ಚೆನ್ನಮ್ಮ, ಕನಕ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ

KannadaprabhaNewsNetwork |  
Published : Oct 16, 2026, 03:00 AM IST
ಅ.23ರಂದು ಕಿತ್ತೂರು ರಾಣಿ ಚೆನ್ನಮ್ಮ, ನ. 11ರಂದು ಒನಕೆ ಓಬವ್ವ ಹಾಗೂ ನ. 27ರಂದು ಕನಕದಾಸ ಜಯಂತಿ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಕಿತ್ತೂರು ರಾಣಿ ಚೆನ್ನಮ್ಮ, ವೀರವನಿತೆ ಒನಕೆ ಓಬವ್ವ ಹಾಗೂ ಕನಕದಾಸರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಸೂಚಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಕಿತ್ತೂರು ರಾಣಿ ಚೆನ್ನಮ್ಮ, ವೀರವನಿತೆ ಒನಕೆ ಓಬವ್ವ ಹಾಗೂ ಕನಕದಾಸರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅ.23ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ, ನವೆಂಬರ್‌ 11ರಂದು ಒನಕೆ ಓಬವ್ವ ಜಯಂತಿ ಹಾಗೂ ನ.27ರಂದು ಕನಕದಾಸ ಜಯಂತಿಯನ್ನು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಿಳಿಸಿದರು.

ಅ.23ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅಂಗವಾಗಿ ಅಂದು ಬೆಳಗ್ಗೆ 9.30ಕ್ಕೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಯಲಿದೆ. ನಂತರ ವೇದಿಕೆ ಕಾರ್ಯಕ್ರಮದ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ನ.11ರಂದು ಒನಕೆ ಓಬವ್ವ ಜಯಂತಿ ಅಂಗವಾಗಿ ರಂಗಮಂದಿರದಲ್ಲಿ ಒನಕೆ ಓಬವ್ವ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ, ವಿಶೇಷ ಉಪನ್ಯಾಸ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಅವರ ಅಪ್ರತಿಮ ಸಾಹಸ ಹಾಗೂ ಶೌರ್ಯ ಅವರ ಜೀವನಾದರ್ಶಗಳನ್ನು ತಿಳಿಸಿಕೊಡಲಾಗುವುದು ಎಂದು ಹೇಳಿದರು.

ನ.27ರಂದು ಕನಕದಾಸ ಜಯಂತಿ ಅಂಗವಾಗಿ ಅಂದು ಬೆಳಗ್ಗೆ 9ಕ್ಕೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ಗೊಂಬೆ ಕುಣಿತ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ ಕನಕದಾಸರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ರಂಗಮಂದಿರದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮ, ವಿಶೇಷ ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಮಹನೀಯರ ಶೌರ್ಯ, ಭಕ್ತಿ, ಸಾಹಿತ್ಯ ಹಾಗೂ ಸಾಮಾಜಿಕ ಸಮಾನತೆಯ ಸಂದೇಶಗಳನ್ನು ಜನರಿಗೆ ತಲುಪಿಸುವುದು ಜಯಂತಿಗಳ ಆಚರಣೆಯ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ, ರಾಜಶೇಖರ ದೈವಾಡಿ, ನಿರ್ಮಲಾ ಸುರಪುರ, ಬಿ.ಎಂ.ಪಾಟೀಲ, ಅಡಿವೆಪ್ಪ ಸಾಲಗಲ್, ಮಲ್ಲಣ್ಣ ಬಿದರಿ, ರಾಜು ಕಗ್ಗೊಡ, ಸತೀಶಕುಮಾರ, ಸಿದ್ದು ಧನಗೊಂಡ, ಮಲ್ಲಣ್ಣ ಶಿರಶ್ಯಾಳ, ಸಿದ್ದರಾಮ ಶಿರಶ್ಯಾಡ ಸೇರಿದಂತೆ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲಾಕೃತಿಗಳ ಸಂರಕ್ಷಣೆ ಎಲ್ಲರ ಜವಾಬ್ದಾರಿ: ಡಾ.ವಸುಂಧರಾ
371ಜೆ ಧರಣಿ ಸತ್ಯಾಗ್ರಹ: ವಕೀಲರ ಬೆಂಬಲ