ಎಲ್ಲೆಡೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬರ ಎದುರಾಗಿದೆ. ಜಾನುವಾರುಗಳಿಗೂ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಸಕಾಲಕ್ಕೆ ಮಳೆ ಬಾರದ ಕಾರಣ ರಾಜ್ಯಾದ್ಯಂತ ಬರ ಪರಿಸ್ಥಿತಿ ಉಂಟಾಗಿದೆ. ಆದ್ದರಿಂದ ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಆಡಳಿತ ನಡೆಸಬೇಕು.
ಪಾಂಡವಪುರ: ತಾಲೂಕನ್ನು ಬರ ಪೀಡಿತ ಪ್ರದೇಶ ಎಂದು ಘೋಷಿಸಬೇಕು. ರೈತರಿಗೆ ಬೆಳೆ ಪರಿಹಾರ ಹಾಗೂ ಜಾನುವಾರುಗಳಿಗೆ ಮೇವು ಒದಗಿಸುವಂತೆ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಕೆನ್ನಾಳು ಚಂದ್ರಶೇಖರ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ತಾಲೂಕು ಆಡಳಿತ ಸೌಧದ ಕಚೇರಿಗೆ ತಾಲೂಕು ಕೃಷಿಕ ಸಮಾಜದ ನಿರ್ದೇಶಕರೊಂದಿಗೆ ತೆರಳಿ ಬರ ಸಂಬಂಧ ತಹಸೀಲ್ದಾರ್ ಜಿ.ಆದರ್ಶ್ ಅವರಿಗೆ ಮನವಿ ಸಲ್ಲಿಸಿ, ಕೂಡಲೇ ತಾಲೂಕನ್ನು ಬರಪಟ್ಟಿಗೆ ಸೇರಿಸಿ10 ಕೋಟಿ ರು. ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಎಲ್ಲೆಡೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬರ ಎದುರಾಗಿದೆ. ಜಾನುವಾರುಗಳಿಗೂ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಸಕಾಲಕ್ಕೆ ಮಳೆ ಬಾರದ ಕಾರಣ ರಾಜ್ಯಾದ್ಯಂತ ಬರ ಪರಿಸ್ಥಿತಿ ಉಂಟಾಗಿದೆ. ಆದ್ದರಿಂದ ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಆಡಳಿತ ನಡೆಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ತಾಲೂಕು ಕೃಷಿಕ ಸಮಾಜದ ಉಪಾಧ್ಯಕ್ಷ ಅರಳಕುಪ್ಪೆ ಮೋಹನ್ ಕುಮಾರ್, ಕಾರ್ಯದರ್ಶಿ ಕೆ.ಉಮಾಶಂಕರ್, ಖಜಾಂಚಿ ಡಿಂಕಾ ಪುಟ್ಟರಾಜು, ಮಾಜಿ ಅಧ್ಯಕ್ಷ ಆರ್.ಚನ್ನಕೇಶವ, ನಿರ್ದೇಶಕರಾದ ಉಮೇಶ್, ಮಹದೇಶ್ವರಪುರ ದೇವರಾಜು, ಹಿರೀಮರಳಿ ಸತೀಶ್, ಅಶ್ವತ್ಥ್ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಜರಿದ್ದರು.
ಎರಡು ದಿನಗಳಿಂದ ಮಳೆ ಮನೆ ಮೇಲ್ಚಾವಣಿ ಕುಸಿತ
ಪಾಂಡವಪುರ: ಕಳೆದೆರಡು ದಿನಗಳಿಂದ ಸುರಿದ ಮಳೆಗೆ ಮನೆ ಮೇಲ್ಚಾವಣಿ ಕುಸಿದ್ದಿರುವ ಘಟನೆ ತಾಲೂಕಿನ ಚಿಕ್ಕಮರಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲೇ.ಚಲುವಪ್ಪ- ಅನುಸೂಯ ಅವರಿಗೆ ಸೇರಿದ ಮನೆ ಮೇಲ್ಚಾವಣಿಯೇ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಮನೆ ಮಾಲೀಕರಾದ ಅನುಸೂಯ ಅವರು ಕುಟುಂಬ ಬೆಂಗಳೂರಿನಲ್ಲಿ ವಾಸವಿದ್ದ ಕಾರಣ ಮನೆಯಲ್ಲಿ ಯಾರು ಇರಲಿಲ್ಲ. ಊರಿಗೆ ಬಂದಾಗ ಮಾತ್ರ ಮನೆಯಲ್ಲಿ ವಾಸ್ತವ್ಯ ಇರುತ್ತಿದ್ದರು. ಇತ್ತೀಚೆಗೆ ಸ್ವಲ್ಪ ಮಟ್ಟಿಗೆ ಮಳೆಯಾದ ಹಿನ್ನೆಲೆಯಲ್ಲಿ ಮನೆ ಮೇಲ್ಚಾವಣಿ ಕುಸಿರು ಬಿದ್ದಿದೆ. ಇದರಿಂದ ಮನೆಯಲ್ಲಿದ್ದ ಕೆಲವು ಗೃಹ ಬಳಕೆ ವಸ್ತುಗಳು ನಾಶವಾಗಿ ಸಾವಿರಾರು ರು.ನಷ್ಟ ಉಂಟಾಗಿದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿ ಸೂಕ್ತಪರಿಹಾರ ಕೊಡಿಸಬೇಕೆಂದು ಮನೆ ಮಾಲೀಕರು ಒತ್ತಾಯಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.