ದೀನದಯಾಳ್ ಉಪಾಧ್ಯಾಯ ಜೀವನಾದರ್ಶ ಸದಾ ಪ್ರೇರಣಾದಾಯಕ : ರತ್ನಾಕರ ಹೆಗ್ಡೆ

KannadaprabhaNewsNetwork |  
Published : Feb 12, 2024, 01:32 AM IST
ಬಿಜೆಪಿ ದೀನ್ ದಯಾಳ್ | Kannada Prabha

ಸಾರಾಂಶ

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಜನ ಸಂಘದ ಸಂಸ್ಥಾಪಕ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಪುಣ್ಯ ಸಂಸ್ಮರಣೆ ಹಾಗೂ ಸಮರ್ಪಣಾ ದಿನಾಚರಣೆಯ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಭಾರತೀಯ ಜನ ಸಂಘದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನ ದಯಾಳ್ ಉಪಾಧ್ಯಾಯರವರ ದೂರದರ್ಶಿತ್ವದ ಚಿಂತನೆಗಳು, ತ್ಯಾಗ, ಬಲಿದಾನ, ಜೀವನಾದರ್ಶಗಳು ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಉಡುಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಹೇಳಿದರು.

ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜನ ಸಂಘದ ಸಂಸ್ಥಾಪಕ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಪುಣ್ಯ ಸಂಸ್ಮರಣೆ ಹಾಗೂ ಸಮರ್ಪಣಾ ದಿನಾಚರಣೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಪಂಡಿತ್ ಜೀ ಅವರ ಅನುಮಾನಾಸ್ಪದ ಸಾವು ಇನ್ನೂ ನಿಗೂಢವಾಗಿದ್ದರೂ ಅವರು ಕೋಟ್ಯಾಂತರ ಕಾರ್ಯಕರ್ತರಿಗೆ ಚೈತನ್ಯ ಶಕ್ತಿಯಾಗಿ ಇಂದಿಗೂ ಪ್ರಾತ: ಸ್ಮರಣೀಯರಾಗಿದ್ದಾರೆ ಎಂದು ಮಟ್ಟಾರ್ ತಿಳಿಸಿದರು.

ಇದಕ್ಕೆ ಮೊದಲು ಪಕ್ಷದ ಮುಖಂಡರು, ವಿವಿಧ ಸ್ತರದ ಪದಾಧಿಕಾರಿಗಳು, ಜನ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಿಧಿ ಸಮರ್ಪಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮಂಗಳೂರು ವಿಭಾರಿ ಕೆ. ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶಾಸಕರಾದ ಯಶ್ಪಾಲ್ ಎ. ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ಗುರುರಾಜ್ ಗಂಟಿಹೊಳೆ, ನಿಕಟಪೂರ್ವ ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ನಿಕಟಪೂರ್ವ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಕೆ.ರಾಘವೇಂದ್ರ ಕಿಣಿ, ರೇಷ್ಮಾ ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ ಉಪಸ್ಥಿತರಿದ್ದರು.

PREV

Recommended Stories

ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!