ಕನ್ನಡಪ್ರಭ ವಾರ್ತೆ ಬೇಲೂರು
ಒಕ್ಕಲಿಗರ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ , ನಾಡಪ್ರಭು ಕೆಂಪೇಗೌಡರು ಕನ್ನಡ ನಾಡಿನ ಶ್ರೇಷ್ಠ ಆಡಳಿತಗಾರರು, ದೂರದೃಷ್ಟಿಯ ನಾಯಕರು ಹಾಗೂ ಸಮಾಜದ ಏಳಿಗೆಗಾಗಿ ಶ್ರಮಿಸಿದ ಮಹನೀಯರು. ಅವರ ಆದರ್ಶಗಳು ಮತ್ತು ಕೊಡುಗೆಗಳನ್ನು ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಪ್ರತಿವರ್ಷ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಹಾಸನದ ಆದಿಚುಂಚನಗಿರಿ ಶಾಖಾ ಮಠ ಶಂಭುನಾಥ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಸೇತುವೆ ಬಳಿಯಿಂದ ಬೆಳ್ಳಿರಥದಲ್ಲಿ ಮೆರವಣಿಗೆ ಮೂಲಕ ಸ್ವಾಮೀಜಿಗಳನ್ನು ಕರೆತರಲಾಗುವುದು. ಬಳಿಕ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿ, ಒಕ್ಕಲಿಗ ಸಮುದಾಯ ಭವನದಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.
ಶಾಸಕ ಎಚ್.ಕೆ. ಸುರೇಶ್ ಅವರ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಒಕ್ಕಲಿಗ ಸಮುದಾಯದ ಮುಖಂಡರು, ಯುವಕರು, ಮಹಿಳೆಯರು ಹಾಗೂ ಸಮಾಜದ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸ್ಮರಣಾರ್ಥ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ.ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಭರತ್, ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ಭಾರತಿ ಗೌಡ, ಅರ್ಬನ್ ಬ್ಯಾಂಕ್ ಅಧ್ಯಕ್ಷ ಪೇಂಟ್ ರವಿ , ಸಮಾಜದ ಮುಖಂಡರಾದ ಸಿ.ಎಂ. ಪೃಥ್ವಿ, ಸತೀಶ್, ನಾರಾಯಣ, ಭರತ್, ಪುಟ್ಟಸ್ವಾಮಿಗೌಡ, ದೀಪು, ಸತ್ಯನಾರಾಯಣ, ಗಣೇಶ್, ಒಕ್ಕಲಿಗ ನೌಕರರ ಸಂಘದ ಅಧ್ಯಕ್ಷ ರಮೇಶ್, ಗೌರವಾಧ್ಯಕ್ಷ ಕಾಂತರಾಜು ಹಲವರು ಉಪಸ್ಥಿತರಿದ್ದರು.