ಚಿಕ್ಕಮಗಳೂರುಚಿಕ್ಕಮಗಳೂರಿನ ಪೊಲೀಸ್ ವಸತಿ ಗೃಹದ ಮುಂಭಾಗ ಕಾರು ನಿಲ್ಲಿಸಿದ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರು ಅಮಾನವೀಯವಾಗಿ ನಡೆದುಕೊಂಡ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಕ್ಷುಲ್ಲಕ ಕಾರಣಕ್ಕೆ ಅಮಾನವೀಯ ವರ್ತನೆ
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಚಿಕ್ಕಮಗಳೂರಿನ ಪೊಲೀಸ್ ವಸತಿ ಗೃಹದ ಮುಂಭಾಗ ಕಾರು ನಿಲ್ಲಿಸಿದ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರು ಅಮಾನವೀಯವಾಗಿ ನಡೆದುಕೊಂಡ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಕೂದುವಳ್ಳಿ ಗ್ರಾಮದ ಅರವಿಂದ್ ಎಂಬುವರಿಗೆ ಸೇರಿದ ಕಾರನ್ನು ಶರತ್ ಅವರು ಕಲ್ಲಿನಿಂದ ಜಜ್ಜಿ ಹಾನಿ ಮಾಡಿದ್ದಲ್ಲದೆ, ಕಾರಿನ ಬಾನೆಟ್ ಮೇಲೆ ''''''''ಡೋಂಟ್ ಪಾರ್ಕ್ ಹಿಯರ್'''''''' ಎಂದು ಕಲ್ಲಿನಿಂದ ಗೀಚಿ ತಮ್ಮ ವಿಕೃತಿ ಮೆರೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಈ ಕೃತ್ಯ ಎಸಗಿದ ಶರತ್ ಜಿಲ್ಲಾ ಪೊಲೀಸ್ ಕಚೇರಿ ಸಿಬ್ಬಂದಿ ಎನ್ನಲಾಗಿದೆ. ಇದೇ ಕಾರಣಕ್ಕೆ ಸ್ಥಳೀಯ ಪೊಲೀಸರು ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ ಎಂದು ಕಾರಿನ ಮಾಲೀಕ ಅರವಿಂದ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಲ್ಲದೇ ಸ್ಥಳದಲ್ಲಿ ಯುವಕರ ಗುಂಪು ಜಮಾಯಿಸಿ ಪ್ರತಿಭಟನೆ ನಡೆಸಲು ಮುಂದಾಗುತ್ತಿದಂತೆ. ಪರಿಸ್ಥಿತಿ ಅರಿತ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ್ ಆಕ್ರೋಶಗೊಂಡಿದ್ದ ಯುವಕರನ್ನು ಸಮಾಧಾನಪಡಿಸಿ ನಗರ ಠಾಣೆ ಪೊಲೀಸರಿಗೆ ಪ್ರಕರಣ ದಾಖಲಿಸಿಕೊಳ್ಳಲು ಸೂಚನೆ ನೀಡಿದ್ದಾರೆ. ಘಟನೆಯ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಶರತ್ ವಿರುದ್ಧ ಪ್ರಕರಣ ದಾಖಲಾಗಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.