ಬಲಿಜ ಸಂಘ ಸಮುದಾಯಭವನ ನಿರ್ಮಾಣಕ್ಕೆ ನಿರ್ಧಾರ

KannadaprabhaNewsNetwork |  
Published : Jun 17, 2025, 12:24 AM ISTUpdated : Jun 17, 2025, 12:25 AM IST
 ಬಲಿಜ ಸಂಘದ ಸಭೆ | Kannada Prabha

ಸಾರಾಂಶ

ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಂಘದ ಹೆಸರಿನಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲು ತೀರ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಂಘದ ಹೆಸರಿನಲ್ಲಿ ಸಮುದಾಯಭವನ ನಿರ್ಮಾಣ ಮಾಡಲು ತೀರ್ಮಾನಿಸಲಾಯಿತು.

ಮೂರ್ನಾಡಿನ ಬಲಮುರಿ ರಸ್ತೆಯಲ್ಲಿರುವ ಗಣೇಶ್ ಬಿಲ್ಡಿಂಗ್‌ನಲ್ಲಿ ಭಾನುವಾರ ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಂಘದ ಜಿಲ್ಲಾಧ್ಯಕ್ಷ ಟಿ.ಜಿ.ಗಣೇಶ್ ನಾಯ್ಡು ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಂಘವನ್ನು ಮೊದಲು ಟ್ರಸ್ಟ್ ಆಗಿ ನೋಂದಣಿ ಮಾಡಿಕೊಳ್ಳಬೇಕು ಸಂಘದ ಸಂಘದ ನಿರ್ದೇಶಕರು ಸಲಹೆ ನೀಡಿದರು.

ನಂತರ ಸಭೆಯಲ್ಲಿ ಸದಸ್ಯರ ಶಿಕ್ಷಣ ಅಭಿವೃದ್ಧಿ, ಸದಸ್ಯರ ಆರ್ಥಿಕ ಅಭಿವೃದ್ಧಿ, ಜನಾಂಗಬಾಂಧವರ ಪ್ರತಿಭೆ ವ್ಯಕ್ತಪಡಿಸಲು ಸೂಕ್ತ ವೇದಿಕೆ ಕಲ್ಪಿಸಲು ವಿವಿಧ ಆಯೋಜನೆ ಕುರಿತು ಚರ್ಚೆ ನಡೆಸಲಾಯಿತು. ಇದೇ ಬಡತನದಲ್ಲಿರುವ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕಲ್ಪಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಶಿಕ್ಷಣ ಇಲಾಖೆಯಿಂದ ಮಾಹಿತಿ ಪಡೆದು ವಿದ್ಯಾರ್ಥಿ ವೇತನ ನೀಡುವಂತೆ ನಿರ್ಧರಿಸಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಟಿ.ಜಿ.ಗಣೇಶ್ ನಾಯ್ಡು ಅವರು, ಬಲಿಜ ಸಮಾಜದ ಏಳಿಗೆಗಾಗಿ ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಂಘ ಅಸ್ಥಿತ್ವಕ್ಕೆ ತರಲಾಗಿದೆ. ಪ್ರಸ್ತುತ ಸಂಘದಲ್ಲಿ 40 ಜನರು ಸದಸ್ಯತ್ವ ಪಡೆದುಕೊಂಡಿದ್ದು, ಮುಂದಿನ ಒಂದು ವರ್ಷದಲ್ಲಿ 1000 ಸದಸ್ಯತ್ವ ನೋಂದಣಿ ಮಾಡುವ ಗುರಿಯಿದೆ. ಇದಕ್ಕೆ ಸಮಾಜಬಾಂಧವರು ದೂ.ಸಂ: 9591756257 ಸಂಖ್ಯೆಯನ್ನು ಸಂಪರ್ಕಿಸಿ ಸದಸ್ಯತ್ವ ಪಡೆದುಕೊಳ್ಳುವಂತೆ ಪ್ರತಿಯೊಬ್ಬರು ಸಹಕರಿಸಬೇಕು ಎಂದರು.

ಇತ್ತೀಚೆಗೆ ಗುಜರಾತ್‌ನಲ್ಲಿ ನಡೆದ ವಿಮಾನ ಅಪಘಾತದಲ್ಲಿ ಮಡಿದವರಿಗೆ ಮೌನಾಚರಣೆ ಮಾಡಲಾಯಿತು. ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಆರ್.ಸುಬ್ರಮಣಿ, ಖಜಾಂಚಿ ಟಿ.ಎ.ಪ್ರಕಾಶ್, ಸದಸ್ಯರಾದ ಟಿ.ಆರ್.ಗಣೇಶ್, ನಿರ್ದೇಶಕರಾದ ಪೇಮಲತನಾಯ್ಡು, ಸುಬ್ರಮಣಿ, ಮೀನಾಕ್ಷಿ, ಕೇಶವ, ಲೋಕನಾಥ್, ಸುಮದಿನೇಶ್, ಇದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ