ಕರ್ನಾಟಕದ ಒಂಭತ್ತು ವಿಶ್ವವಿದ್ಯಾನಿಲಯ ಮುಚ್ಚಲು ತೀರ್ಮಾನ: ಬಿಜೆಪಿ ಶಿಕ್ಷಣ ಪ್ರಕೋಷ್ಠ ಖಂಡನೆ

KannadaprabhaNewsNetwork |  
Published : Mar 04, 2025, 12:30 AM IST
32 | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ಸರ್ಕಾರ 9 ವಿಶ್ವವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ಹುನ್ನಾರ ನಡೆಸುತ್ತಿರುವುದು ಖಂಡನೀಯ ಎಂದು ಬಿಜೆಪಿ ಶಿಕ್ಷಣ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಮುರಳಿ ಹೊಸಮಜಲು ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ರಾಜ್ಯ ಸರ್ಕಾರ 9 ವಿಶ್ವವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ಹುನ್ನಾರ ನಡೆಸುತ್ತಿರುವುದು ಖಂಡನೀಯ ಎಂದು ಬಿಜೆಪಿ ಶಿಕ್ಷಣ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಮುರಳಿ ಹೊಸಮಜಲು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭಿಸಿದ 10 ಹೊಸ ವಿವಿಗಳ ಪೈಕಿ ಹಾಸನ, ಚಾಮರಾಜನಗರ, ಕೊಡಗು ಸಹಿತ 9 ವಿವಿಗಳನ್ನು ಮುಚ್ಚುವ ಪ್ರಯತ್ನ ನಡೆಸಲಾಗುತ್ತಿದ್ದು, ಬೀದರ್‌ ವಿವಿಯನ್ನು ಮಾತ್ರ ಉಳಿಸಲು ಸರ್ಕಾರ ನಿರ್ಧರಿಸಿದೆ. ಸೂಕ್ತ ಸೌಲಭ್ಯಗಳ ಕೊರತೆ ಹಾಗೂ ಹಣಕಾಸಿನ ಮುಗ್ಗಟ್ಟು ವಿವಿಗಳನ್ನು ಮುಚ್ಚಲು ಕಾರಣ ಎಂದು ಸಮಿತಿ ತಿಳಿಸಿರುವುದು ನಾಚಿಕೆಗೇಡು ಎಂದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಕ್ಯಾ.ಗಣೇಶ್‌ ಕಾರ್ಣಿಕ್‌ ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿನ ಶಿಕ್ಷಣ ಸಚಿವ ಡಾ. ಅಶ್ವಥ್‌ ನಾರಾಯಣ ಕಲ್ಪನೆಯಂತೆ ಜಿಲ್ಲೆಗೊಂದು ವಿವಿ ಆರಂಭಿಸಲಾಗಿತ್ತು. ಆದರೆ ಈಗಿನ ಕಾಂಗ್ರೆಸ್‌ ಸರ್ಕಾರ ಶಿಕ್ಷಣದ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದೆ ಎಂದು ಆರೋಪಿಸಿದರು.

ವಿವಿಗಳನ್ನು ಆದಾಯ ತರುವ ದೇಗುಲಗಳಂತೆ ನೋಡದೆ ಸಾಮಾಜಿಕ ಬೆಳವಣಿಗೆಗೆ ವಿದ್ಯಾಭ್ಯಾಸದ ಮಟ್ಟವನ್ನು ಉನ್ನತೀಕರಿಸುವ ವಿದ್ಯಾ ದೇಗುಲಗಳನ್ನಾಗಿ ನೋಡಬೇಕು. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಸರ್ಕಾರ ನಿರಾಕರಿಸಬಾರದು ಎಂದು ಕ್ಯಾ.ಕಾರ್ಣಿಕ್‌ ಆಗ್ರಹಿಸಿದರು. ಬಿಜೆಪಿ ಜಿಲ್ಲಾ ವಕ್ತಾರ ರಾಜ್‌ಗೋಪಾಲ ರೈ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚನ್ನಬಸವ ಶ್ರೀ ಇಡೀ ಮನುಕುಲ ಪ್ರೀತಿಸುವ ಗುಣದವರು
ಮಕ್ಕಳಲ್ಲಿ ಪರಿಸರ ಜ್ಞಾನ ಮೂಡಿಸುತ್ತಿರುವ ಪ್ರಶಂಸಾರ್ಹ: ಎಂ.ಎನ್.ಪಾಟೀಲ