ದುರುಗಪ್ಪ, ಜೈರುದ್ದೀನ್, ಟಿ. ನಾಗರಾಜ, ಸಣ್ಣಕ್ಕಿ ರುದ್ದಪ್ಪ, ಎಂ. ಜಡೆಪ್ಪ, ಆರ್.ಆರ್. ತಾಯಪ್ಪ, ದೊಡ್ಡ ಗಾಳೆಪ್ಪ, ವಿವಿಧ ಸಂಘ ಸಂಸ್ಥೆಗಳ ಮುಖಂಡರಾದ ಆರ್. ಭಾಸ್ಕರ್ ರೆಡ್ಡಿ, ಕಿಚಿಡಿ ಶ್ರೀನಿವಾಸ, ಬಿ. ತಾಯಪ್ಪ ನಾಯಕ, ಎಸ್.ಎಸ್. ಚಂದ್ರಶೇಖರ್, ಕೆ.ಎಂ. ಸಂತೋಷ್ ಕುಮಾರ್, ಎನ್. ಯಲ್ಲಾಲಿಂಗ, ಕೆ. ನಾಗರತ್ನಮ್ಮ, ಕೆ.ಎಂ. ಪುಷ್ಪಾ, ಎಸ್. ಗಾಳೆಪ್ಪ, ಜಾಕೀರ್ ಹುಸೇನ್, ವೈ. ಯಮುನೇಶ್, ಪಿ. ವೆಂಕೋಬ ನಾಯಕ, ವೈ. ರಾಮಚಂದ್ರ ಬಾಬು, ಕೃಷ್ಣ ಮೊದಲಿಯಾರ್, ಬಿ. ಮಹೇಶ್ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಡು ಕಂಡ ಅಪ್ರತಿಮ ಶಿವಯೋಗಿಗಳಲ್ಲಿ ಕುಮಾರ ಶಿವಯೋಗಿಗಳು ಒಬ್ಬರು: ಶೇಖರಯ್ಯ ಶಾಸ್ತ್ರೀಗಳು
ಬೆಣಚಮಟ್ಟಿ ಗ್ರಾಮದ ಕೆರೆಯಲ್ಲಿ ಅಕ್ರಮ ಮರಳುಗಾರಿಕೆ