ದೀಪ ಸಂಜೀವಿನಿ ವಿಶೇಷ ಮಾಸಿಕ ಸಂತೆ ಮೇಳ

KannadaprabhaNewsNetwork |  
Published : Nov 08, 2026, 01:15 AM IST
ದೀಪಾವಳಿ ಹಬ್ಬದ ಅಂಗವಾಗಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ (ಎನ್ಆರ್‌ಎಲ್‌ಎಂ) ವತಿಯಿಂದ ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಕಲ್ಪಿಸುವ ಹಾಗೂ ಮಹಿಳಾ ಉದ್ಯಮಶೀಲತೆ ಮತ್ತು ಜೀವನೋಪಾಯ ಚಟುವಟಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಯಾದಗಿರಿ ಜಿಲ್ಲಾ ಪಂಚಾಯತ್ ಆವರಣದಲ್ಲಿ “ದೀಪ ಸಂಜೀವಿನಿ” ವಿಶೇಷ ಮಾಸಿಕ ಸಂತೆಯನ್ನು ಆಯೋಜಿಸಲಾಗಿತ್ತು. | Kannada Prabha

ಸಾರಾಂಶ

ದೀಪಾವಳಿ ಹಬ್ಬದ ಅಂಗವಾಗಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ವತಿಯಿಂದ ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಕಲ್ಪಿಸುವ ಹಾಗೂ ಮಹಿಳಾ ಉದ್ಯಮಶೀಲತೆ ಮತ್ತು ಜೀವನೋಪಾಯ ಚಟುವಟಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಯಾದಗಿರಿ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ದೀಪ ಸಂಜೀವಿನಿ ವಿಶೇಷ ಮಾಸಿಕ ಸಂತೆ ಆಯೋಜಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಯಾದಗಿರಿ

ದೀಪಾವಳಿ ಹಬ್ಬದ ಅಂಗವಾಗಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ (ಎನ್ಆರ್‌ಎಲ್‌ಎಂ) ವತಿಯಿಂದ ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಕಲ್ಪಿಸುವ ಹಾಗೂ ಮಹಿಳಾ ಉದ್ಯಮಶೀಲತೆ ಮತ್ತು ಜೀವನೋಪಾಯ ಚಟುವಟಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಯಾದಗಿರಿ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ದೀಪ ಸಂಜೀವಿನಿ ವಿಶೇಷ ಮಾಸಿಕ ಸಂತೆ ಆಯೋಜಿಸಲಾಗಿತ್ತು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಬಸವರಾಜ ಶರಬೈ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಶರಣಬಸಪ್ಪ, ಆಹಾರ ಇಲಾಖೆಯ ನಿರ್ದೇಶಕ ಸೋಮಶೇಖರ್, ಮುಖ್ಯ ಕಾರ್ಯದರ್ಶಿಗಳ ಆಪ್ತ ಕಾರ್ಯದರ್ಶಿ ಮಂಜುನಾಥ್, ನಬಾರ್ಡ್ ಅಧಿಕಾರಿ ಯಮುನಾ ಪೈ ಮತ್ತಿತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಯೋಜನಾ ನಿರ್ದೇಶಕ ಬಸವರಾಜ ಶರಬೈ ಅವರು ವಿವಿಧ ಸ್ವಸಹಾಯ ಗುಂಪುಗಳ ಮಳಿಗೆಗಳಿಗೆ ಭೇಟಿ ನೀಡಿ, ಮಹಿಳೆಯರು ತಯಾರಿಸಿದ ಪದಾರ್ಥಗಳಾದ ಬೇಸನ್ ಲಾಡು, ಶೇಂಗಾ ಲಾಡು, ಚಕ್ಲಿ, ಕೋಡ್ಬಳೆ, ಕಜ್ಜಾಯ, ಕರ್ಚಿಕಾಯಿ ಅವಲಕ್ಕಿ ಚೂಡಾ, ಖಾರಾ ಹಾಗೂ ಇನ್ನಿತರ ವಿವಿಧ ಬಗೆಯ ಉತ್ಪನ್ನಗಳನ್ನು ಹಾಗೂ ದೀಪಾವಳಿ ಹಬ್ಬಕ್ಕೆ ಬೇಕಾಗುವ ವಿವಿಧ ಬಗೆಯ ಅಗರಬತ್ತಿ, ದೀಪದ ಬತ್ತಿ, ಮಹಿಳೆಯರ ಬಳೆಗಳು, ಬಂಜಾರಾ ಸಮಾಜದ ವಿವಿಧ ಉಡುಪುಗಳನ್ನು ವೀಕ್ಷಿಸಿದರು. ಕಿಲ್ಲನಕೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ವಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಮಣ್ಣಿನ ದೀಪಗಳು, ಬಣ್ಣದ ಮಣ್ಣಿನ ದೀಪಗಳು ಮುಖ್ಯ ಆಕರ್ಷಣೆಯಾಗಿದ್ದವು.

ಮುದ್ನಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ವಸಹಾಯ ಗುಂಪಿನ ಮಹಿಳೆಯರು, ಸಂತೆಗೆ ಆಗಮಿಸಿದ ಮಹಿಳೆಯರಿಗೆ ಸ್ಥಳದಲ್ಲಿ ಮೆಹಂದಿ ಹಾಕುವ ಮೂಲಕ ತಮ್ಮ ಕೌಶಲ್ಯ ಹಾಗೂ ಸೇವೆ ಪ್ರದರ್ಶಿಸಿದರು. ಇದು ಮಹಿಳೆಯರಲ್ಲಿರುವ ವಿವಿಧ ಕೌಶಲ್ಯಗಳ ಉದ್ಯೋಗ ಮತ್ತು ಆದಾಯದ ಮೂಲಗಳನ್ನಾಗಿ ಪರಿವರ್ತಿಸುವ ಉತ್ತಮ ಪ್ರಯತ್ನವಾಗಿ ಗಮನ ಸೆಳೆಯಿತು.

ಮಹಿಳೆಯರು ಸ್ವಾವಲಂಬಿಗಳಾಗಿ ಆರ್ಥಿಕವಾಗಿ ಸಬಲರಾಗಲು ಇಂತಹ ಮಾರುಕಟ್ಟೆ ಮತ್ತು ಉದ್ಯಮಶೀಲತಾ ಚಟುವಟಿಕೆಗಳು ಹೆಚ್ಚಿನ ಸಹಕಾರಿಯಾಗಲಿವೆ ಎಂದು ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿ ಮಹಿಳೆಯರನ್ನು ಪ್ರೋತ್ಸಾಹಿಸಿದರು. ಸುಮಾರು 10 ಸ್ವ ಸಹಾಯ ಗುಂಪುಗಳು ಭಾಗವಹಿಸಿದ್ದವು.

ಈ ವಿಶೇಷ ಸಂತೆ, ಸ್ವಸಹಾಯ ಗುಂಪಿನ ಮಹಿಳೆಯರಿಗೆ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಲು ಹಾಗೂ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಉತ್ತಮ ವೇದಿಕೆ ಒದಗಿಸಿತು. ಇದರಿಂದ ಮಹಿಳೆಯರ ಉತ್ಪನ್ನಗಳಿಗೆ ಮಾರುಕಟ್ಟೆ ಸಂಪರ್ಕ ಕಲ್ಪಿಸುವುದರ ಜತೆಗೆ ಮಹಿಳಾ ಉದ್ಯಮಶೀಲತೆ, ಸ್ವಾವಲಂಬನೆ ಮತ್ತು ಸುಸ್ಥಿರ ಜೀವನೋಪಾಯಕ್ಕೆ ಉತ್ತೇಜನ ದೊರೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಎನ್ಆರ್‌ಎಲ್‌ಎಂ ವ್ಯವಸ್ಥಾಪಕರಾದ ಸಿದ್ರಾಮಪ್ಪ, ಗಿರೀಶ್ ಮುಂಡರಗಿ ಮಠ, ಕಾವೇರಿ, ಪ್ರವೀಣ್, ರಮೇಶ್, ಉಮೇಶ್, ಬಸವರಾಜ ಮತ್ತು ಸುರೇಖಾ, ಶರಣು, ತಸ್ಲೀಮ್, ಮಹಾನಂದ, ಭುವನೇಶ್ವರಿ ಕೃಷಿ ಸಖಿಯರು ಹಾಗೂ ಪಶು ಸಖಿಯರು ಭಾಗವಹಿಸಿದ್ದರು.

----ಫೋಟೊ----

7ವೈಡಿಆರ್1

ದೀಪಾವಳಿ ಹಬ್ಬದ ಅಂಗವಾಗಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ವತಿಯಿಂದ ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಕಲ್ಪಿಸುವ ಹಾಗೂ ಮಹಿಳಾ ಉದ್ಯಮಶೀಲತೆ ಮತ್ತು ಜೀವನೋಪಾಯ ಚಟುವಟಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ದೀಪ ಸಂಜೀವಿನಿ ವಿಶೇಷ ಮಾಸಿಕ ಸಂತೆ ಆಯೋಜಿಸಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕವಿ ಹೃದಯದ ಡಾ.ಚೆನ್ನಬಸವ ಶ್ರೀಗಳು: ತೋಂಟದಾರ್ಯ ಶ್ರೀ
ಶಿರಗುಪ್ಪಿ ಕಾರ್ಖಾನೆಯಿಂದ ₹4,000 ದರ ಘೋಷಣೆ