ಜಿಲ್ಲೆಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿ

KannadaprabhaNewsNetwork | Published : Mar 3, 2025 1:46 AM

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಅಖಂಡ ವಿಜಯಪುರ ಜಿಲ್ಲೆ ಅಂದರೆ ಬಾಗಲಕೋಟ- ವಿಜಯಪುರ ಜಿಲ್ಲೆಗಳನ್ನು ನಂಜುಂಡಪ್ಪ ವರದಿ ಆಧರಿಸಿ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿ ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿ ಅಖಿಲ ಭಾರತ ವಾಲ್ಮೀಕಿ ಸಮಾಜ ಸೇವಾ ಸಂಘದಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರು, ಪ್ರಧಾನ ಮಂತ್ರಿ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಅಖಂಡ ವಿಜಯಪುರ ಜಿಲ್ಲೆ ಅಂದರೆ ಬಾಗಲಕೋಟ- ವಿಜಯಪುರ ಜಿಲ್ಲೆಗಳನ್ನು ನಂಜುಂಡಪ್ಪ ವರದಿ ಆಧರಿಸಿ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿ ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿ ಅಖಿಲ ಭಾರತ ವಾಲ್ಮೀಕಿ ಸಮಾಜ ಸೇವಾ ಸಂಘದಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರು, ಪ್ರಧಾನ ಮಂತ್ರಿ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ಸೇವಾ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಮಾತನಾಡಿ, ರಾಜ್ಯದ ಅಖಂಡ ವಿಜಯಪುರ ಜಿಲ್ಲೆಯು (ಬಾಗಲಕೋಟ) ಸೇರಿದಂತೆ ಅತ್ಯಂತ ಹಿಂದುಳಿದ ಪ್ರದೇಶವಾಗಿದೆ. ಅದನ್ನು ಪ್ರೊ.ನಂಜುಂಡಪ್ಪ ವರದಿಯಲ್ಲಿಯೇ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಉದ್ಯೋಗ, ಶಿಕ್ಷಣ, ಮಹಿಳಾ ಸಬಲೀಕರಣ ಸೇರಿದಂತೆ ಆರ್ಥಿಕವಾಗಿ ಬಹಳಷ್ಟು ಹಿಂದುಳಿದ ಪ್ರದೇಶ. ಉದ್ಯೋಗವನ್ನು ಅರಸಿ ಇಲ್ಲಿನ ಯುವಕರು, ಕೂಲಿ ಕಾರ್ಮಿಕರು ದೇಶದ ಬೇರೆ ಬೇರೆ ಭಾಗಗಳಿಗೆ ವಲಸೆ ಹೋಗುತ್ತಿದ್ದಾರೆ. ಕೇಂದ್ರ ಸರ್ಕಾರ ಅವಳಿ ಜಿಲ್ಲೆಯ ವ್ಯಾಪ್ತಿಯನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ ಅಭಿವೃದ್ಧಿಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ರಾಜಾಡಳಿತರ ಕಾಲದಲ್ಲಿ ಹೈದ್ರಾಬಾದ್ ನಿಜಾಮನ ಆಡಳಿತದಲ್ಲಿದ್ದ ವಿಜಯಪುರ ಜಿಲ್ಲೆಯನ್ನು ವಿಶೇಷ ಮೀಸಲಾತಿಯಡಿ ಸೇರಿಸಬೇಕೆಂದು ಜಿಲ್ಲೆಯ ಜನರು ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದಾರೆ. ಆದರೂ ಕೂಡ, ೩೭೧ ಜೆ ಕಲ್ಯಾಣ ಕರ್ನಾಟಕ ವಿಶೇಷ ಮೀಸಲಾತಿ ಸೇರ್ಪಡೆಗೆ ವಿಜಯಪುರ ಜಿಲ್ಲೆಯನ್ನು ಶಿಫಾರಸ್ಸು ಮಾಡದಿರುವ ಮೂಲಕ ರಾಜ್ಯ ಸರ್ಕಾರ ಘೋರ ಅನ್ಯಾಯ ಎಸಗಿದೆ. ಇದರಿಂದ ಜಿಲ್ಲೆಯ ಮಕ್ಕಳು ಶೈಕ್ಷಣಿಕ ಮೀಸಲಾತಿ ಹಾಗೂ ಯುವ ಜನತೆಗೆ ಸರ್ಕಾರದ ಉದ್ಯೋಗ ಮೀಸಲಾತಿಯಿಂದ ವಂಚನೆಗೊಳಗಾಗಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದರು.ಜಿಲ್ಲೆಯಲ್ಲಿ ಬಹುದಿನಗಳಿಂದ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ, ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ ಸ್ಥಾಪಿಸಬೇಕು ಎಂದು ದೊಡ್ಡ ಮಟ್ಟದ ಕೂಗು ಇದ್ದರೂ ಸಹಿತ ಯಾವುದೇ ಪಕ್ಷಗಳ ಮುಖಂಡರು ಬೇಡಿಕೆಗೆ ಸೊಪ್ಪು ಹಾಕದೆ. ನಿರಂತವಾಗಿ ಈ ಭಾಗವನ್ನು ಕಡೆಗಣಿಸುತ್ತಲೇ ಬರಲಾಗುತ್ತಿದೆ. ರಾಜಕೀಯ ಹಿತಾಸಕ್ತಿಯಿಂದ ಕೆಲ ರಾಜಕೀಯ ಮುಖಂಡರು ವಿಜಯಪುರ ಜಿಲ್ಲೆಯನ್ನು ೩೭೧ ಜೆ ಅಡಿಯಲ್ಲಿ ತಂದು ನ್ಯಾಯ ಕೊಡಿಸುವುದಾಗಿ ಹೇಳುತ್ತಿದ್ದಾರೆ. ಆದರೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.ವಿಜಯಪುರ ಜಿಲ್ಲೆ ಮಹಾರಾಷ್ಟ್ರದೊಂದಿಗೆ ಗಡಿಯನ್ನು ಹಂಚಿಕೊಂಡಿದ್ದು ಬರಗಾಲ ಪೀಡಿತವಾಗಿದೆ. ಪ್ರತಿ ವರ್ಷ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಆಯ್ಯವ್ಯಯ ಮಂಡನೆಯಲ್ಲಿ ವಿಜಯಪುರ ಜಿಲ್ಲೆಯ ಶಾಶ್ವತ ಅಭಿವೃದ್ಧಿ ಯೋಜನೆಗಳಿಗೆ ವಿಶೇಷ ಪ್ಯಾಕೇಜ್‌ಗಳನ್ನು ಘೋಷಣೆ ಮಾಡದೆ ನಿರಂತರವಾಗಿ ಅನ್ಯಾಯ ಎಸಗುತ್ತಾ ಬರಲಾಗುತ್ತಿದೆ. ಅಖಂಡ ವಿಜಯಪುರ ಜಿಲ್ಲೆಯನ್ನು ಪ್ರತಿನಿಧಿಸುವ ಲೋಕಸಭಾ ಸದಸ್ಯರು, ವಿಧಾನ ಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ತಿನ ಸದಸ್ಯರು, ಜಿಲ್ಲೆಯ ಜ್ವಲಂತ ಸಮಸ್ಯೆಗಳ ಕುರಿತು ಧ್ವನಿ ಎತ್ತಿ ಜಿಲ್ಲೆಗೆ ನ್ಯಾಯ ಒದಗಿಸಲು ವಿಫಲರಾಗಿದ್ದಾರೆ. ಈ ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ತಾವುಗಳು ದೇಶದಲ್ಲಿ ಅತ್ಯಂತ ಹಿಂದುಳಿದ ಪ್ರದೇಶ ಹಾಗೂ ವಿಜಯಪುರ ಜಿಲ್ಲೆಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿ ಅಭಿವೃದ್ಧಿಪಡಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.ಕೋಟ್‌ಪ್ರತಿ ವರ್ಷ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಆಯ್ಯವ್ಯಯ ಮಂಡನೆಯಲ್ಲಿ ವಿಜಯಪುರ ಜಿಲ್ಲೆಯ ಶಾಶ್ವತ ಅಭಿವೃದ್ಧಿ ಯೋಜನೆಗಳಿಗೆ ವಿಶೇಷ ಪ್ಯಾಕೇಜ್‌ಗಳನ್ನು ಘೋಷಣೆ ಮಾಡದೆ ನಿರಂತರವಾಗಿ ಅನ್ಯಾಯ ಎಸಗುತ್ತಾ ಬರಲಾಗುತ್ತಿದೆ. ಅಖಂಡ ವಿಜಯಪುರ ಜಿಲ್ಲೆಯನ್ನು ಪ್ರತಿನಿಧಿಸುವ ಲೋಕಸಭಾ ಸದಸ್ಯರು, ವಿಧಾನ ಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ತಿನ ಸದಸ್ಯರು, ಜಿಲ್ಲೆಯ ಜ್ವಲಂತ ಸಮಸ್ಯೆಗಳ ಕುರಿತು ಧ್ವನಿ ಎತ್ತಿ ಜಿಲ್ಲೆಗೆ ನ್ಯಾಯ ಒದಗಿಸಲು ವಿಫಲರಾಗಿದ್ದಾರೆ.ಮಲ್ಲಿಕಾರ್ಜುನ ಬಟಗಿ, ಸೇವಾ ಸಂಘದ ರಾಜ್ಯಾಧ್ಯಕ್ಷ

Share this article