ಜೂ.27ರಂದು ಅದ್ಧೂರಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಗೆ ನಿರ್ಧಾರ

KannadaprabhaNewsNetwork |  
Published : Jun 23, 2025, 11:51 PM IST
23ಕೆಎಂಎನ್ ಡಿ14 | Kannada Prabha

ಸಾರಾಂಶ

ಕೆಂಪೇಗೌರ ಬೆಂಗಳೂರು ಇಂದು ಕೆಂಪೇಗೌಡರ ಪರಿಕಲ್ಪನೆಯನ್ನು ಮೀರಿ ಬೆಳೆದು ಅಂತಾರಾಷ್ಟ್ರೀಯ ಭೂಪಟದಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಇಂತಹ ಮಹಾನ್ ನಾಯಕ ಕೇವಲ ಒಕ್ಕಲಿಗರ ಪ್ರತಿನಿಧಿಯಲ್ಲ. ಸಮಸ್ತ ಸಮುದಾಯಗಳ ಔನತ್ಯಕ್ಕೆ ಶ್ರಮಿಸಿದ ಕೆಂಪೇಗೌಡರು ರಾಜಪ್ರಭುತ್ವಕ್ಕೆ ಆದರ್ಶಪ್ರಾಯರು.

ಕನ್ನಡಪ್ರಭವಾರ್ತೆ ಕೆ.ಆರ್.ಪೇಟೆ

ತಾಲೂಕು ನಾಡಹಬ್ಬಗಳ ಆಚರಣಾ ಸಮಿತಿಯಿಂದ ಜೂ.27ರಂದು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಯಿತು.

ಪಟ್ಟಣದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸಂಘ-ಸಂಸ್ಥೆಗಳ ಪೂರ್ವಭಾವಿ ಸಭೆಯಲ್ಲಿ ಶಾಸಕ ಎಚ್.ಟಿ.ಮಂಜು ಮಾತನಾಡಿ, ನಾಡಪ್ರಭು ಕೆಂಪೇಗೌಡರು ಒಬ್ಬ ಆದರ್ಶ ನಾಯಕ. ಜಾತ್ಯತೀತ ತಳಹದಿಯ ಮೇಲೆ ಆಡಳಿತ ನಡೆಸಿದ ಕೆಂಪೇಗೌಡರ ದೂರದೃಷ್ಟಿಯ ಫಲವಾಗಿ ಬೆಂಗಳೂರು ನಗರ ನಿರ್ಮಾವಾಗಿದೆ ಎಂದರು.

ಕೆಂಪೇಗೌರ ಬೆಂಗಳೂರು ಇಂದು ಕೆಂಪೇಗೌಡರ ಪರಿಕಲ್ಪನೆಯನ್ನು ಮೀರಿ ಬೆಳೆದು ಅಂತಾರಾಷ್ಟ್ರೀಯ ಭೂಪಟದಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಇಂತಹ ಮಹಾನ್ ನಾಯಕ ಕೇವಲ ಒಕ್ಕಲಿಗರ ಪ್ರತಿನಿಧಿಯಲ್ಲ. ಸಮಸ್ತ ಸಮುದಾಯಗಳ ಔನತ್ಯಕ್ಕೆ ಶ್ರಮಿಸಿದ ಕೆಂಪೇಗೌಡರು ರಾಜಪ್ರಭುತ್ವಕ್ಕೆ ಆದರ್ಶಪ್ರಾಯರು ಎಂದರು.

ಕೆಂಪೇಗೌಡರ ಜಯಂತಿಯಲ್ಲಿ ಎಲ್ಲಾ ಸಮುದಾಯಗಳು ಭಾಗಿಯಾಗಬೇಕು. ಈ ದಿಕ್ಕಿನಲ್ಲಿ ಅಧಿಕಾರಿಗಳು ಮತ್ತು ಸಭೆಯಲ್ಲಿ ಭಾಗವಹಿಸಿರುವ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಶ್ರಮಿಸೋಣ ಎಂದರು.

ಪಟ್ಟಣದ ತಾಲೂಕು ಆಡಳಿತ ಸೌಧದ ಹೊರಾಂಗಣದ ಬಯಲಿನಲ್ಲಿ ಕೆಂಪೇಗೌಡರ ಜಯಂತಿ ವೇದಿಕೆ ನಿರ್ಮಿಸಲು ಸಭೆ ತೀರ್ಮಾನಿಸಿತು. ಪಟ್ಟಣದ ಪ್ರವಾಸಿ ಮಂದಿರ ವೃತ್ತದಿಂದ ಕಾರ್ಯಕ್ರಮದ ಮುಖ್ಯ ವೇದಿಕೆಯವರೆಗೆ ವಿವಿಧ ಜಾನಪದ ಕಲಾ ತಂಡಗಳ ಪ್ರದರ್ಶನದ ಮೂಲಕ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲು ಸಭೆ ನಿರ್ಧರಿಸಿತು.

ಸಭೆಯಲ್ಲಿ ತಹಸೀಲ್ದಾರ್ ಡಾ.ಎಸ್.ಯು.ಅಶೋಕ್, ತಾಪಂ ಇಒ ಕೆ.ಸುಷ್ಮಾ, ಪುರಸಭೆ ಅಧ್ಯಕ್ಷೆ ಪಂಕಜ ಪ್ರಕಾಶ್, ಪುರಸಭೆ ಮುಖ್ಯಾಧಿಕಾರಿ ನಟರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಕೆ.ತಿಮ್ಮೇಗೌಡ, ಗ್ರಾಮಾಂತರ ಪೊಲೀಸ್ ನಿರೀಕ್ಷಕ ಆನಂದೇಗೌಡ, ಸಿಡಿಪಿಎ ವಿದ್ಯಾವತಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ದಿವಾಕರ್, ನೀರಾವರಿ ಇಲಾಖೆ ಎಂಜಿನಿಯರ್ ಚಂದ್ರೇಗೌಡ, ಸರ್ಕರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಕೆ.ಆರ್.ದಿನೇಶ್, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ನಾಗರಾಜು, ವಲಯ ಅರಣ್ಯಾಧಿಕಾರಿ ಅನಿತಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ತಾಲೂಕು ಒಕ್ಕಲಿಗರ ಹಿತರಕ್ಷನಾ ಸಮಿತಿಯ ಅಧ್ಯಕ್ಷ ನಾಟನಹಳ್ಳಿ ಗಂಗಾಧರ, ಒಕ್ಕಲಿಗರ ಸಂಘದ ಅಧ್ಯಕ್ಷ ಶಿವರಾಮೇಗೌಡ, ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಆರ್.ಪೂರ್ಣಚಂದ್ರ ತೇಜಸ್ವಿ, ತಾಲೂಕು ಕಸಾಪ ಮಾಜಿ ಅಧ್ಯಕ್ಷ ಎಂ.ಕೆ.ಹರಿಚರಣತಿಲಕ್, ಮಾತೃಭೂಮಿ ವೃದ್ದಾಶ್ರಮದ ಸಂಸ್ಥಾಪಕ ಜೈಹಿಂದ್ ನಾಗಣ್ಣ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎ.ಬಿ.ಕುಮಾರ್, ಕರವೇ ಅಧ್ಯಕ್ಷ ಶ್ರೀನಿವಾಸ್, ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಸೋಮಶೇಖರ್, ನಯನಜ ಕ್ಷತ್ರೀಯ ಸಮಾಜದ ಅಧ್ಯಕ್ಷ ಕೆ.ಎಂ.ಶಿವಪ್ಪ ಸೇರಿದಂತೆ ಹಲವರು ಇದ್ದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌