ಕನ್ನಡಪ್ರಭ ವಾರ್ತೆ ಬೀದರ್
ನಗರದ ಗುಂಪಾ ರಿಂಗ್ ರಸ್ತೆ ವೃತ್ತದಲ್ಲಿ ಮಾನವ ಸರಪಳಿ ಮೂಲಕ ರಸ್ತೆ ತಡೆದು ಮುಖ್ಯ ಕಾರ್ಯನಿರ್ವಣಾಧಿಕಾರಿಗೆ ಬರೆದ ಮನವಿ ಸಲ್ಲಿಸಿ, ಗ್ರಾಮೀಣ ಭಾಗದಿಂದ ಬಡ ಮತ್ತು ಪ್ರತಿಭಾವಂತ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆಯಬೇಕೆಂಬ ಆಶಯವನ್ನಿಟ್ಟುಟ್ಟುಕೊಂಡು ನಗರ ಪ್ರದೇಶಗಳಿಗೆ ಬರುತ್ತಾರೆ. ಆ ವಿದ್ಯಾರ್ಥಿಗಳಿಗೆ ಸರ್ಕಾರಗಳು ಮೂಲಭೂತ ಸೌಲಭ್ಯಗಳನ್ನ ಒದಗಿಸುವುದು ಆದ್ಯ ಕರ್ತವ್ಯವಾಗಿದೆ.
ಆದರೆ ಕರ್ನಾಟಕ ರಾಜ್ಯದಲ್ಲಿ ಕಾಲೇಜು ಮತ್ತು ಪ್ರೌಢಶಾಲೆಗಳು ಪ್ರಾರಂಭವಾಗಿ ಮೂರು ತಿಂಗಳ ವರೆಗೆ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಸಿಗುತ್ತಿಲ್ಲ. ಜೂನ್ ತಿಂಗಳಲ್ಲಿ ಶಾಲೆ- ಕಾಲೇಜುಗಳು ಪ್ರಾರಂಭವಾದರೂ ಸಹಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಸಿಗುವುದರಲ್ಲಿ ಸೆಪ್ಟೆಂಬರ್ ವರೆಗೂ ತಲುಪುವ ಹಂತವನ್ನು ಸರ್ಕಾರ ಮತ್ತು ಅಧಿಕಾರಿಗಳು ಮಾಡುತ್ತಿರುವುದರಿಂದ ಸಾವಿರಾರು ವಿದ್ಯಾರ್ಥಿಗಳು ಮೂರು ತಿಂಗಳ ಕಾಲ ಎಲ್ಲಿ ಉಳಿದುಕೊಂಡು ಶಿಕ್ಷಣ ಪಡೆಯಬೇಕು ಎಂಬ ಸಾಮಾನ್ಯ ಜ್ಞಾನವು ಸರ್ಕಾರಗಳಿಗೆ ಇಲ್ಲದಂತಾಗಿದೆ.ರಾಜ್ಯ ಸರ್ಕಾರ ಕೂಡಲೇ ಈ ವರ್ಷದ ಹಾಸ್ಟೆಲ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ತಕ್ಷಣವೇ ಪೂರ್ಣಗೊಳಿಸಿ, ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಕಲ್ಪಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ. ಲಕ್ಷಾಂತರ ಬಡ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ನಂಬಿ ಶಿಕ್ಷಣ ಪಡೆಯುತ್ತಿದ್ದಾರೆ. ತಮ್ಮ ಶಿಕ್ಷಣಕ್ಕೆ ಸರ್ಕಾರಗಳು ನೀಡುವ ವಿದ್ಯಾರ್ಥಿವೇತನ ಸಹಕಾರಿಯಾಗಲಿದೆ ಎಂಬ ಭಾವನೆಯೊಂದಿಗೆ ಅರ್ಜಿ ಸಲ್ಲಿಸಿದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಕಳೆದ ವರ್ಷದ ವಿದ್ಯಾರ್ಥಿವೇತನ ಜಮೆಯಾಗದೆ ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸಾಯಿ, ಪವನ್ ಕುಂಬಾರ, ನಾಗರಾಜ್ ಸುಲ್ತಾನ್ಪುರ ಕಾಲೇಜ್ ಕಾರ್ಯದರ್ಶಿಗಳು, ಅಭಿಷೇಕ್ ಶಂಬು ಎಬಿವಿಪಿ ತಾಲೂಕು ಸಂಚಾಲಕ ಮಹೇಶ್, ಆನಂದ, ಶಶಿಕಾಂತ ಜಿಲ್ಲಾ ಸಂಚಾಲಕ, ಸಾಯಿ ಕಿರಣ್, ಪವನ್ ಪದ್ಮಾಕರ್, ಹರೀಶ್ ಇತರರಿದ್ದರು.