ಮಡಿಕೇರಿ: ತಾಲೂಕಿನ ತಲಕಾವೇರಿಯಲ್ಲಿ 40 ವರ್ಷದ ಕಾಡಾನೆಯ ಕಳೇಬರ ಪತ್ತೆಯಾಗಿದೆ.
ತಲಕಾವೇರಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಕಾಡಾನೆ ಮತ್ತೊಂದು ಆನೆಯೊಂದಿಗೆ ಕಾದಾಡಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.
7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಂಡೂರು ಕಾಫಿ ತೋಟದಲ್ಲಿ ಕಾಡಾನೆಯ ಕಳೆ ಬರಹ ಪತ್ತೆಯಾಗಿದೆ. ಶನಿವಾರ ಬೆಳ್ಳಂಬೆಳಗ್ಗೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಹಿರಿಯ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಸತ್ತಿರುವ ಕಾಡಾನೆ ಅಂದಾಜು 20 ವರ್ಷದ್ದು. ದಂತ ಇಲ್ಲದ ಗಂಡಾನೆ ಮಖಾನ ಎಂದು ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆಯ ನಂತರ ಆನೆಯ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಮಡಿಕೇರಿ ಡಿಎಫ್‌ಓ ಭಾಸ್ಕರ್, ಎಸಿಎಫ್ ಗೋಪಾಲ್, ಡಿಆರ್‌ಎಫ್‌ಓ ರತನ್ ಕುಮಾರ್, ವೈದ್ಯಾಧಿಕಾರಿ ಚಿಟ್ಟಿಯಪ್ಪ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಶನಿವಾರಸಂತೆ : ಇಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ನಿಯಮ ಪಾಲನೆ ಮಾಡದೆ ಹೆಲ್ಮೆಟ್ ಧರಿಸಿದ ಬೈಕ್ ಸವಾರರಿಗೆ ಶನಿವಾರ ಸಂಜೆ ಪೊಲೀಸ್ ಠಾಣೆಯ ಅಧಿಕಾರಿಗಳು ತಡೆದು ದಂಡ ವಸೂಲಿ ಮಾಡಿದರು.
ಏಕಾಏಕಿ ದಂಡ ವಸೂಲಾತಿಗೆ ಮುಂದಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಯಿತು.ಶನಿವಾರಸಂತೆ ಪಟ್ಟಣದಲ್ಲಿ ಪ್ರತಿನಿತ್ಯ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸುತ್ತಿದ್ದಾರೆ. ಪಟ್ಟಣದ ಎಲ್ಲೆಂದರಲ್ಲಿ ಬೈಕ್ ಮತ್ತು ಕಾರುಗಳನ್ನು ನಿಲುಗಡೆ ಮಾಡುತ್ತಿದ್ದಾರೆ. ಪಟ್ಟಣದಲ್ಲಿ ಪ್ರತಿನಿತ್ಯ ಟ್ರಾಫಿಕ್ ಸಮಸ್ಯೆಯನ್ನು ಸಾರ್ವಜನಿಕರು ಎದುರಿಸುತ್ತಿದ್ದಾರೆ.
ಮುಖ್ಯ ರಸ್ತೆಗಳಲ್ಲಿ ಅಪಘಾತಗಳು ಸಂಭವಿಸುತ್ತಿವೆ. ಪೊಲೀಸ್ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕೆ ಆರ್ ಸಿ ವೃತ್ತ ಮತ್ತು ಪ್ರಮುಖ ರಸ್ತೆಯಲ್ಲಿ ಕರ್ತವ್ಯ ನಿರ್ವಹಿಸದೆ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ಸಂಚಾರಕ್ಕೆ ಅಡಚಣೆಯಾಗುತ್ತಿದೆ ಇದರ ಬಗ್ಗೆ ಗಮನಹರಿಸಬೇಕು. ಶಾಲಾ ಕಾಲೇಜು ವಿದ್ಯಾರ್ಥಿಗಳು ವೇಗವಾಗಿ ಬೈಕ್ ಚಲಾಯಿಸುತ್ತಿದ್ದಾರೆ. ಕೇವಲ ನೆಪಕ್ಕೆ ಮಾತ್ರ ದಂಡ ವಸೂಲಾತಿಗೆ ಆಗಮಿಸಬಾರದು ಎಂದು ಸಾರ್ವಜನಿಕರು ಆಗ್ರಹಿಸಿದರು. ಸಾಕಷ್ಟು ದ್ವಿಚಕ್ರ ವಾಹನ ಸವಾರರು ದಂಡ ವಸೂಲಾತಿ ಮಾಡುವುದನ್ನು ಕಂಡು ವರ್ತಕರ ಅಂಗಡಿಯ ಎದುರು ಬೈಕ್ ಗಳನ್ನು ನಿಲ್ಲಿಸಿ ಪೊಲೀಸ್ ಅಧಿಕಾರಿಗಳು ಹೋಗುವ ತನಕ ಕಾಲ ಕಳೆದರು.