ಜಗಳೂರನ್ನು ತೀವ್ರ ಬರಪೀಡಿತ ತಾಲೂಕೆಂದು ಘೋಷಿಸಿ

KannadaprabhaNewsNetwork |  
Published : Sep 21, 2026, 01:30 AM IST
20ಕೆಡಿವಿಜಿ1-ಜಗಳೂರು ತಾಲೂಕನ್ನು ತೀವ್ರ ಬರ ಪೀಡಿತ ತಾಲೂಕು ಎಂಬುದಾಗಿ ಘೋಷಿಸುವಂತೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮನವಿ ಪತ್ರ ಅರ್ಪಿಸಿದರು. | Kannada Prabha

ಸಾರಾಂಶ

ಜಗಳೂರನ್ನು ತೀವ್ರ ಬರಪೀಡಿತ ತಾಲೂಕು ಎಂಬುದಾಗಿ ಘೋಷಿಸುವಂತೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮನವಿ ಅರ್ಪಿಸಿದರು.

ಕನ್ನಡಪ್ರಭ ವಾರ್ತೆ ದಾವಣಗೆರೆ

ತೀವ್ರ ಮಳೆ ಕೊರತೆಯಿಂದಾಗಿ ಕೃಷಿ ಚಟುವಟಿಕೆಗಳು ಸಂಪೂರ್ಣ ಕುಂಠಿತವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿರುವ ಜಗಳೂರು ತಾಲೂಕನ್ನು ತೀವ್ರ ಬರಪೀಡಿತ ತಾಲೂಕು ಎಂದು ಘೋಷಿಸುವಂತೆ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್‌ ಅವರಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಒತ್ತಾಯಿಸಿದ್ದಾರೆ.

ನಗರದಲ್ಲಿ ಸಂಸದರ ನಿವಾಸ ಶಿವ ಪಾರ್ವತಿಗೆ ಭಾನುವಾರ ಭೇಟಿ ನೀಡಿದ್ದ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್‌ ಅವರಿಗೆ ಮನವಿ ಪತ್ರ ಅರ್ಪಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಜಗಳೂರು ತಾಲೂಕನ್ನು ತೀವ್ರ ಬರಪೀಡಿತ ತಾಲೂಕು ಎಂಬುದಾಗಿ ಘೋಷಿಸುವಂತೆ ಆಗ್ರಹಿಸಿದರು.

ಇದೇ ವೇಳೆ ಮಾತನಾಡಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಜಗಳೂರು ತಾಲೂಕಿನ ಬರ ಪರಿಸ್ಥಿತಿ ಗಂಭೀರವಾಗಿದೆ. ಕೇಂದ್ರ ಸರ್ಕಾರದ ಬರ ನಿರ್ವಹಣಾ ಕೈಪಿಡಿ-2020ರ ಮಾನದಂಡಗಳ ಅನ್ವಯ ದಾವಣಗೆರೆ ಜಿಲ್ಲೆಯ ಬರ ಪರಿಸ್ಥಿತಿಯನ್ನು ಪರಿಶೀಲಿಸಿದಾಗ ಜಗಳೂರು ತಾಲೂಕನ್ನು ಹೊರತುಪಡಿಸಿ, ಉಳಿದ ತಾಲೂಕುಗಳು ಬರಪೀಡಿತವೆಂದು ಘೋಷಣೆಯಾಗಿವೆ. ಹಿಂದುಳಿದ ತಾಲೂಕಾದ ಜಗಳೂರು ನಿರಂತಪ ಬರ ಪರಿಸ್ಥಿತಿಗೆ ತುತ್ತಾಗ ತಾಲೂಕಾಗಿದ್ದು, ಈ ಸಲವೂ ಮಳೆ ಕೊರತೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದೆ ಎಂದರು.

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಸಮರ್ಪಕ ಮಳೆಯಾಗದ ಕಾರಣ ಬಿತ್ತಿದ ಬೆಳೆಗಳು ಒಣಗುತ್ತಿವೆ. ನಿರೀಕ್ಷಿತ ಪ್ರಮಾಣದಲ್ಲಿ ಬಿತ್ತನೆಯಾಗಿಲ್ಲ. ಮೇವಿನ ಕೊರತೆಯೊಂದಿಗೆ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಇದರಿಂದ ರೈತರ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ. ಜಿಲ್ಲೆಯ ಬರಪೀಡಿತ ತಾಲೂಕುಗಳ ಪಟ್ಟಿಗೆ ಜಗಳೂರನ್ನೂ ಸೇರ್ಪಡೆ ಮಾಡುವಂತೆ ಜಿಲ್ಲಾಧಿಕಾರಿಗಳು ಈಗಾಗಲೇ ಜಿಲ್ಲಾ ಸಚಿವರೊಂದಿಗೆ ಚರ್ಚಿಸಿ, ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಜಿಲ್ಲಾ ಸಚಿವರು, ತಾವು ಸಹ ಪ್ರತ್ಯೇಕವಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದರು.

ಜಗಳೂರು ತಾಲೂಕಿನ ರೈತರು ಮತ್ತು ಸಾರ್ವಜನಿಕರಿಗೆ ಅಗತ್ಯ ಪರಿಹಾರ ಕಲ್ಪಿಸಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಆದಷ್ಟು ಬೇಗನೆ ಜಗಳೂರು ತಾಲೂಕನ್ನು ತೀವ್ರ ಬರ ಪೀಡಿತ ತಾಲೂಕು ಎಂಬುದಾಗಿ ಘೋಷಣೆ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮನವಿ ಅರ್ಪಿಸಿ, ಒತ್ತಾಯಿಸಿದರು.

ಸಚಿವ ಕೆ.ಎಸ್.ಬಸವಂತಪ್ಪ, ದಕ್ಷಿಣ ಶಾಸಕ ಸಮರ್ಥ ಎಂ.ಶಾಮನೂರು, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಇತರರು ಇದ್ದರು.

ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಪ್ರಧಾನ ಕಾರ್ಯದರ್ಶಿಗಳ ಗಮನಕ್ಕೂ ಜಗಳೂರಿನ ವಾಸ್ತವ ಪರಿಸ್ಥಿತಿ ತರಲಾಗಿದೆ. ತಾಲೂಕಿನಲ್ಲಿ ಉಂಟಾದ ತೀವ್ರ ಮಳೆ ಕೊರತೆ, ಕೃಷಿ ಚಟುವಟಿಕೆಗಳ ಮೇಲಿನ ಪರಿಣಾಮ ಹಾಗೂ ಜನ–ಜಾನುವಾರು ಎದುರಿಸುತ್ತಿರುವ ನೀರಿನ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಮಳೆ ಕೊರತೆ, ಕುಂಠಿತಗೊಂಡ ಬಿತ್ತನೆ ಹಾಗೂ ನೀರು–ಮೇವಿನ ಸಮಸ್ಯೆ ಪರಿಗಣಿಸಿ ಜಗಳೂರು ತಾಲೂಕನ್ನು ತೀವ್ರ ಬರಪೀಡಿತವೆಂದು ಘೋಷಿಸಬೇಕು.

- ಡಾ.ಪ್ರಭಾ ಮಲ್ಲಿಕಾರ್ಜುನ, ಸಂಸದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರ ಆರೋಗ್ಯ ವ್ಯವಸ್ಥೆ ಬಲಪಡಿಸಲಿ: ಡಾ. ಗಂಗಾಧರ್‌
ಜ್ಞಾನವನ್ನು ಸಮಾಜದ ಒಳಿತಿಗೆ ಬಳಸಿ: ಡಾ. ಉಮಾ