ಪೆರ್ಡೂರು ಬಂಟರ ಭವನ ಲೋಕಾರ್ಪಣೆ

KannadaprabhaNewsNetwork |  
Published : Feb 12, 2024, 01:34 AM IST
ಪೆರ್ಡೂರು ಬಂಟರ ಸಂಘ ಪೆರ್ಡೂರು ಮಂಡಲ ವತಿಯಿಂದ ಸುಮಾರು 7 ಕೋಟಿ ರು. ವೆಚ್ಚದಲ್ಲಿ ಉಡುಪಿ-ಆಗುಂಬೆ ರಾ.ಹೆ.ಯ ಪೆರ್ಡೂರಿನಲ್ಲಿ ನಿರ್ಮಿಸಲಾಗಿರುವ ಸುಸಜ್ಜಿತ ಶ್ರೀಮತಿ ಸರ್ವಾಣಿ ಪಳ್ಳಿ ಶ್ರೀನಿವಾಸ ಹೆಗ್ಡೆ ಬಂಟರ ಸಮುದಾಯ ಭವನ ಲೋಕಾರ್ಪಣೆ ಗೊಳಿಸಿ ಮಾತನಾಡಿದರು. | Kannada Prabha

ಸಾರಾಂಶ

ಪೆರ್ಡೂರು ಬಂಟರ ಸಂಘ ವತಿಯಿಂದ ಸುಮಾರು 7 ಕೋಟಿ ರು. ವೆಚ್ಚದಲ್ಲಿ ಉಡುಪಿ-ಆಗುಂಬೆ ರಾ.ಹೆ.ಯ ಪೆರ್ಡೂರಿನಲ್ಲಿ ನಿರ್ಮಿಸಲಾಗಿರುವ ಸುಸಜ್ಜಿತ ಶ್ರೀಮತಿ ಸರ್ವಾಣಿ ಪಳ್ಳಿ ಶ್ರೀನಿವಾಸ ಹೆಗ್ಡೆ ಬಂಟರ ಸಮುದಾಯ ಭವನ ಲೋಕಾರ್ಪಣೆಗೊಳಿಸಲಾಯಿತು.

ಕನ್ನಡಪ್ರಭ ವಾರ್ತೆ ಕಾರ್ಕಳ

ಬಂಟರು ಹಲವು ಸಾಧನೆಗಳನ್ನು ಮಾಡಿದ ಸಾಧಕರಾಗಿದ್ದಾರೆ. ಬಂಟರು ಜಾಗತಿಕವಾಗಿ ಗುರುತಿಸಲ್ಪಟ್ಟರೂ ಕೂಡ ಜನ್ಮಭೂಮಿ ಮರೆಯದೆ ಕೊಡುಗೆ ಕೊಟ್ಟವರಾಗಿದ್ದಾರೆ‌. ಸಾಮಾಜಿಕ ಕ್ಷೇತ್ರ ಸೇರಿದಂತೆ ದೇಶದ ಎಲ್ಲ ಕ್ಷೇತ್ರಗಳಲ್ಲೂ ಬಂಟರು ಕಂಗೊಳಿಸುತಿದ್ದಾರೆ ಎಂದು ಎಂಜಿಆರ್ ಗ್ರೂಪ್ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಹೇಳಿದರು.ಅವರು ಪೆರ್ಡೂರು ಬಂಟರ ಸಂಘ ವತಿಯಿಂದ ಸುಮಾರು 7 ಕೋಟಿ ರು. ವೆಚ್ಚದಲ್ಲಿ ಉಡುಪಿ-ಆಗುಂಬೆ ರಾ.ಹೆ.ಯ ಪೆರ್ಡೂರಿನಲ್ಲಿ ನಿರ್ಮಿಸಲಾಗಿರುವ ಸುಸಜ್ಜಿತ ಶ್ರೀಮತಿ ಸರ್ವಾಣಿ ಪಳ್ಳಿ ಶ್ರೀನಿವಾಸ ಹೆಗ್ಡೆ ಬಂಟರ ಸಮುದಾಯ ಭವನ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿ, ರಾಜ್ಯದಲ್ಲಿ ಬಂಟರ ಸಂಖ್ಯೆಯು ಕಡಿಮೆಯಾಗುತ್ತಿದ್ದು, ಉದ್ಯೋಗಕ್ಕಾಗಿ ವಿದೇಶಗಳಿಗೆ ಸಾಗುತಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಉದ್ದಿಮೆಗಳನ್ನು ಕಟ್ಟಿ ಮುಂದಿನ ಜನಾಂಗದಕ್ಕೆ ಉದ್ಯೋಗಾವಕಾಶಗಳನ್ನು ಕಲ್ಪಿಸಿ ಎಂದರು.ಪೆರ್ಡೂರು ಬಂಟರ ಸಂಘ ಅಧ್ಯಕ್ಷ ಶಾಂತಾರಾಮ ಸೂಡ ಪ್ರಾಸ್ತಾವಿಕವಾಗಿ ಮಾತನಾಡಿ, ಬಂಟರ ಭವನದ ಕನಸು ನನಾಸಗುತ್ತಿರುವುದು ಸಂತಸವಾಗುತ್ತಿದೆ ಎಂದರು.ವಿಧಾನ ಪರಿಷತ್ ಸದಸ್ಯ ಎಚ್.ಮಂಜುನಾಥ ಭಂಡಾರಿ ಮಾತನಾಡಿ, ಶ್ರೀಮತಿ ಸರ್ವಾಣಿ ಪಳ್ಳಿ ಶ್ರೀನಿವಾಸ ಹೆಗ್ಡೆಯವರ ಮಾರ್ಗದರ್ಶನ ನನ್ನ ಬದುಕಿಗೆ ಅಪಾರವಾಗಿದೆ ಎಂದ ಅವರು, ಸಂಘದ ಅಧ್ಯಕ್ಷ ಶಾಂತರಾಂ ಸೂಡ ಅವರ ನಾಯಕತ್ವವನ್ನು ಕೊಂಡಾಡಿದರು.ಮುಂಬೈ ರಾಮಕೃಷ್ಣ ಗ್ರೂಪ್ ಆಫ್ ಹೋಟೆಲ್‌ನ ಚಂದ್ರಶೇಖರ ಶೆಟ್ಟಿ, ನಟರಾಜ್ ಹೆಗ್ಡೆ, ಮಾಹೆಯ ಕುಲಾಧಿಪತಿ ಎಚ್.ಎಸ್. ಬಳ್ಳಾಲ್ ಮಾತನಾಡಿದರು.ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಬಂಟರ ಸಂಘಗಳ ಒಕ್ಕೂಟ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬ್ರಹ್ಮಾವರ ಬಂಟರ ಸಂಘ ಮಾಜಿ ಅಧ್ಯಕ್ಷ ಶೇಡಿಕೊಡ್ಲು ವಿಠಲ ಶೆಟ್ಟಿ, ವೀಣಾ ಸತೀಶ್ಚಂದ್ರ ಹೆಗ್ಡೆ, ಸಿಟಿ ಆಸ್ಪತ್ರೆ ಮಂಗಳೂರು ಆಡಳಿತ ನಿರ್ದೇಶಕ ಡಾ.ಕೈಲ್ಕೆರೆ ಭಾಸ್ಕರ ಶೆಟ್ಟಿ, ಪಳ್ಳಿ ಪಜೆಕೊಡಂಗೆ ಲೀಲಾವತಿ ಎಸ್. ಹೆಗ್ಡೆ, ನಿವೃತ್ತ ವೈದ್ಯಾಧಿಕಾರಿ ಡಾ. ಎ.ಮನೋರಂಜನ ದಾಸ್ ಹೆಗ್ಡೆ, ಸಿಎ ಎನ್.ಬಿ. ಶೆಟ್ಟಿ, ಕಾಪು ಶಾಸಕ. ಸುರೇಶ್ ಶೆಟ್ಟಿ ಗುರ್ಮೆ, ಅದಾನಿ ಗ್ರೂಪ್ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಉದ್ಯಮಿಗಳಾದ ಸುಧಾಕರ ಶೆಟ್ಟಿ, ದಿನೇಶ್ ಹೆಗ್ಡೆ ಬೆಂಗಳೂರು, ಕೆ.ರಾಜರಾಮ ಹೆಗ್ಡೆ, ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ಸಂಚಾಲಕ ಶಿವಪ್ರಸಾದ್ ಹೆಗ್ಡೆ, ನಮಿತಾ, ಮುನಿಯಾಲು ಉದಯಕುಮಾರ್ ಶೆಟ್ಟಿ, ಉಪಾಧ್ಯಕ್ಷ ದಿನೇಶ್ಚಂದ್ರ ಶೆಟ್ಟಿ ಬಜ್ಜಾಲು, ರಾಜಕುಮಾರ್‌ ಶೆಟ್ಟಿ ದೊಡ್ಡನೆ, ಶಿವರಾಮ ಶೆಟ್ಟಿ ಬೆಳ್ಳರ್ಪಾಡಿ, ಮಹೇಶ್ ಶೆಟ್ಟಿ ಪೈಬೆಟ್ಟು, ಕೋಶಾಧಿಕಾರಿ ಪ್ರಮೋದ್ ರೈ ಪಳಜೆ ಉಪಸ್ಥಿತರಿದ್ದರು.ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ ಶೆಟ್ಟಿ ಕುತ್ಯಾರುಬೀಡು ಸ್ವಾಗತಿಸಿದರು. ವಿಜಯಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಭಕ್ತಿ ಸಂಗೀತ, ಪಾಂಚಜನ್ಯ- ಅಸಿಕಾ ಪರಿಣಯ ಯಕ್ಷಗಾನ ಪ್ರದರ್ಶನ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!