ಕೊಪ್ಪಳ:
ಕೊಪ್ಪಳದ ಸರ್ಕಾರಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಹನುಮಂತ ನಾಯಕ ದೊಡ್ಡಮನಿ ಹಾಗೂ ಉಪನ್ಯಾಸಕರಾದ ಶಿವನಾಥ್ ಇ.ಜಿ. ಅವರಿದ್ದ ನಿಯೋಗವು ಮಹಾವಿದ್ಯಾಲಯಕ್ಕೆ ಭೇಟಿ ನೀಡಿತ್ತು. ಪ್ರಾಚಾರ್ಯ ರಾಜಶೇಖರ ಪಾಟೀಲ್ ಅವರು, ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ಪದವಿ ಮಹಾವಿದ್ಯಾಲಯ ಪ್ರಾರಂಭಿಸಲು ಬೇಕಾದ ಮೂಲಸೌಕರ್ಯಗಳು ಲಭ್ಯವಿರುವುದನ್ನು ತೋರಿಸಿ, ಪೂರಕ ಮಾಹಿತಿ ಒದಗಿಸಿದರು.
ಪದವಿ ಮಹಾವಿದ್ಯಾಲಯದ ಪ್ರಾರಂಭಕ್ಕೆ ಬೇಕಾದ ಕೊಠಡಿ, ಶೌಚಾಲಯ, ನೀರಿನ ವ್ಯವಸ್ಥೆ, ಆಟದ ಮೈದಾನ, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದಲ್ಲಿ 15 ವರ್ಷಗಳಿಂದ ನಿಷ್ಕ್ರಿಯವಾಗಿರುವ ಪವರ್ ಲೂಮ್ ನೇಕಾರರ ಸಹಕಾರ ಉತ್ಪಾದಕ ಮತ್ತು ಮಾರಾಟ ನಿಯಮಿತ ಸಂಸ್ಥೆಯ ಕಟ್ಟಡ ಬಳಸಿಕೊಳ್ಳಲು ಅವಕಾಶವಿದೆ ಎಂಬುದನ್ನು ಭಾಗ್ಯನಗರ ಸರ್ಕಾರಿ ಪದವಿ ಕಾಲೇಜ್ ಹೋರಾಟ ಸಮಿತಿ ಸಂಚಾಲಕ ಕೃಷ್ಣ ಇಟ್ಟಂಗಿ ನಿಯೋಗದ ಗಮನಕ್ಕೆ ತಂದರು. ಲಭ್ಯವಿರುವ ಸೌಲಭ್ಯಗಳು ಮಹಾವಿದ್ಯಾಲಯ ಪ್ರಾರಂಭಿಸಲು ಸೂಕ್ತವಾಗಿವೆ ಎಂದು ನಿಯೋಗ ತೃಪ್ತಿ ವ್ಯಕ್ತಪಡಿಸಿತು.ಈ ವೇಳೆ ಭಾಗ್ಯನಗರ ಸರ್ಕಾರಿ ಪದವಿ ಕಾಲೇಜ್ ಹೋರಾಟ ಸಮಿತಿ ಅಧ್ಯಕ್ಷ ರಾಘವೇಂದ್ರ ಪಾನಘಂಟಿ, ಪಪಂ ಉಪಾಧ್ಯಕ್ಷ ಹೊನ್ನೂರಸಾಬ್ ಭೈರಾಪುರ, ಶಿವರಾಮ್ ಮೇಗಳಮನಿ, ಪಟ್ಟಣ ಪಂಚಾಯಿತಿ ಸದಸ್ಯ ಮೋಹನ್ ಅರಕಲ್ ಉಪಸ್ಥಿತರಿದ್ದರು. ಆಯುಕ್ತರಿಗೆ ವರದಿ...