ಗ್ರಾಮಗಳ ಉಳಿವು ಹೋರಾಟ ಸಮಿತಿ ಅಸ್ತಿತ್ವಕ್ಕೆ ತಂದು ಹೋರಾಟಕ್ಕೆ ತೀರ್ಮಾನ

KannadaprabhaNewsNetwork |  
Published : Jun 22, 2025, 11:47 PM IST
22ಕೆಎಂಎನ್ ಡಿ16 | Kannada Prabha

ಸಾರಾಂಶ

ಮದ್ದೂರು ನಗರಸಭೆ ವ್ಯಾಪ್ತಿಗೆ ತಾಲೂಕಿನ ಗೆಜ್ಜಲಗೆರೆ, ಸೋಮನಹಳ್ಳಿ, ಗೊರವನಹಳ್ಳಿ ಗ್ರಾಮ ಪಂಚಾಯ್ತಿಗಳನ್ನು ಸೇರ್ಪಡೆ ಮಾಡುವುದನ್ನು ವಿರೋಧಿಸಿ ಗ್ರಾಮಗಳ ಉಳಿವು ಹೋರಾಟ ಸಮಿತಿ ಅಸ್ತಿತ್ವಕ್ಕೆ ತರುವ ಮೂಲಕ ಬೃಹತ್ ಹೋರಾಟ ನಡೆಸಲು ಭಾನುವಾರ ನಡೆದ ಜನಪ್ರತಿನಿಧಿಗಳು ಮತ್ತು ರೈತರ ಸಭೆಯಲ್ಲಿ ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಯಿತು.

ಕನ್ನಡಪ್ರಭ ವಾರ್ತೆ ಮದ್ದೂರು

ನಗರಸಭೆ ವ್ಯಾಪ್ತಿಗೆ ತಾಲೂಕಿನ ಗೆಜ್ಜಲಗೆರೆ, ಸೋಮನಹಳ್ಳಿ, ಗೊರವನಹಳ್ಳಿ ಗ್ರಾಮ ಪಂಚಾಯ್ತಿಗಳನ್ನು ಸೇರ್ಪಡೆ ಮಾಡುವುದನ್ನು ವಿರೋಧಿಸಿ ಗ್ರಾಮಗಳ ಉಳಿವು ಹೋರಾಟ ಸಮಿತಿ ಅಸ್ತಿತ್ವಕ್ಕೆ ತರುವ ಮೂಲಕ ಬೃಹತ್ ಹೋರಾಟ ನಡೆಸಲು ಭಾನುವಾರ ನಡೆದ ಜನಪ್ರತಿನಿಧಿಗಳು ಮತ್ತು ರೈತರ ಸಭೆಯಲ್ಲಿ ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಯಿತು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ 4 ಗ್ರಾಮ ಪಂಚಾಯ್ತಿಗಳ ಜನಪ್ರತಿನಿಧಿಗಳು, ರೈತ ಸಂಘ, ದಲಿತ ಸಂಘಟನೆ ಹಾಗೂ ಗ್ರಾಮದ ಮುಖಂಡರು ಭಾಗವಹಿಸಿದ ಸಭೆಯಲ್ಲಿ ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಮ ಪಂಚಾಯ್ತಿಗಳನ್ನು ಸೇರ್ಪಡೆ ವಿರೋಧಿಸಿ ಮುಂದಿನ ಹೋರಾಟದ ರೂಪುರೇಷಗಳ ಕುರಿತು ಚರ್ಚೆ ನಡೆಸಲಾಯಿತು.

ಹೋರಾಟದ ಮೊದಲ ಹಂತವಾಗಿ ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರುವ ಗೆಜ್ಜಲಗೆರೆ, ಸೋಮನಹಳ್ಳಿ, ಗೊರವನಹಳ್ಳಿ ಹಾಗೂ ಚಾಮನಹಳ್ಳಿ ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರಿಗೆ ನಗರಸಭೆ ವ್ಯಾಪ್ತಿಗೆ ಗ್ರಾಮಗಳು ಸೇರ್ಪಡೆಯಾಗುವುದರಿಂದ ಉಂಟಾಗುವ ಸಾಧಕ, ಬಾದಕಗಳ ಕುರಿತು ಹೋರಾಟ ಸಮಿತಿ ಸದಸ್ಯರು ಕರಪತ್ರದ ಮೂಲಕ ಜಾಗೃತಿ ಮೂಡಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ನಂತರ ಹೋರಾಟದ ಎರಡನೇ ಹಂತವಾಗಿ ಎಲ್ಲಾ ಗ್ರಾಮಗಳ ಸುಮಾರು 2 ಸಾವಿರ ಮಂದಿ ಗ್ರಾಮಸ್ಥರ ಬೆಂಬಲದೊಂದಿಗೆ ಬೃಹತ್ ಹೋರಾಟ ನಡೆಸುವ ಮೂಲಕ ಸರ್ಕಾರವನ್ನು ಎಚ್ಚರಿಸುವ ಹೋರಾಟದ ಜೊತೆಗೆ ಜುಲೈ 3ರೊಳಗೆ ತಾಲೂಕ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲು ಒಕ್ಕೊರಲ ತೀರ್ಮಾನ ಕೈಗೊಳ್ಳಲಾಯಿತು.

ಗ್ರಾಪಂಗಳನ್ನು ನಗರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡುವುದನ್ನು ವಿರೋಧಿಸಿ ರಾಜ್ಯಪಾಲರು, ಮುಖ್ಯಮಂತ್ರಿ, ಪೌರಾಡಳಿತ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರಿಗೆ ಮನವಿ ಸಲ್ಲಿಸುದು, ಸರ್ಕಾರ ಹೊರಡಿಸಿರುವ ಗೆಜೆಟ್ ನೋಟಿಫಿಕೇಶನ್ ಕಾನೂನಾತ್ಮಕ ಹೋರಾಟ ನಡೆಸುವ ಸಂಬಂಧ ವಕೀಲರೊಂದಿಗೆ ಚರ್ಚಿಸಿ ಗ್ರಾಮಗಳ ಉಳಿವು ಹೋರಾಟ ಸಮಿತಿಯಿಂದ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿ ಸುವುದರೊಂದಿಗೆ ಹೋರಾಟ ನಡೆಸಲು ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಯಿತು.

ಸಭೆಯಲ್ಲಿ ರೈತ ಮುಖಂಡರಾದ ಜಿ.ಎ.ಶಂಕರ್, ಜಿ.ಎಚ್.ವೀರಪ್ಪ ಲಿಂಗಪ್ಪಾಜಿ, ಚಾಮನಹಳ್ಳಿ ಕೃಷ್ಣ, ದೇಶಹಳ್ಳಿ ಗ್ರಾಪಂ ಅಧ್ಯಕ್ಷ ಸಿದ್ದರಾಜು, ಸದಸ್ಯ ಜಿ.ಸಿ.ಮಹೇಂದ್ರ, ಪೂಜಾರಿ ವೀರಪ್ಪ, ದಲಿತ ಮುಖಂಡ ಅಂದಾನಿ ಸೋಮನಹಳ್ಳಿ, ತಾಪಂ ಮಾಜಿ ಉಪಾಧ್ಯಕ್ಷ ಸತೀಶ, ಸದಸ್ಯ ಎಸ್.ಎಂ.ಗೌಡ, ಮುಖಂಡರಾದ ಪುರುಷೋತ್ತಮ್, ಮುನೀಶ್, ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

PREV

Recommended Stories

ಸೆಂಚುರಿ ಕ್ಲಬ್‌ ಸೇರಿಯೇ ಬಿಟ್ಟಿತು ಸು ಫ್ರಂ ಸೋ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ