ದೇಗುಲ ಬಸಪ್ಪನ 10ನೇ ವರ್ಷದ ಹುಟ್ಟುಹಬ್ಬ: ಧಾರ್ಮಿಕ ಪೂಜೆ, ಮೆರವಣಿಗೆ

KannadaprabhaNewsNetwork |  
Published : Oct 27, 2026, 02:00 AM IST
26ಕೆಎಂಎನ್ ಡಿ23 | Kannada Prabha

ಸಾರಾಂಶ

ಹಲಗೂರು ಸಮೀಪದ ಅಗಸನಪುರ ಗ್ರಾಮದಲ್ಲಿ ಬಸವೇಶ್ವರಸ್ವಾಮಿ ಬಸಪ್ಪ ದೇವರ 10ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸೋಮವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವ ಮತ್ತು ಸಂಭ್ರಮದಿಂದ ನೆರವೇರಿದವು.

ಹಲಗೂರು:

ಸಮೀಪದ ಅಗಸನಪುರ ಗ್ರಾಮದಲ್ಲಿ ಬಸವೇಶ್ವರಸ್ವಾಮಿ ಬಸಪ್ಪ ದೇವರ 10ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸೋಮವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವ ಮತ್ತು ಸಂಭ್ರಮದಿಂದ ನೆರವೇರಿದವು.

ಗ್ರಾಮದ ಧಾರ್ಮಿಕ ಸಂಪ್ರದಾಯದಂತೆ ನಡೆದ ಪೂಜಾ ಕೈಂಕರ್ಯಗಳಲ್ಲಿ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದರು. ಬೆಳಗ್ಗೆ 9 ಗಂಟೆಯಿಂದ ಬಸವೇಶ್ವರಸ್ವಾಮಿಗೆ ರುದ್ರಾಭಿಷೇಕ, ವಿಶೇಷ ಪೂಜೆ ಹಾಗೂ ಮಹಾ ಮಂಗಳಾರತಿ ನೆರವೇರಿಸಲಾಯಿತು. ದೇವರಿಗೆ ವಿಶೇಷ ಅಲಂಕಾರ ಮಾಡಿ ಪೂಜಾ ವಿಧಿವಿಧಾನಗಳನ್ನು ಸಲ್ಲಿಸಲಾಯಿತು. ಬಳಿಕ ಕೆರೆಯಿಂದ ಹೂಹೊಂಬಾಳೆ ಸಮೇತ ಸ್ವಾಮಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಭಕ್ತರು ಭಕ್ತಿಭಾವದಿಂದ ಪಾಲ್ಗೊಂಡು ಬಸಪ್ಪ ದೇವರಿಗೆ ಹೂಮಳೆಗರೆದು ತಮ್ಮ ಭಕ್ತಿಯನ್ನು ಸಮರ್ಪಿಸಿದರು. ಧಾರ್ಮಿಕ ವಾತಾವರಣದಲ್ಲಿ ನಡೆದ ಮೆರವಣಿಗೆ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.

ಮಧ್ಯಾಹ್ನ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ನಡೆದ ಅನ್ನಸಂತರ್ಪಣೆ ಸಾವಿರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು. ಭಕ್ತರಿಗೆ ಸಿಹಿ ವಿತರಣೆ ಮಾಡಿ ಬಸಪ್ಪನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಇದೇ ವೇಳೆ ಹರಿಕಥಾ ಕಲಾವಿದ ಮಲ್ಲಾರಾಧ್ಯ ಹಾಗೂ ತಂಡದ ಸದಸ್ಯರಿಂದ ಧಾರ್ಮಿಕ ಸಂಗೀತ ಕಾರ್ಯಕ್ರಮಗಳು ನಡೆದವು. ಭಕ್ತಿಗೀತೆಗಳು ಹಾಗೂ ಧಾರ್ಮಿಕ ಸಂಗೀತದ ಮೂಲಕ ಭಕ್ತರಲ್ಲಿ ಆಧ್ಯಾತ್ಮಿಕ ಭಾವನೆ ಮೂಡಿಸಲಾಯಿತು.

ಅಗಸನಪುರ, ಹುಲ್ಲಹಳ್ಳಿ, ಹುಲ್ಲಾಗಾಲ, ಕೋಡಿಪುರ, ಹಾಡ್ಲಿ, ಹುಸ್ಕೂರು, ಕುಲುಮೆದೊಡ್ಡಿ, ಬಾಣಗಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಕುಟುಂಬ ಸಮೇತರಾಗಿ ಪಾಲ್ಗೊಂಡ ಭಕ್ತರು ಬಸವೇಶ್ವರಸ್ವಾಮಿ ಬಸಪ್ಪ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಪುನೀತರಾದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಾಲ್ಮೀಕಿ ರಾಮಾಯಣದಿಂದ ಸಮಾಜಕ್ಕೆ ಸಂದೇಶ
ರುದ್ರಭೂಮಿ ಸ್ವಚ್ಛಗೊಳಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು