ಕೇಂದ್ರದ ದುರುದ್ದೇಶಪೂರಿತ ಮಸೂದೆಗೆ ಸೋಲು: ರಮಾನಾಥ ರೈ

KannadaprabhaNewsNetwork |  
Published : Apr 28, 2026, 02:45 AM IST
ಬಂಟ್ವಾಳದಲ್ಲಿ ಮಹಿಳಾ ಕಾಂಗ್ರೇಸ್ ನಿಂದ ಪ್ರತಿಭಟನೆ | Kannada Prabha

ಸಾರಾಂಶ

ಬಿ.ಸಿ.ರೋಡ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ, ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.

ಬಂಟ್ವಾಳ: 2023ರ ಮಹಿಳಾ ಮೀಸಲಾತಿ ಬಿಲ್ ಜಾರಿಗೆ ತರದೆ ದೇಶದ ಮಹಿಳೆಯರಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದ್ರೋಹ ಮಾಡಿದೆ ಎಂದು ಆರೋಪಿಸಿ ಬಿ.ಸಿ.ರೋಡ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ, ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ಬಿ. ರಮಾನಾಥ ರೈ, ಮಹಿಳೆಯರ ಅಭಿವೃದ್ಧಿಗೆ ಕಾಂಗ್ರೆಸ್‌ ಹಲವಾರು ಕೊಡುಗೆಗಳನ್ನು ನೀಡಿದೆ. ಕೇಂದ್ರ ಸರಕಾರ ದುರುದ್ದೇಶಪೂರಿತವಾಗಿ ಪ್ರಸ್ತುತ ಮಸೂದೆ ಮಂಡಿಸಿದ್ದು, ಅದಕ್ಕೆ ಸೋಲಾಗಿದೆ. ಇದಕ್ಕೂ ಮೊದಲು 2023ರ ಮಹಿಳಾ ಮೀಸಲಾತಿ ಬಿಲ್ ಜಾರಿ ಮಾಡಬೇಕಿತ್ತು ಎಂದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವಿವಿಧ ನಿಗಮಗಳ ಅಧ್ಯಕ್ಷರಾದ ಮಮತಾ ಗಟ್ಟಿ, ಲಾವಣ್ಯ ಬಲ್ಲಾಳ್, ಶಾಲೆಟ್ ಪಿಂಟೊ, ಪ್ರಮುಖರಾದ ಉಷಾ ಅಂಚನ್, ಐಡಾ ಸುರೇಶ್, ಜಯಂತಿ ಪೂಜಾರಿ, ಅಮಿತಾ ಭಂಡಾರಿ, ಧನಲಕ್ಷ್ಮೀ ಸಿ. ಬಂಗೇರ, ಜೆಸಿಂತಾ ಡಿಸೋಜ, ಶಬನಾ ಕಾವಳಕಟ್ಟೆ, ಆಸ್ಮಾಹಸೈನಾರ್, ಸಾರಿಕಾ ಪೂಜಾರಿ, ಮಂಜುಳಾ ಕುಶಲ ಪೆರಾಜೆ, ಆರ್.ಪದ್ಮರಾಜ್, ಬೇಬಿ ಕುಂದರ್, ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್. ಮಹಮ್ಮದ್, ಬಾಲಕೃಷ್ಣ ಅಂಚನ್, ಝೀನತ್ ಬೆಳ್ತಂಗಡಿ, ಚಂದ್ರಶೇಖರ ಭಂಡಾರಿ, ಎ.ಬಿ. ಅಬ್ದುಲ್ಲಾ ಕೊಳ್ತಾಡು, ಸುದರ್ಶನ ಜೈನ್, ಪಿ.ಬಿ. ವರ್ಗೀಸ್, ಮೋಹನ ಶೆಟ್ಟಿ, ಸುಭಾಶ್ಚಂದ್ರ ಶೆಟ್ಟಿ, ಶೋಭಾ ಶೆಟ್ಟಿ, ಸಿರಾಜ್ ಮದಕ, ಸಿದ್ದೀಕ್ ಸರವು, ಮಹಮ್ಮದ್ ನಂದಾವರ, ಸುದೀಪ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೇಪರ ಹಂಚಿದ ಹುಡುಗ 20 ಕೃತಿ ರಚಿಸಿದ ಸಾಹಿತಿ: ಡಾ.ವಿ.ಡಿ.ಐಹೊಳ್ಳಿ
ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯತ್ನಾಳ ಭೂಮಿಪೂಜೆ