ಕೋಲಿ ಸಮಾಜದ ಸಮಾವೇಶ ಬಹಿಷ್ಕರಿಸಲು ನಿರ್ಧಾರ: ರಾಮಲಿಂಗ ಬಾನರ್‌

KannadaprabhaNewsNetwork |  
Published : Feb 03, 2024, 01:47 AM IST
ಚಿತ್ತಾಪುರ ಪಟ್ಟಣದ ಅಂಬಿಗರ ಚೌಡಯ್ಯ ಭವನದಲ್ಲಿ ಕೊಲಿ ಸಮಾಜದ ತಾಲೂಕು ಅಧ್ಯಕ್ಷ ರಾಮಲಿಂಗ ಬಾನರ್ ಅಧ್ಯಕ್ಷತೆಯಲ್ಲಿ ಫೆ.೨೫ ರಂದು ಕಲಬುರಗಿಯಲ್ಲಿ ಹಮ್ಮಿಕೊಂಡಿರುವ ಸಮಾವೇಶ ಬಹಿಷ್ಕರಿಸುವ ವಿಷಯದ ಕುರಿತು ಸುದ್ದಿಗೊಷ್ಟಿ ನಡೆಯಿತು. | Kannada Prabha

ಸಾರಾಂಶ

ಚಿತ್ತಾಪುರ ಪಟ್ಟಣದ ಅಂಬಿಗರ ಚೌಡಯ್ಯ ಭವನದಲ್ಲಿ ಕೋಲಿ ಸಮಾಜದ ತಾಲೂಕು ಅಧ್ಯಕ್ಷ ರಾಮಲಿಂಗ ಬಾನರ್ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿ ನಡೆಯಿತು.

ಕನ್ನಡಪ್ರಭ ವಾರ್ತೆ ಚಿತ್ತಾಪುರ

ಕೋಲಿ ಸಮಾಜ ಎಸ್ಟಿ ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿ ಫೆ.೨೫ರಂದು ಕಲಬುರಗಿಯಲ್ಲಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ನೇತೃತ್ವದಲ್ಲಿ ನಡೆಯಲಿರುವ ಸಮಾವೇಶವನ್ನು ಚಿತ್ತಾಪುರ ತಾಲೂಕು ಕೋಲಿ ಸಮಾಜವು ಬಹಿಷ್ಕರಿಸುವುದಾಗಿ ತಾಲೂಕು ಕೋಲಿ ಸಮಾಜದ ಅಧ್ಯಕ್ಷ ರಾಮಲಿಂಗ ಬಾನರ್ ಹೇಳಿದರು.

ಪಟ್ಟಣದ ಅಂಬಿಗರ ಚೌಡಯ್ಯ ಭವನದಲ್ಲಿ ಸಮಾವೇಶ ಕುರಿತಾಗಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಲಿ ಸಮಾಜ ಎಸ್ಟಿ ಸೇರ್ಪಡೆಗಾಗಿ ಆಯೋಜನೆ ಮಾಡಿರುವ ಸಮಾಜವೇಶವನ್ನು ಇಡೀ ಸಮಾಜದ ಜನರ, ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ನಿರ್ಧಾರವನ್ನು ತೆಗೆದುಕೊಂಡು ಸಮಾಜ ನನ್ನ ಹಿಂದೆ ಇದೆ ಎಂದು ಬಿಂಬಿಸಿಕೊಂಡು ಸಮಾಜದ ದಾರಿಯನ್ನು ತಪ್ಪಿಸುವ ಕೆಲಸವನ್ನು ಕಮಕನೂರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮುಖಂಡರಾದ ಹಣಮಂತ ಸಂಕನೂರ, ಬಸವರಾಜ ಚಿಣಮಳ್ಳೊ, ಸುರೇಶ ಬೆನಕನಹಳ್ಳಿ, ಭೀಮಣ್ಣ ಹೊತಿನಮಡಿ, ನಿಂಗಣ್ಣ ಹೆಗಲೇರಿ, ಬಸಣ್ಣ ತಳವಾರ, ಗುರುನಾಥ ಗುದಗಲ್, ಮುನಿಯಪ್ಪ ಕೊಳ್ಳಿ, ನಾಗೇಂದ್ರ ಜೈಗಂಗಾ, ದಶರಥ ದೊಡ್ಮನಿ, ವೆಂಕಟರಮಣ ಬೇವಿನಗಿಡ, ಶಿವಕುಮಾರ ಯಾಗಾಪುರ, ಕರಣಕುಮಾರ ಅಲ್ಲೂರ, ತಮ್ಮಣ್ಣ ಡಿಗ್ಗಿ, ಮಲ್ಲಿಕಾರ್ಜುನ ಸಂಗಾವಿ, ಲಕ್ಷ್ಮಿಕಾಂತ ಸಾಲಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಂಗ್ರೆಸ್ ನಾಯಕತ್ವ ಬಿಕ್ಕಟ್ಟು ಕ್ಲೈಮ್ಯಾಕ್ಸ್‌ನತ್ತ : ಜಾರಕಿಹೊಳಿ
ಸರ್ಕಾರಿ ಕಾಮಗಾರಿಗೆ ಅನುಮತಿಸಲು ಲಂಚ ಸ್ವೀಕಾರ- ಶಾಸಕ ಲೋಕಾ ಬಲೆಗೆ!