ಎಲ್ಲಾ ರಂಗಗಳಲ್ಲೂ ಮೌಲ್ಯಗಳು ಕುಸಿತ: ಪಿ.ಎಂ.ನರೇಂದ್ರಸ್ವಾಮಿ

KannadaprabhaNewsNetwork |  
Published : Oct 02, 2026, 01:45 AM IST
1ಕೆಎಂಎನ್ ಡಿ18 | Kannada Prabha

ಸಾರಾಂಶ

ಶಾಸಕಾಂಗ ಕಾರ್ಯಾಂಗ, ನ್ಯಾಯಾಂಗಗಳ‌ಲ್ಲಿನ ನ್ಯೂನ್ಯತೆಯನ್ನು ಎತ್ತಿ ಹಿಡಿಯಬೇಕಾದ ಪತ್ರಿಕಾ ರಂಗದಲ್ಲಿ ಲೋಪಗಳು ಕಂಡು ಬರುತ್ತಿರುವುದು ಸಮಸ್ಯೆಯನ್ನು ಇನ್ನಷ್ಟು ತೀವ್ರಗೊಳ್ಳಲು ಕಾರಣವಾಗಿದೆ. ಶೈಕ್ಷಣಿಕವಾಗಿ ಎಷ್ಟೇ ಮುಂದುವರಿದರೂ ಸಮಾಜದಲ್ಲಿ ಜಾತಿ, ಧರ್ಮ ಭೇದಗಳು ಹೆಚ್ಚುತ್ತಿವೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಮಾಧ್ಯಮ, ರಾಜಕೀಯ ಕ್ಷೇತ್ರ ಸೇರಿದಂತೆ ಎಲ್ಲಾ ರಂಗಗಳಲ್ಲೂ ಮೌಲ್ಯಗಳು ಕುಸಿಯುತ್ತಿರುವುದರಿಂದ ದೇಶದಲ್ಲಿ ಕ್ರಾಂತಿ ಉಂಟಾಗುವ ಕಾಲ ಬಹಳ ದೂರವಿಲ್ಲ ಎಂದು ಕೃಷಿ ಸಚಿವ ಸಚಿವ ಪಿ.ಎಂ.ನರೇಂದ್ರಸ್ವಾಮಿ ಎಚ್ಚರಿಸಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಸಮಿತಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಕ್ರಾಂತಿಯ ಮುನ್ಸೂಚನೆ ಕಾಣುತ್ತಿದ್ದರೂ ಎಚ್ಚೆತ್ತುಕೊಳ್ಳದಿರುವುದು ನೋವಿನ ಸಂಗತಿ ಎಂದರು.

ಶಾಸಕಾಂಗ ಕಾರ್ಯಾಂಗ, ನ್ಯಾಯಾಂಗಗಳ‌ಲ್ಲಿನ ನ್ಯೂನ್ಯತೆಯನ್ನು ಎತ್ತಿ ಹಿಡಿಯಬೇಕಾದ ಪತ್ರಿಕಾ ರಂಗದಲ್ಲಿ ಲೋಪಗಳು ಕಂಡು ಬರುತ್ತಿರುವುದು ಸಮಸ್ಯೆಯನ್ನು ಇನ್ನಷ್ಟು ತೀವ್ರಗೊಳ್ಳಲು ಕಾರಣವಾಗಿದೆ ಎಂದರು.

ಶೈಕ್ಷಣಿಕವಾಗಿ ಎಷ್ಟೇ ಮುಂದುವರಿದರೂ ಸಮಾಜದಲ್ಲಿ ಜಾತಿ, ಧರ್ಮ ಭೇದಗಳು ಹೆಚ್ಚುತ್ತಿವೆ. ಸಮಾಜದ ನ್ಯೂನ್ಯತೆ ಬಗ್ಗೆ ಬೆಳಕು ಚೆಲ್ಲುವ ಅಧ್ಯಯನ ವರದಿಗಳು ಸಹ ಮಾಧ್ಯಮಗಳಲ್ಲಿ ಕಡಿಮೆಯಾಗುತ್ತಿವೆ ಎಂದು ವಿಷಾದಿಸಿದರು.

ಇದೇ ವೇಳೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಆಯ್ದ ಪತ್ರಕರ್ತರನ್ನು ಸನ್ಮಾನಿಸಲಾಯಿತು. ವಿಧಾನ ಪರಿಷತ್ ಸದಸ್ಯ ಎಸ್.ಶಿವಣ್ಣ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಮತ್ತಿಕೆರೆ ಜಯರಾಮ್, ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ್ ಕಾಡುಕೊತ್ತನಹಳ್ಳಿ, ತಹಸೀಲ್ದಾರ್ ಡಾ.ಲೋಕೇಶ್, ತಾಪಂ ಇಒ ಶ್ರೀನಿವಾಸ್ ಉಪಸ್ಥಿತರಿದ್ದರು. ಸಂಘದ ತಾಲೂಕು ಅಧ್ಯಕ್ಷ ಜಯರಾಜು ಒಕ್ಕರಹಳ್ಳಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪತ್ರಕರ್ತರು ಹಾಜರಿದ್ದರು.

ಶ್ರೀರಂಗಪಟ್ಟಣ ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಫಿ ಪಡಿಸಿ ಎಚ್ಡಿಕೆಯಿಂದ ಪ್ರಸ್ತಾವನೆ

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣಸ್ವದೇಶ್ ದರ್ಶನ್ 2.0 ಯೋಜನೆಯಡಿ ಶ್ರೀರಂಗಪಟ್ಟಣವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸುವ ಪ್ರಸ್ತಾವನೆಯನ್ನು ಮಂಡ್ಯ ಸಂಸದರೂ ಆದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಸಲ್ಲಿಸಿದರು.

ದೆಹಲಿಯ ಶೇಖಾವತ್ ಅವರ ಕಚೇರಿಯಲ್ಲಿ ಗುರುವಾರ ಭೇಟಿಯಾದ ಎಚ್.ಡಿ ಕುಮಾರಸ್ವಾಮಿ ಅವರು ಶ್ರೀರಂಗಪಟ್ಟಣವು ಐಹಾಸಿಕ ಬಹುಮುಖ್ಯ ಪ್ರವಾಸಿ ತಾಣವಾಗಿದೆ. ಇತಿಹಾಸ ಪ್ರಸಿದ್ಧ ಶ್ರೀರಂಗನಾಥ ಸ್ವಾಮಿ ಸನ್ನಿಧಿ ಸೇರಿದಂತೆ ಹಲವು ದೇವಾಲಯಗಳು ಮತ್ತು ಪ್ರಸಿದ್ಧ ಪ್ರವಾಸಿ ತಾಣಗಳು ಇವೆ. ಇಂತಹ ಅಪರೂಪದ ತಾಣವನ್ನು ಪ್ರವಾಸೋದ್ಯಮ ಕೇಂದ್ರಿತ ತಾಣವನ್ನಾಗಿ ಅಭಿವೃದ್ದಿಪಡಿಸಬೇಕು ಎಂದು ಕೋರಿದರು.ಈ ಬಗ್ಗೆ ಶೇಖಾವತ್ ಅವರಿಗೆ ಸಲ್ಲಿಸಲಾದ ವಿಸ್ತೃತ ಯೋಜನಾ ವರದಿಯು (ಡಿಪಿಆರ್) ಶ್ರೀರಂಗಪಟ್ಟಣದ ಶ್ರೀಮಂತ ಪರಂಪರೆ ಮತ್ತು ಪ್ರವಾಸೋದ್ಯಮ ಸಾಮರ್ಥ್ಯದ ಕೇಂದ್ರೀಕೃತ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡಿದೆ. ಕರ್ನಾಟಕದಲ್ಲಿ ಪ್ರವಾಸೋದ್ಯಮ ಮೂಲ ಸೌಕರ್ಯ ಬಲಪಡಿಸಲು ಕೇಂದ್ರದ ಬೆಂಬಲವನ್ನು ಕೋರಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.

ತಾವು ನೀಡಿರುವ ಮನವಿಯ ಬಗ್ಗೆ ಸಚಿವ ಶೇಖಾವತ್ ಅವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಬಗ್ಗೆ ಆದ್ಯತೆಯ ಮೇರೆಗೆ ಪರಿಶೀಲಿಸಿ ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದಾರೆ. ಶ್ರೀರಂಗಪಟ್ಟಣದ ಬಗ್ಗೆ ಅವರಿಗೆ ವಿಶೇ ಆಸಕ್ತಿ ಇದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯಗೊಳ್ಳಬೇಕು: ಕಾವೇರಿ
ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಕ್ರೀಡಾಕೂಟ..!