ಬಡವರ ಮನೆಯಲ್ಲಿ ದೀಪಾವಳಿಗೆ ನೆರವಾದ ಬಿಲ್ಲವ ಯುವಕರು

KannadaprabhaNewsNetwork |  
Published : Nov 08, 2026, 02:45 AM IST
07ಯುವ | Kannada Prabha

ಸಾರಾಂಶ

ದೀಪಾವಳಿ ಎಂದರೆ ಕೇವಲ ದೀಪಗಳನ್ನು ಬೆಳಗಿಸುವ ಹಬ್ಬವಲ್ಲ, ಮತ್ತೊಬ್ಬರ ಬದುಕಿನಲ್ಲೂ ಸಂತೋಷದ ಬೆಳಕನ್ನು ಮೂಡಿಸುವ ಹಬ್ಬ ಎಂಬ ಆಶಯದೊಂದಿಗೆ ಬ್ರಹ್ಮಾವರ ಬಿಲ್ಲವ ಸಂಘದ ಬಿಲ್ಲವ ಯುವ ವೇದಿಕೆ ವತಿಯಿಂದ ಶನಿವಾರ ‘ಅರಿವಿನ ಗುರು – ಗುರುವಿನ ಬೆಳಕು’ ಎಂಬ ವಿಶೇಷ ದೀಪಾವಳಿ ಸೇವಾ ಕಾರ್ಯಕ್ರಮ

ಬ್ರಹ್ಮಾವರ: ದೀಪಾವಳಿ ಎಂದರೆ ಕೇವಲ ದೀಪಗಳನ್ನು ಬೆಳಗಿಸುವ ಹಬ್ಬವಲ್ಲ, ಮತ್ತೊಬ್ಬರ ಬದುಕಿನಲ್ಲೂ ಸಂತೋಷದ ಬೆಳಕನ್ನು ಮೂಡಿಸುವ ಹಬ್ಬ ಎಂಬ ಆಶಯದೊಂದಿಗೆ ಬ್ರಹ್ಮಾವರ ಬಿಲ್ಲವ ಸಂಘದ ಬಿಲ್ಲವ ಯುವ ವೇದಿಕೆ ವತಿಯಿಂದ ಶನಿವಾರ ‘ಅರಿವಿನ ಗುರು – ಗುರುವಿನ ಬೆಳಕು’ ಎಂಬ ವಿಶೇಷ ದೀಪಾವಳಿ ಸೇವಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ, ವಿಧವೆಯರ ಕುಟುಂಬಗಳಿಗೆ ದೀಪಾವಲಿ ಹಬ್ಬದ ಪ್ರಯುಕ್ತ ದಿನಬಳಕೆಯ ಅಗತ್ಯ ವಸ್ತುಗಳು, ಹೊಸ ಬಟ್ಟೆಗಳು, ಪಟಾಕಿ ಹಾಗೂ ಉಡುಗೊರೆಗಳನ್ನು ವಿತರಿಸಲಾಯಿತು.

ಈ ಸಂಭ್ರಮದಲ್ಲಿ ಭಾಗಿಯಾದ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ‘ನಮ್ಮ ಮನೆಯ ಅಂಗಳದಲ್ಲಿ ದೀಪ ಬೆಳಗಿಸುವುದರ ಜೊತೆಗೆ, ಮತ್ತೊಬ್ಬರ ಬದುಕಿನಲ್ಲೂ ಸಂತೋಷದ ಬೆಳಕು ಮೂಡಿಸುವುದೇ ದೀಪಾವಳಿಯ ಸಂದೇಶವಾಗಿದೆ. ಯುವ ವೇದಿಕೆಯವರು ನೀಡಿದ ಉಡುಗೊರೆಯ ಮೌಲ್ಯಕ್ಕಿಂತ ಅದರ ಹಿಂದಿರುವ ಪ್ರೀತಿ, ಕಾಳಜಿ ಮತ್ತು ಮಾನವೀಯತೆ ದೊಡ್ಡದು. ನಾರಾಯಣ ಗುರುಗಳ ತತ್ವಾದರ್ಶಗಳನ್ನು ಕೇವಲ ಮಾತಿನಲ್ಲಿ ಸೀಮಿತಗೊಳಿಸದೆ, ಇಂತಹ ಸಮಾಜಮುಖಿ ಕಾರ್ಯಗಳ ಮೂಲಕ ಅನುಷ್ಠಾನಗೊಳಿಸುದು ಅಗತ್ಯವಾಗಿದೆ ಎಂದರು.

ಬ್ರಹ್ಮಾವರ ಬಿಲ್ಲವ ಸಂಘದ ಅಧ್ಯಕ್ಷ ಬಿ. ಎನ್. ಶಂಕರ ಪೂಜಾರಿ ದೀಪಾವಳಿಯ ಶುಭಾಶಯ ಸಲ್ಲಿಸಿದರು. ಬಿಲ್ಲವ ಯುವ ವೇದಿಕೆಯ ಅಧ್ಯಕ್ಷ ಸಚಿನ್ ಪೂಜಾರಿ ಹೇರೂರು ಕಾರ್ಯಕ್ರಮದ ಉದ್ದೇಶ ತಿಳಿಸಿದರು.

ಈ ಸಂದರ್ಭದಲ್ಲಿ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸುಶಾಂತ್ ಪೂಜಾರಿ, ಕೋಶಾಧಿಕಾರಿ ಚೇತನ್ ಪೂಜಾರಿ, ಬಿಲ್ಲವ ಸಂಘದ ಕಾರ್ಯದರ್ಶಿ ಶೇಖರ್ ಪೂಜಾರಿ, ಉಪಾಧ್ಯಕ್ಷರಾದ ರಾಜು ಪೂಜಾರಿ ಉಪ್ಪೂರು, ಅಶೋಕ್ ಪೂಜಾರಿ ಹಾರಾಡಿ, ರಾಘು ಪೂಜಾರಿ ಹೇರೂರು, ಜೊತೆ ಕಾರ್ಯದರ್ಶಿ ಅಶೋಕ್ ಪೂಜಾರಿ, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪೂಜಾರಿ ಹಂದಾಡಿ ಮುಂತಾದವರು ಉಪಸ್ಥಿತರಿದ್ದರು. ಯುವ ವೇದಿಕೆಯ ಮಾಧ್ಯಮ ಸಂಚಾಲಕ ಚೇತನ್ ಮಟಪಾಡಿ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕವಿ ಹೃದಯದ ಡಾ.ಚೆನ್ನಬಸವ ಶ್ರೀಗಳು: ತೋಂಟದಾರ್ಯ ಶ್ರೀ
ಶಿರಗುಪ್ಪಿ ಕಾರ್ಖಾನೆಯಿಂದ ₹4,000 ದರ ಘೋಷಣೆ