ಕೆಲಸದ ಸ್ಥಳದಲ್ಲಿ ಗೌರವ, ಸುರಕ್ಷತೆ ಪ್ರತಿಯೊಬ್ಬ ಮಹಿಳೆಯ ಹಕ್ಕು: ಮರ್ಲಿನ್ ಮಾರ್ಟಿಸ್

KannadaprabhaNewsNetwork |  
Published : Sep 28, 2026, 02:30 AM IST
ಮಂಗಳೂರಿನ ಡೀಡ್ಸ್ ಸಂಸ್ಥೆಯ ನಿರ್ದೇಶಕಿ ಮರ್ಲಿನ್ ಮಾರ್ಟಿಸ್ ಮಾತನಾಡುತ್ತಿರುವುದು | Kannada Prabha

ಸಾರಾಂಶ

ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಆಂತರಿಕ ಸಮಿತಿ ಆಯೋಜಿಸಿದ್ದ ದುಡಿಯುವ ಸ್ಥಳಗಳಲ್ಲಿ ಮಹಿಳೆಯರ ಲೈಂಗಿಕ ದೌರ್ಜನ್ಯ ತಡೆ ಕುರಿತ ಜಾಗೃತಿ ಕಾರ್ಯಕ್ರಮ

ಮೂಡುಬಿದಿರೆ: ಮಹಿಳೆಯರ ಸುರಕ್ಷತೆ ಮತ್ತು ಘನತೆಯನ್ನು ಕಾಪಾಡುವ ನಿಟ್ಟಿನಲ್ಲಿ 2013ರಲ್ಲಿ ಭಾರತದಲ್ಲಿ ಪೋಷ್ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಮಂಗಳೂರಿನ ಡೀಡ್ಸ್ ಸಂಸ್ಥೆಯ ನಿರ್ದೇಶಕಿ ಮರ್ಲಿನ್ ಮಾರ್ಟಿಸ್ ಹೇಳಿದರು.

ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಆಂತರಿಕ ಸಮಿತಿ ಆಯೋಜಿಸಿದ್ದ ದುಡಿಯುವ ಸ್ಥಳಗಳಲ್ಲಿ ಮಹಿಳೆಯರ ಲೈಂಗಿಕ ದೌರ್ಜನ್ಯ ತಡೆ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಎದುರಾಗುವ ಲೈಂಗಿಕ ಕಿರುಕುಳವನ್ನು ತಡೆಗಟ್ಟುವುದು ಕೇವಲ ಸಂಸ್ಥೆಯ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ಉದ್ಯೋಗಿಯೂ ಈ ಕುರಿತು ಅರಿವು ಹೊಂದಿರಬೇಕು. ಲೈಂಗಿಕ ಕಿರುಕುಳಕ್ಕೆ ಒಳಗಾದ ಸಂದರ್ಭದಲ್ಲಿ ಭಯ ಅಥವಾ ಮುಜುಗರಕ್ಕೆ ಒಳಗಾಗದೆ, ತಕ್ಷಣವೇ ಸಂಬಂಧಪಟ್ಟವರಿಗೆ ದೂರು ನೀಡಬೇಕು. ದೂರು ನೀಡುವ ವ್ಯವಸ್ಥೆ, ಸಂತ್ರಸ್ತೆಯ ಗೌಪ್ಯತೆ ಹಾಗೂ ಆಂತರಿಕ ಸಮಿತಿಯ ಜವಾಬ್ದಾರಿಗಳ ಕುರಿತು ಪ್ರತಿಯೊಬ್ಬರೂ ತಿಳಿದುಕೊಳ್ಳುವುದು ಅಗತ್ಯ ಎಂದು ತಿಳಿಸಿದರು.

ಹತ್ತಕ್ಕಿಂತ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ಖಾಸಗಿ ಹಾಗೂ ಸಾರ್ವಜನಿಕ ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿ ರಚಿಸುವುದು ಕಡ್ಡಾಯವಾಗಿದೆ. ಈ ಸಮಿತಿಯು ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಲೈಂಗಿಕ ಕಿರುಕುಳದ ಸ್ವರೂಪ, ದೂರು ಸಲ್ಲಿಸುವ ವಿಧಾನ ಹಾಗೂ ಕಾಯ್ದೆಯಡಿ ದೊರೆಯುವ ರಕ್ಷಣೆಯ ಕುರಿತು ಉದ್ಯೋಗಿಗಳಲ್ಲಿ ನಿರಂತರ ಜಾಗೃತಿ ಮೂಡಿಸಬೇಕು ಎಂದರುಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ಸದಾಕತ್ ಮಾತನಾಡಿ, ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಸುರಕ್ಷಿತ ಮತ್ತು ಗೌರವಯುತ ವಾತಾವರಣ ಕಲ್ಪಿಸುವುದು ಅತೀ ಅಗತ್ಯ. ಕಾನೂನುಗಳ ಅರಿವಿನ ಜೊತೆಗೆ ಪರಸ್ಪರ ಗೌರವ, ಜವಾಬ್ದಾರಿ ಹಾಗೂ ಸಮಾನತೆಯ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ಉಪ ಪ್ರಾಂಶುಪಾಲೆ ಜಾನ್ಸಿ ಪಿ.ಎನ್. ಇದ್ದರು. ಆಂತರಿಕ ಸಮಿತಿಯ ಸಂಚಾಲಕಿ ಡಾ. ಸುಲತಾ ಸ್ವಾಗತಿಸಿದರು. ಕಾಲೇಜಿನ ಸಿಬ್ಬಂದಿ ವಿದ್ಯಾಶ್ರೀ ಆಶಯ ಗೀತೆ ಹಾಡಿದರು. ಆಂಗ್ಲ ಭಾಷಾ ಉಪನ್ಯಾಸಕ ಲಕ್ಷ್ಮಣ್ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆಜಿಬಿವಿ ಶಾಲೆ ಶೈಕ್ಷಣಿಕ, ಸ್ವಚ್ಛತಾ ವ್ಯವಸ್ಥೆಗೆ ಅಧಿಕಾರಿಗಳ ಮೆಚ್ಚುಗೆ
ನಾಳೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮನೆಗೆ ಮುತ್ತಿಗೆ