ಬರ ಘೋಷಿಸಿ ಪರಿಹಾರ ನೀಡಿ

KannadaprabhaNewsNetwork |  
Published : Aug 07, 2026, 02:15 AM IST
ನವಲಗುಂದ ರೈತ ಹೋರಾಟ ವೇದಿಕೆಗೆ ಭೇಟಿ ನೀಡಿದ್ದ ಸಚಿವ ಸಂತೋಷ ಲಾಡ್ ಅವರಿಗೆ ಮಹದಾಯಿ ಹೋರಾಟಗಾರರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಸರ್ಕಾರ ಎನ್‌ಡಿಆರ್‌ಎಫ್‌ ಎಸ್‌ಡಿಆರ್‌ಎಫ್‌ ನಿಧಿಯಡಿ ಎಕರೆಗೆ ತಲಾ ₹ 50 ಸಾವಿರ ಪರಿಹಾರ ಒದಗಿಸಬೇಕು. ರೈತರಿಗೆ ಸಕಾಲಕ್ಕೆ ಬೆಳೆವಿಮೆ ಹಣ ಪಾವತಿಗೆ ಕ್ರಮ ಜರುಗಿಸಬೇಕು.

ನವಲಗುಂದ:

ತಾಲೂಕಿನಾದ್ಯಂತ ಮಳೆ ಕೊರತೆಯಿಂದಾಗಿ ಬಿತ್ತಿದ ಬೆಳೆ ಹಾಳಾಗಿದ್ದು ರೈತ ಸಮುದಾಯ ಸಂಕಷ್ಟದಲ್ಲಿದೆ. ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡಿ ಬರ ಪರಿಹಾರ ಹಾಗೂ ಬೆಳೆ ವಿಮೆ ಬಿಡುಗಡೆಗೆ ಕ್ರಮ ಜರುಗಿಸಲು ಪಕ್ಷಾತೀತ ರೈತ ಹೋರಾಟ ಸಮಿತಿಯ ಸುಭಾಶ್ಚಂದ್ರಗೌಡ ಪಾಟೀಲ್ ಸಚಿವ ಸಂತೋಷ ಲಾಡ್‌ಗೆ ಆಗ್ರಹಿಸಿದರು.

ಗುರುವಾರ ಪಟ್ಟಣದ ರೈತ ಭವನಕ್ಕೆ ಭೇಟಿ ನೀಡಿದ್ದ ಸಚಿವ ಸಂತೋಷ್ ಲಾಡ್‌ ಅವರಿಗೆ ಮನವಿ ಸಲ್ಲಿಸಿದ ಅವರು, ಸರ್ಕಾರ ಎನ್‌ಡಿಆರ್‌ಎಫ್‌ ಎಸ್‌ಡಿಆರ್‌ಎಫ್‌ ನಿಧಿಯಡಿ ಎಕರೆಗೆ ತಲಾ ₹ 50 ಸಾವಿರ ಪರಿಹಾರ ಒದಗಿಸಬೇಕು. ರೈತರಿಗೆ ಸಕಾಲಕ್ಕೆ ಬೆಳೆವಿಮೆ ಹಣ ಪಾವತಿಗೆ ಕ್ರಮ ಜರುಗಿಸಬೇಕು. ಜತೆಗೆ ಹಲವು ವರ್ಷ ಈ ಭಾಗದ ರೈತರ ಬೇಡಿಕೆಯಾದ ಕಳಸಾ-ಬಂಡೂರಿ, ಮಹಾದಾಯಿ ಯೋಜನೆ ಅನುಷ್ಠಾನಕ್ಕಾಗಿ ಹೋರಾಟ ನಡೆಯುತ್ತಿದ್ದರೂ ಕೇಂದ್ರ ಸರ್ಕಾರ ನಿಷ್ಕಾಳಜಿ ತೋರತ್ತಿದೆ. ರಾಜ್ಯ ಸರ್ಕಾರ ಕೂಡಲೇ ಮಹದಾಯಿ ಯೋಜನೆ ಅನುಷ್ಠಾನಗೊಳಿಸಲು ಕೇಂದ್ರದ ಮೇಲೆ ಒತ್ತಡ ಹೇರಬೇಕೆಂದು ಸಚಿವರನ್ನು ಒತ್ತಾಯಿಸಿದರು.

ಶಾಸಕ ಎನ್.ಎಚ್. ಕೋನರಡ್ಡಿ, ಜಿಲ್ಲಾಧಿಕಾರಿ ಸ್ನೇಹಲ್ ಆರ್. ಜಿಪಂ ಸಿಇಒ ಭುವನೇಶ ಪಾಟೀಲ್, ತಹಸೀಲ್ದಾರ್‌ ಸುಧೀರ ಸಾಹುಕಾರ, ರೈತ ಮುಖಂಡರದಾ ಯಲ್ಲಪ್ಪ ದಾಡಿಬಾವಿ, ಮಲ್ಲೇಶ ಉಪ್ಪಾರ, ಶಿವಣ್ಣ ಹುಬ್ಬಳ್ಳಿ, ಸಂಗಪ್ಪ ನಡಿವಣಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳಲ್ಲಿನ ಹೃದಯಾಘಾತ ತಿಳಿಯಲು ಅಧ್ಯಯನ!
ರೈತರ ನೆರವಿಗೆ ಬರಲು ರಾಜ್ಯ ಸರ್ಕಾರ ಬದ್ಧ