ಬರಗಾಲ ಘೋಷಿಸಿ ರೈತರನ್ನು ರಕ್ಷಿಸಿ

KannadaprabhaNewsNetwork |  
Published : Jul 09, 2026, 01:00 AM IST
ಪೋಟೊ8ಕೆಎಸಟಿ2:ಕುಷ್ಟಗಿ ಪಟ್ಟಣದ ತಹಸೀಲ್ದಾರ ಕಾರ್ಯಾಲಯದಲ್ಲಿ ಗ್ರೇಡ್ 2 ತಹಸೀಲ್ದಾರ ರಜನಿಕಾಂತ ಮೂಲಕ ಮುಖ್ಯಮಂತ್ರಿಗಳಿಗೆ ಕರ್ನಾಟಕ ರಾಜ್ಯ ರೈತಪರ ಹೋರಾಟ ಸಂಘ ಮೈಸೂರು ಜಿಲ್ಲೆ ಹಾಗೂ ತಾಲೂಕು ಘಟಕದ ವತಿಯಿಂದ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಕೊಪ್ಪಳ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ಬೆಳೆ ವಿಮೆ ಪರಿಹಾರ ಶೀಘ್ರವಾಗಿ ರೈತರಿಗೆ ತಲುಪಿಸಬೇಕು

ಕುಷ್ಟಗಿ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯಾದ್ಯಂತ ಬರದ ಛಾಯೆ ಆವರಿಸಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ಸಮಗ್ರ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತಪರ ಹೋರಾಟ ಸಂಘ ಮೈಸೂರು ಜಿಲ್ಲೆ ಹಾಗೂ ತಾಲೂಕು ಘಟಕದಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ದೋಟಿಹಾಳ ಮಾತನಾಡಿ, ರೈತರು ಸಾಲಸೋಲ ಮಾಡಿ ಬೀಜ, ರಸಗೊಬ್ಬರ ಹಾಗೂ ಕೃಷಿ ಚಟುವಟಿಕೆಗಳಿಗೆ ಲಕ್ಷಾಂತರ ವೆಚ್ಚ ಮಾಡಿದ್ದಾರೆ. ಆದರೆ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಬೆಳೆಗಳು ಒಣಗುತ್ತಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ಧಾವಿಸಬೇಕಿದ್ದು, ತಕ್ಷಣವೇ ಬೆಳೆ ಹಾನಿ ಸಮೀಕ್ಷೆ ಆರಂಭಿಸಿ ವೈಜ್ಞಾನಿಕ ಮಾನದಂಡದಂತೆ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.

ಕೊಪ್ಪಳ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ಬೆಳೆ ವಿಮೆ ಪರಿಹಾರ ಶೀಘ್ರವಾಗಿ ರೈತರಿಗೆ ತಲುಪಿಸಬೇಕು. ಪ್ರತಿ ಗ್ರಾಪಂನಲ್ಲಿ ಗೋಶಾಲೆ ಆರಂಭಿಸಿ ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು.ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಿ ಗುಳೆ ಹೋಗುವುದನ್ನು ತಡೆಯಲು ಸರ್ಕಾರ ವಿಶೇಷ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹನಮೇಶ ಶಾಖಾಪೂರು, ಜಿಲ್ಲಾ ಕಾರ್ಯಾಧ್ಯಕ್ಷ ಹೊನ್ನಪ್ಪ ತಳವಾರ, ತಾಲೂಕು ಗೌರವಾಧ್ಯಕ್ಷ ವೀರೇಶ ನಂದಿಹಾಳ, ತಾಲೂಕಾಧ್ಯಕ್ಷ ಹನುಮಗೌಡ ಹಿರೇಮನಿ, ಉಪಾಧ್ಯಕ್ಷ ಚಂದ್ರು ಪಾಟೀಲ, ಮುಖಂಡ ಸಣ್ಣ ಈರಪ್ಪ ರಾಠೋಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್ಐಆರ್: ಶೇ.90 ಅರ್ಜಿ ವಿತರಣೆ
ಸಿಗದ ಸಮರ್ಪಕ ಪರಿಹಾರ: ಕಾಮಗಾರಿ ಸ್ಥಗಿತಗೊಳಿಸಿ ರೈತರ ಪ್ರತಿಭಟನೆ