ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಂಠಿತ: ಶಾಸಕ ಎಸ್.ಎನ್.ನಾರಾಯಣಸ್ವಾಮಿ

KannadaprabhaNewsNetwork |  
Published : Jun 01, 2025, 03:11 AM IST
31ಕೆಬಿಪಿಟಿ.1.ಬಂಗಾರಪೇಟೆ ಪಟ್ಟಣದ ಪಿಎಂ ಶ್ರೀ ಕರ್ನಾಟಕ ಮಾದರಿ ಶಾಲೆಯಮಕ್ಕಳಿಗೆ ಪುಸ್ತಕ ಹಾಗೂ ಸಮವಸ್ತ್ರ ವಿತರಿಸುತ್ತಿರುವ ಶಾಸಕ ನಾರಾಯಣಸ್ವಾಮಿ. | Kannada Prabha

ಸಾರಾಂಶ

ಸರ್ಕಾರ ಬಡವರ ಮಕ್ಕಳಿಗೆ ಉಚಿತವಾಗಿ ಗುಣಮಟ್ಟದ ಶಿಕ್ಷಣವನ್ನು ನೀಡಲು ಮುಂದಾಗಿದೆ, ಆದರೆ ಗ್ರಾಮೀಣ ಪ್ರದೇಶದಲ್ಲಿರುವ ಪೋಷಕರು ಖಾಸಗಿ ಶಾಲೆಗಳ ಕಡೆ ಆಸಕ್ತಿ ತೋರುತ್ತಿರುವುದರಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕ್ಷೀಣಿಸುತ್ತಿರುವುದು ಆತಂಕ ಮೂಡಿಸುತ್ತಿದೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಂಗಾರಪೇಟೆ

ಸರ್ಕಾರ ಬಡವರ ಮಕ್ಕಳಿಗೆ ಉಚಿತವಾಗಿ ಗುಣಮಟ್ಟದ ಶಿಕ್ಷಣವನ್ನು ನೀಡಲು ಮುಂದಾಗಿದೆ, ಆದರೆ ಗ್ರಾಮೀಣ ಪ್ರದೇಶದಲ್ಲಿರುವ ಪೋಷಕರು ಖಾಸಗಿ ಶಾಲೆಗಳ ಕಡೆ ಆಸಕ್ತಿ ತೋರುತ್ತಿರುವುದರಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕ್ಷೀಣಿಸುತ್ತಿರುವುದು ಆತಂಕ ಮೂಡಿಸುತ್ತಿದೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.ಪಟ್ಟಣದ ಪಿಎಂ ಶ್ರೀ ಕರ್ನಾಟಕ ಮಾದರಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶೈಕ್ಷಣಿಕ ವರ್ಷದ ಮಕ್ಕಳಿಗೆ ಸ್ವಾಗತ ಕೋರುವ ಸಮಾರಂಭ ಹಾಗೂ ಮಕ್ಕಳಿಗೆ ಸಮವಸ್ತ್ರ ಮತ್ತು ಪುಸ್ತಕಗಳ ವಿತರಣಾ ಸಮಾರಂಭದಲ್ಲಿ ಮಾತನಾಡಿದರು. ದುಬಾರಿ ದುನಿಯಾದಲ್ಲಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ದಾಖಲಿಸಿ ಶಿಕ್ಷಣ ಕೊಡಿಸುವುದು ಕಷ್ಟವೆಂದು ತಿಳಿದು ಪೋಷಕರಿಗೆ ದುಂದು ವೆಚ್ಚ ಕಡಿಮೆ ಮಾಡಲು ಸರ್ಕಾರ ಉಚಿತವಾಗಿ ಶಿಕ್ಷಣದ ಜತೆ ಬಿಸಿಯೂಟ,ಬಟ್ಟೆ,ಪುಸ್ತಕ ಹಾಗೂ ಪ್ರಸಕ್ತ ವರ್ಷದಿಂದ ಎಲ್‌ಕೆಜಿಯಿಂದ ೮ನೇ ತರಗತಿವರೆಗೂ ಆಂಗ್ಲ ಮಾಧ್ಯಮವನ್ನು ಸರ್ಕಾರಿ ಶಾಲೆಗಳಲ್ಲಿ ಆರಂಭಿಸಿದೆ.ಇಷ್ಟೆಲ್ಲಾ ಸೌಲಭ್ಯಗಳನ್ನು ಒದಗಿಸಿದರೂ ಸಹ ಗ್ರಾಮೀಣ ಪ್ರದೇಶದಲ್ಲಿ ಪೋಷಕರಿಗೆ ತಮ್ಮ ಮಕ್ಕಳು ಖಾಸಗಿ ಶಾಲೆಗಳಿಗೆ ಹೋದರೆ ಮಾತ್ರ ಹೆಮ್ಮೆ ಎಂಬ ಭಾವಣೆ ಇಟ್ಟುಕೊಂಡಿದ್ದಾರೆ, ಖಾಸಗಿ ಶಾಲೆಗಳಿಗಿಂತಲೂ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಶಿಕ್ಷಕರು ಒತ್ತು ಕೊಡುತ್ತಿದ್ದಾರೆ, ಸರ್ಕಾರಿ ಶಾಲೆಗಲಲ್ಲಿ ಓದಿದವರು ಉತ್ತನ ಮಟ್ಟದಲ್ಲಿ ಅಧಿಕಾರಿಗಳಾಗಿದ್ದಾರೆ, ಈ ವರ್ಷ ೧೨ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಸರ್ಕಾರ ಆದೇಶ ಮಾಡಿದೆ, ಖಾಸಗಿ ಶಾಲೆಗಳಲ್ಲಿ ದೊರೆಯದಷ್ಟು ಸೌಲಭ್ಯಗಳು ಸರ್ಕಾರಿ ಶಾಲೆಗಳಲ್ಲಿ ಸಿಗುತ್ತಿದೆ,

ಶ್ರಮಿಕರ ಮಕ್ಕಳಿಗಾಗಿ ಪ್ರತ್ಯೇಕವಾಗಿ ₹೩೦ ಕೋಟಿ ವೆಚ್ಚದಲ್ಲಿ ವಸತಿ ಶಾಲೆ ಸಹ ತಾಲೂಕಿನಲ್ಲಿ ತಲೆ ಎತ್ತಲಿದೆ. ಪಿಎಂ ಶ್ರೀ ಕರ್ನಾಟಕ ಮಾದರಿ ಶಾಲೆಯನ್ನು ₹೨೦ ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡಗಳನ್ನು ನಿರ್ಮಾಣ ಮಾಡಿ ಇನ್ನು ೭ತಿಂಗಳಲ್ಲಿ ಮಾದರಿ ಶಾಲೆಗೆ ತಕ್ಕಂತೆ ಕಾರ್ಯನಿರ್ವಹಿಸಲಿದೆ ಎಂದರು. ಪುರಸಭೆ ಅಧ್ಯಕ್ಷ ಗೋವಿಂದ,ಬಿಇಒ ಗುರುಮೂರ್ತಿ, ನಾರಾಯಣಸ್ವಾಮಿ, ನೌಕರ ಸಂಘದ ಅಧ್ಯಕ್ಷ ರವಿ,ಶಿಕ್ಷಕರ ಸಂಘದ ಅಧ್ಯಕ್ಷ ಆಂಜನೇಯಗೌಡ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮುನಿನಾರಾಯಣಪ್ಪ, ಶಿಕ್ಷಕರಾದ ರಾಜಪ್ಪ, ಶ್ರೀನಾಥ್ ಇದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ