ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ
ಪಟ್ಟಣದ ಬಾಲಕಿಯರ ಪ್ರೌಢಶಾಲೆಯ ಆವರಣದಲ್ಲಿ ನ. 1ರಂದು ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಅದಕ್ಕೂ ಮೊದಲು ಪಟ್ಟಣದ ಚಿತ್ರಾವತಿ ನದಿ ತೀರದಿಂದ ಪಟ್ಟಣದ ಮುಖ್ಯ ರಸ್ತೆಯಲ್ಲಿ ಭುವನೇಶ್ವರಿ ಭಾವಚಿತ್ರದೊಂದಿಗೆ ಮೆರವಣಿಗೆಯನ್ನು ವಿವಿಧ ಕಲಾತಂಡಗಳೊಂದಿಗೆ ಅದ್ಧೂರಿಯಾಗಿ ನಡೆಸಲು ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಯಿತು.
ಉತ್ಸವಕ್ಕೆ ಶಾಸಕರ ಅಧ್ಯಕ್ಷತೆಪಟ್ಟಣದ ವಿವಿಧ ಸಂಘ ಸಂಸ್ಥೆ ಹಾಗೂ ಸಂಘಟನೆ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ನೇತೃತ್ವದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ರವರ ಅಧ್ಯಕ್ಷತೆಯಲ್ಲಿ ಕನ್ನಡ ರಾಜ್ಯೋತ್ಸವ ನಡೆಯಲಿದೆ ಎಂದ ಅವರು ಕನ್ನಡ ರಾಜ್ಯೋತ್ಸವ ಆಚರಣೆ ಅಂಗವಾಗಿ ಪಟ್ಟಣದ ಎಲ್ಲ ಅಂಗಡಿಗಳ ಮಾಲೀಕರು ಸ್ವಯಂಪ್ರೇರಿತರಾಗಿ ಕನ್ನಡ ಬಾವುಟವನ್ನು ಹಾರಿಸುವ ಮೂಲಕ ನಾಡಿನ ಉತ್ಸವಕ್ಕೆ ಮೆರುಗು ತರುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 10 ಜನ ಸಾಧಕರನ್ನು ಗುರುತಿಸಿ ಸನ್ಮಾನಿಸುವುದು, ಬಾಗೇಪಲ್ಲಿ ಪಟ್ಟಣದ ಚಿತ್ರಮಂದಿರಗಳಲ್ಲಿ ನವೆಂಬರ್ ತಿಂಗಳಲ್ಲಿ ಕನ್ನಡ ಸಿನೆಮಾ ಚಲನ ಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಬೇಕು. ಪ್ರತಿಭಾವಂತ ಮಕ್ಕಳಿಗೆ ಸನ್ಮಾನಿಸುವುದು ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.