ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ರಾಗಿ ಖರೀದಿಸಲು ತೀರ್ಮಾನ

KannadaprabhaNewsNetwork |  
Published : Nov 23, 2024, 12:30 AM IST
ಚಿತ್ರ:ಜಿಲ್ಲಾಧಿಕಾರಿ ಟಿ. ವೆಂಕಟೇಶ್‌ ಅಧ್ಯಕ್ಷತೆಯಲ್ಲಿ  ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಪೂರ್ವಭಾವಿ ಸಭೆ ನಡೆಯಿತು. | Kannada Prabha

ಸಾರಾಂಶ

ಚಿತ್ರದುರ್ಗ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ರಾಗಿ ಖರೀದಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಡಿಸೆಂಬರ್‌ ೧ ರಿಂದ ನೋಂದಣಿ ಆರಂಭವಾಗಲಿದೆ. ರೈತರಿಂದ ಪ್ರತಿ ಕ್ವಿಂಟಾಲ್‌ಗೆ ೪೨೯೦ ರು. ರಂತೆ ರಾಗಿ ಖರೀದಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ತಿಳಿಸಿದರು.

ಚಿತ್ರದುರ್ಗ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ರಾಗಿ ಖರೀದಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಡಿಸೆಂಬರ್‌ ೧ ರಿಂದ ನೋಂದಣಿ ಆರಂಭವಾಗಲಿದೆ. ರೈತರಿಂದ ಪ್ರತಿ ಕ್ವಿಂಟಾಲ್‌ಗೆ ೪೨೯೦ ರು. ರಂತೆ ರಾಗಿ ಖರೀದಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕನಿಷ್ಠ ಬೆಂಬಲ ಬೆಲೆ ಯೋಜನೆ ಕಾರ್ಯಾಚರಣೆಗೆ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯ ಹೊಸದುರ್ಗ, ಹೊಳಲ್ಕೆರ ಹಾಗೂ ಚಿತ್ರದುರ್ಗ ತಾಲೂಕಿನ ವ್ಯಾಪ್ತಿಯಲ್ಲಿ ಹೆಚ್ಚು ರಾಗಿ ಬಿತ್ತನೆಯಾಗಿದೆ. ಉತ್ತಮ ಇಳುವರಿಯ ನಿರೀಕ್ಷೆ ಇದ್ದು, ಹೊಸದುರ್ಗ ತಾಲೂಕಿನಲ್ಲಿ ಹೆಚ್ಚುವರಿಯಾಗಿ ರಾಗಿ ಖರೀದಿ ಕೇಂದ್ರ ಸ್ಥಾಪಿಸಬೇಕು. ನೇರವಾಗಿ ರೈತರಿಂದಲೇ ರಾಗಿ ಖರೀದಿ ಮಾಡಲಾಗುವುದು. ರಾಗಿ ಮಾರಾಟ ಮಾಡುವ ರೈತರ ಪಹಣಿಯಲ್ಲಿ ರಾಗಿ ಎಂದು ನಮೂದು ಆಗಿರುವುದು ಕಡ್ಡಾಯವಾಗಿದೆ ಎಂದರು.ರಾಗಿ ಖರೀದಿ ಹಾಗೂ ಮಾನದಂಡಗಳ ಕುರಿತು ವ್ಯಾಪಕ ಪ್ರಚಾರದೊಂದಿಗೆ ರೈತರಿಗೆ ತಿಳಿಸಬೇಕು. ಎಲ್ಲಾ ಖರೀದಿ ಕೇಂದ್ರಗಳಲ್ಲಿ ರೈತರ ಬೆಳೆಗಳ ದಾಸ್ತಾನು ಮಾಡಲು ವ್ಯವಸ್ಥೆ ಕಲ್ಪಿಸಬೇಕು. ಇದರೊಂದಿಗೆ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕು. ರೈತರ ಫ್ರೂಟ್ಸ್ ದಾಖಲೆಗಳ ಮೂಲಕ ನೋಂದಣಿ ಮಾಡುವಲ್ಲಿ ಯಾವುದೇ ಗೊಂದಲಗಳು ಉಂಟಾಗಬಾರದು. ರೈತರ ಪಹಣಿಯಲ್ಲಿ ಬೆಳೆ ನಮೂದು ಮಾಡುವಲ್ಲಿ ವ್ಯತ್ಯಾಸ ಕಂಡುಬಂದರೆ ಸಂಬಂಧಪಟ್ಟ ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಖರೀದಿ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು. ಕೃಷಿ ಇಲಾಖೆ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ರಾಗಿ ಖರೀದಿ ಕುರಿತು ರೈತರಿಗೆ ಮಾಹಿತಿ ನೀಡುವಂತೆ ಸೂಚಿಸಿದರು.ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್ ಮಾತನಾಡಿ, 2022-23ನೇ ಸಾಲಿನಲ್ಲಿ ರು. 3578 ಬೆಂಬಲ ಬೆಲೆಯಡಿ ಒಟ್ಟು 21,715 ಮೆಟ್ರಿಕ್ ಟನ್ ಹಾಗೂ 2023-24ನೇ ಸಾಲಿನಲ್ಲಿ ರು. 3846 ಬೆಂಬಲ ಬೆಲೆಯಡಿ 1832.60 ಮೆಟ್ರಿಕ್ ಟನ್ ರಾಗಿ ಖರೀದಿ ಮಾಡಲಾಗಿತ್ತು. ಈ ಬಾರಿ ರಾಗಿಗೆ ರು. 4290 ಬೆಂಬಲ ಬೆಲೆ ನಿಗದಿ ಮಾಡಲಾಗಿದೆ ಎಂದು ತಿಳಿಸಿದರು.

ಚಿತ್ರದುರ್ಗ, ಹೊಳಲ್ಕೆರೆ, ಹೊಸದುರ್ಗ ಹಾಗೂ ಶ್ರೀರಾಂಪುರ ಎ.ಪಿ.ಎಂ.ಸಿ ಯಾರ್ಡ್‍ಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು. ಹಿರಿಯೂರು ಹಾಗೂ ಹೊಸದುರ್ಗ ತಾಲುಕಿನಲ್ಲಿ ಹೆಚ್ಚಿನ ಬೇಡಿಕೆ ಎದುರಾದರೆ ಹೆಚ್ಚುವರಿ ಖರೀದಿ ಕೇಂದ್ರಗಳನ್ನು ಸಹ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್, ಡಿವೈಎಸ್‍ಪಿ ದಿನಕರ್ ಸೇರಿದಂತೆ ತಹಸೀಲ್ದಾರ್‌ಗಳು, ಎ.ಪಿ.ಎಂ.ಸಿ ಕಾರ್ಯದರ್ಶಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೃಹಲಕ್ಷ್ಮಿ ಹಣ ಮುಂದಿನ ವಾರ ಖಾತೆಗೆ ಜಮೆ: ಎಂ.ಎಲ್.ದಿನೇಶ್
ಗೆಜ್ಜಲಗೆರೆ ಗ್ರಾಮಸ್ಥರ ಪ್ರತಿಭಟನೆ ರಾಜಕೀಯ ಪ್ರೇರಿತ: ಸತೀಶ್ ಆರೋಪ