21ರಂದು ಅಂಬಿಗರ ಚೌಡಯ್ಯ ಜಯಂತಿ ಆಚರಣೆಗೆ ನಿರ್ಧಾರ- ಎಸಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ

KannadaprabhaNewsNetwork |  
Published : Jan 09, 2024, 02:00 AM IST
8ಕೆಪಿಎಲ್23ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಲಾಗಿದ್ದ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆ | Kannada Prabha

ಸಾರಾಂಶ

ಸರ್ಕಾರ ನಿಗದಿಪಡಿಸಿದಂತೆ ಜ. 21ರಂದು ಜಿಲ್ಲಾ ಕೇಂದ್ರದಲ್ಲಿ ಹಾಗೂ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ, ತಾಲೂಕು ಕಚೇರಿ, ಶಾಲಾ, ಕಾಲೇಜು ವಸತಿ ನಿಲಯಗಳಲ್ಲಿ ಜಯಂತಿ ಆಚರಿಸಲಾಗುತ್ತದೆ. ಕಾರ್ಯಕ್ರಮಕ್ಕೆ ಸಮಾಜದ ಬಂಧುಗಳ ಸಹಕಾರವೂ ಅಗತ್ಯವಿದೆ.

ಕೊಪ್ಪಳ: ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಜ. 21ರಂದು ಆಚರಿಸಲಾಗುವ ಶ್ರೀ ಅಂಬಿಗರ ಚೌಡಯ್ಯ ಅವರ ಜಯಂತಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸುವ ಜತೆಗೆ ಅರ್ಥಪೂರ್ಣ ಆಚರಣೆಗೆ ಕ್ರಮವಹಿಸಿ ಎಂದು ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಹೇಳಿದರು.ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಲಾಗಿದ್ದ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರ ನಿಗದಿಪಡಿಸಿದಂತೆ ಜ. 21ರಂದು ಜಿಲ್ಲಾ ಕೇಂದ್ರದಲ್ಲಿ ಹಾಗೂ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ, ತಾಲೂಕು ಕಚೇರಿ, ಶಾಲಾ, ಕಾಲೇಜು ವಸತಿ ನಿಲಯಗಳಲ್ಲಿ ಜಯಂತಿ ಆಚರಿಸಲಾಗುತ್ತದೆ. ಕಾರ್ಯಕ್ರಮಕ್ಕೆ ಸಮಾಜದ ಬಂಧುಗಳ ಸಹಕಾರವೂ ಅಗತ್ಯವಿದೆ. ಜಿಲ್ಲಾಡಳಿತದೊಂದಿಗೆ ಸಹಕರಿಸಿ ವ್ಯವಸ್ಥಿತ ಕಾರ್ಯಕ್ರಮಕ್ಕೆ ಸಮಾಜದ ಬಂಧುಗಳು ಅನುಕೂಲ ಮಾಡಿಕೊಡಬೇಕು. ಹಾಗೆಯೇ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಇಲಾಖೆಗಳು ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಹೇಳಿದರು.ಜ. 21ರಂದು ಬೆಳಗ್ಗೆ 8.30ಕ್ಕೆ ನಗರದ ಸಿರಸಪ್ಪಯ್ಯನಮಠದಿಂದ ಗಡಿಯಾರ ಕಂಬ ಮಾರ್ಗವಾಗಿ ಸಾಹಿತ್ಯ ಭವನದ ವರೆಗೆ ಅಂಬಿಗರ ಚೌಡಯ್ಯ ಅವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಕಲಾತಂಡಗಳು ಭಾಗವಹಿಸುತ್ತವೆ. ಬೆಳಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಮೆರವಣಿಗೆ ಸಾಗುವ ಮಾರ್ಗ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸಾಹಿತ್ಯ ಭವನದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆ ಕಲ್ಪಿಸಬೇಕು. ವೇದಿಕೆ ಅಲಂಕಾರ, ಗಣ್ಯರಿಗೆ ಪುಸ್ತಕ ವಿತರಣೆ, ಪೂಜೆಗೆ ಹೂವು, ಹಾರಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಒದಗಿಸಬೇಕು. ಪೊಲೀಸ್ ಇಲಾಖೆಯಿಂದ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸಾಹಿತ್ಯ ಭವನದಲ್ಲಿ ಸೂಕ್ತ ಬಂದೋಬಸ್ತ್ ಒದಗಿಸಬೇಕು. ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ, ಗಣ್ಯರ ಆಹ್ವಾನಕ್ಕೆ ತಹಸೀಲ್ದಾರರು ಕ್ರಮ ವಹಿಸಬೇಕು. ಉಳಿದಂತೆ ಸಂಬಂಧಿಸಿದ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಜಯಂತಿ ಆಚರಣೆಗೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಹೇಳಿದರು.

ವೇದಿಕೆ ಕಾರ್ಯಕ್ರಮದಲ್ಲಿ ನಾಡಗೀತೆ, ಸುಗಮ ಸಂಗೀತಕ್ಕೆ ಕಲಾವಿದರು ಹಾಗೂ ಉಪನ್ಯಾಸ ನೀಡಲು ಉಪನ್ಯಾಸಕರನ್ನು ಸಮಾಜದ ಬೇಡಿಕೆ ಹಾಗೂ ಅವರ ಸಲಹೆಯಂತೆ ಅವರು ಸೂಚಿಸಿದವರನ್ನು ಆಹ್ವಾನಿಸಬೇಕು. ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸುವ ಕಾರಣ ಯಾವುದೇ ರೀತಿಯ ಅನನುಕೂಲವಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಅವರು ಸೂಚಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಸಮಾಜದ ಜಿಲ್ಲಾಧ್ಯಕ್ಷ ಸೋಮಣ್ಣ ಬಾರಕೇರ, ತಾಲೂಕಾಧ್ಯಕ್ಷ ಹುಲಗಪ್ಪ ಬಾರಕೇರ, ತಾಲೂಕು ಕಾರ್ಯದರ್ಶಿ ರಾಜಾ ಕಲೆಗಾರ, ಸಮಾಜದ ಮುಖಂಡರಾದ ಮಾರ್ಕಂಡೆಪ್ಪ ಪೂಜಾರ, ಕೃಷ್ಣಪ್ಪ ಕಬ್ಬೇರ, ಯಮನಪ್ಪ ಕಬ್ಬೇರ, ಗಂಗಾಧರ ಹಾಗೂ ಸಮಾಜದ ಪ್ರಮುಖರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ
ರೈಲ್ವೆ ಯೋಜನೆಗೆ ಭೂಮಿ ನೀಡಲು ರಾಜ್ಯ ಹಿಂದೇಟು