ವಾಲ್ಮೀಕಿ ಜಯಂತಿ ಅದ್ಧೂರಿ ಆಚರಣೆಗೆ ನಿರ್ಧಾರ: ಎಡಿಸಿ ಶೀಲವಂತ ಶಿವಕುಮಾರ್

KannadaprabhaNewsNetwork |  
Published : Oct 06, 2025, 01:00 AM IST
ಕ್ಯಾಪ್ಷನ19ಕೆಡಿವಿಜಿ40 ದಾವಣಗೆರೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ ಅಧ್ಯಕ್ಷತೆಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ನಡೆಯಿತು. | Kannada Prabha

ಸಾರಾಂಶ

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣ ಮತ್ತು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಅಧಿಕಾರಿಗಳು ಅಗತ್ಯ ಸಿದ್ದತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ದಾವಣಗೆರೆ

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣ ಮತ್ತು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಅಧಿಕಾರಿಗಳು ಅಗತ್ಯ ಸಿದ್ದತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಕ್ಟೋಬರ್ 7 ರಂದು ನಡೆಯುವ ವಾಲ್ಮೀಕಿ ಜಯಂತಿ ಅಂಗವಾಗಿ ನಗರದ ಹೊಂಡದ ಸರ್ಕಲ್‌ನಲ್ಲಿನ ರಾಜವೀರ ಮದಕರಿ ನಾಯಕ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿ, ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರದೊಂದಿಗೆ ಮೆರವಣಿಗೆ ಪ್ರಾರಂಭವಾಗಿ ವಿವಿಧ ಕಲಾತಂಡಗಳೊಂದಿಗೆ ನಗರದ ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ಶ್ರೀ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪ ತಲುಪಲಿದ್ದು, ತದನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಸರ್ಕಾರದ ಶಿಷ್ಠಚಾರದಂತೆ ಜನಪ್ರತಿನಿಧಿಗಳು ಮತ್ತು ಎಲ್ಲಾ ಗಣ್ಯ ವ್ಯಕ್ತಿಗಳನ್ನು ಆಹ್ವಾನಿಸಬೇಕು. ನುರಿತ ಉಪನ್ಯಾಸಕರಿಂದ ಮಹರ್ಷಿ ವಾಲ್ಮೀಕಿ ಕುರಿತು ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

ಕಲ್ಯಾಣ ಮಂಟಪದ ಮುಂಭಾಗದಲ್ಲಿ ಸ್ವಾಗತ ಫಲಕ, ಕುರ್ಚಿಗಳ ವ್ಯವಸ್ಥೆ, ಧ್ವನಿ ವರ್ಧಕ , ಬ್ಯಾಕ್ ಡ್ರಾಪ್, ಹೂವಿನ ಅಲಂಕಾರ , ಉಪನ್ಯಾಸ, ಕುಡಿಯುವ ನೀರಿನ ವ್ಯವಸ್ಥೆ, ಲಘು ಉಪಹಾರದ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಕಾರ್ಯಕ್ರಮಕ್ಕೆ ಹೆಚ್ಚು ಪ್ರಚಾರ ನೀಡಲು ನಗರದ ಎಲ್ಲಾ ಪ್ರಮುಖ ವೃತ್ತಗಳಲ್ಲಿ ಬ್ಯಾನರ್‌ಗಳನ್ನು ಅಳವಡಿಸಬೇಕು ಮತ್ತು ಕಾರ್ಯಕ್ರಮಕ್ಕೂ ಮುನ್ನ ಮದಕರಿ ಸರ್ಕಲ್‌ನಿಂದ ಶ್ರೀ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದವರೆಗೆ ವಿವಿಧ ಕಲಾತಂಡಗಳೊಂದಿಗೆ ವಿಜೃಂಭಣೆ ಮೆರವಣಿಗೆ ಏರ್ಪಡಿಸಬೇಕು ಎಂದು ಸಮಾಜದ ಮುಖಂಡೊಬ್ಬರು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಪರ ಜಿಲ್ಲಾಧಿಕಾರಿ ಸಕಾರಾತ್ಮಕವಾಗಿ ಸ್ಪಂದಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್, ದೂಡಾ ಆಯುಕ್ತ ಹುಲಿಮನಿ ತಿಮ್ಮಣ್ಣ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ರೇಣುಕಾದೇವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ, ಪರಿಶಿಷ್ಟ ವರ್ಗಗಳ ಇಲಾಖೆಯ ಅಧಿಕಾರಿ ನವೀನ್ ಮಠದ್, ಸಮುದಾಯದ ಮುಖಂಡರಾದ ಬಿ.ವೀರಣ್ಣ, ಹೇಮಣ್ಣ, ಜಿ.ಎಂ.ಸತೀಶ್, ವಿಜಯಶ್ರೀ ಇತರರು ಹಾಜರಿದ್ದರು.

PREV

Recommended Stories

8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ