ಕನ್ನಡಪ್ರಭ ವಾರ್ತೆ ಕಲಬುರಗಿ
ಹೆಸರು ಕಾಳು ಖರೀದಿಗೆ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ದಿ ಮಂಡಳಿಯನ್ನು ಕಲಬುರಗಿ ಜಿಲ್ಲೆಗೆ ನೋಡಲ್ ಏಜೆನ್ಸಿಯನ್ನಾಗಿ ನೇಮಿಸಿದ್ದು, ಜಿಲ್ಲೆಯಲ್ಲಿ ಈ ಹಿಂದೆ ಪರಿಣತಿ ಹೊಂದಿದ 162 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಹಾಗೂ ರೈತ ಉತ್ಪಾದಕ ಸಂಘಗಳನ್ನು ಗುರುತಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಇಲ್ಲಿ ರೈತರ ನೊಂದಣಿ ಕಾರ್ಯ ನಡೆಯಲಿದೆ.
ಹೆಸರು ಕಾಳು ಖರೀದಿಗೆ ಸೆ.9ರ ವರೆಗೆ ನೋಂದಣಿ ನಡೆಯಲಿದ್ದು, ಆ.28 ರಿಂದ ಖರೀದಿ ಪ್ರಕ್ರಿಯೆ ನಡೆಯಲಿದೆ. ಜಿಲ್ಲೆಯ ರೈತ ಬಾಂಧವರು ಇದರ ಲಾಭ ಪಡೆಯಬೇಕೆಂದು ಡಿ.ಸಿ. ಅವರು ಮನವಿ ಮಾಡಿದ್ದಾರೆ.ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ತೋಟಗಾರಿಕೆ ಉಪನಿರ್ದೆಶಕ ಸಂತೋಷ ಇನಾಂದಾರ್, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ನಿಯಮಿತ ಸಹಾಯಕ ನಿರ್ದೇಶಕ ವಿಶಾಲ, ಎ.ಪಿ.ಎಂ.ಸಿ ಜಂಟಿ ನಿರ್ದೇಶಕ ಅಲ್ಲಾಭಕ್ಷ ಸೇರಿದಂತೆ ಇನ್ನಿತರ ಅಧಿಕಾರಿಗಳು, ಸಮಿತಿ ಸದಸ್ಯರು ಭಾಗವಹಿಸಿದ್ದರು.