ಜುಲೈ 8ರ ಸಂಜೆಯಿಂದ ವಿ.ಸಿ.ನಾಲೆಗೆ ನೀರು ಹರಿಸಲು ತೀರ್ಮಾನ: ಎನ್.ಚಲುವರಾಯಸ್ವಾಮಿ

KannadaprabhaNewsNetwork |  
Published : Jul 07, 2024, 01:16 AM IST
6ಕೆಎಂಎನ್ ಡಿ26 | Kannada Prabha

ಸಾರಾಂಶ

ಸಾಮಾನ್ಯವಾಗಿ ಪ್ರತಿವರ್ಷ ಕೆಆರ್‌ಎಸ್ ಅಣೆಕಟ್ಟಿನಿಂದ ಜುಲೈ ಎರಡನೇ ವಾರದಿಂದ ವಿ.ಸಿ.ನಾಲೆಗೆ ನೀರು ಹರಿಸಲಾಗುತ್ತಿತ್ತು. ಆದರೆ, ಈ ಬಾರಿ ಮಾರ್ಚ್ ನಲ್ಲಿ ನಾಲೆಗೆ ನೀರು ಹರಿಸದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶಾಸಕರ ಒತ್ತಾಯದ ಮೇರೆಗೆ ಜುಲೈ 8ರ ಸಂಜೆಯಿಂದ ನೀರು ಹರಿಸಲಾಗುವುದು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಕಳೆದ ಕೆಲ ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಕೆ.ಆರ್.ಎಸ್ ಅಣೆಕಟ್ಟು 100 ಅಡಿ ತುಂಬಿದೆ. ಜುಲೈ 8ರ ಸಂಜೆಯಿಂದ ಹತ್ತು ದಿನಗಳ ಕಾಲ ವಿ.ಸಿ.ನಾಲೆಗೆ ನೀರು ಹರಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.‌

ಕೃಷ್ಣರಾಜಸಾಗರ ಜಲಾಶಯದ ಅಚ್ಚುಕಟ್ಟು ಪ್ರದೇಶದ ನೀರಾವರಿ ಸಲಹಾ ಸಮಿತಿ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸಾಮಾನ್ಯವಾಗಿ ಪ್ರತಿವರ್ಷ ಕೆಆರ್‌ಎಸ್ ಅಣೆಕಟ್ಟಿನಿಂದ ಜುಲೈ ಎರಡನೇ ವಾರದಿಂದ ವಿ.ಸಿ.ನಾಲೆಗೆ ನೀರು ಹರಿಸಲಾಗುತ್ತಿತ್ತು. ಆದರೆ, ಈ ಬಾರಿ ಮಾರ್ಚ್ ನಲ್ಲಿ ನಾಲೆಗೆ ನೀರು ಹರಿಸದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶಾಸಕರ ಒತ್ತಾಯದ ಮೇರೆಗೆ ಜುಲೈ 8ರ ಸಂಜೆಯಿಂದ ನೀರು ಹರಿಸಲಾಗುವುದು ಎಂದರು.

ಇದು ಕೇವಲ ಕೆರೆ-ಕಟ್ಟೆ ತುಂಬಿಸಲು ಹಾಗು ಜಾನುವಾರುಗಳ ಹಿತದೃಷ್ಟಿಯಿಂದ ನಾಲೆಗೆ ನೀರು ಹರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಂದಿನ 10 ದಿನಗಳ ನಂತರ ಮುಂಗಾರು ಮಳೆಯ ಪರಿಸ್ಥಿತಿ ಹಾಗೂ ಕೆಆರ್‌ಎಸ್ ಅಣೆಕಟ್ಟಿನ ಒಳಹರಿವು ಗಮನಿಸಿಕೊಂಡು ರೈತರ ಬೆಳೆಗಳಿಗೂ ನೀರು ಹರಿಸಲು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.ವಿ.ಸಿ.ನಾಲೆ 36 ಕಿಮೀ ಕಾಮಗಾರಿ ಈಗಾಗಲೇ ಮುಕ್ತಾಯವಾಗಿದೆ. ಬಾಕಿ 16 ಕಿಮೀ ಕಾಮಗಾರಿ ನಾಲೆಗೆ ನೀರು ಹರಿಸುವುದನ್ನು ನಿಲ್ಲಿಸಿದ ನಂತರ ಮುಕ್ತಾಯಗೊಳಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲೆಯ ಶಾಸಕರಾದ ನರೇಂದ್ರಸ್ವಾಮಿ, ರಮೇಶ ಬಂಡಿಸಿದ್ದೇಗೌಡ, ಕೆ.ಎಂ.ಉದಯ್, ಪಿ.ರವಿಕುಮಾರ್, ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಮಾದೇಗೌಡ, ಮಂಜೇಗೌಡ, ಜಿಲ್ಲಾಧಿಕಾರಿ ಕುಮಾರ್ ಸೇರಿದಂತೆ ಇತರೆ ಅಧಿಕಾರಿಗಳು ಭಾಗವಹಿಸಿದ್ದರು.

ಕೆಆರ್ ಎಸ್ ನೀರಿನ ಮಟ್ಟ

ಗರಿಷ್ಠ ಮಟ್ಟ - 124.80 ಅಡಿ

ಇಂದಿನ ಮಟ್ಟ – 100.90 ಅಡಿ

ಒಳ ಹರಿವು – 6185 ಕ್ಯುಸೆಕ್

ಹೊರ ಹರಿವು – 554 ಕ್ಯುಸೆಕ್

ನೀರಿನ ಸಂಗ್ರಹ – 23.523 ಟಿಎಂಸಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ