ಒಳ ಮೀಸಲಾತಿ ಜಾರಿ ವಿಳಂಬ : ಸಂಘಟನೆಗಳಿಂದ ಪ್ರತಿಭಟನೆ

KannadaprabhaNewsNetwork |  
Published : Aug 01, 2025, 11:45 PM IST
ಒಳ ಮೀಸಲಾತಿ ಜಾರಿಗೊಳಿಸದೇ ವಿಳಂಭ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಮಾದಿಗ ಮತ್ತು ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ಮುಖಂಡರು ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಚಿಕ್ಕಮಗಳೂರುಒಳ ಮೀಸಲಾತಿ ಜಾರಿಗೊಳಿಸದೇ ವಿಳಂಬ ಧೋರಣೆ ಅನುಸರಿಸುತ್ತಿ ರುವ ರಾಜ್ಯಸರ್ಕಾರದ ವಿರುದ್ಧ ಮಾದಿಗ ಮತ್ತು ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ಮುಖಂಡರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಒಳ ಮೀಸಲಾತಿ ಜಾರಿಗೊಳಿಸದೇ ವಿಳಂಬ ಧೋರಣೆ ಅನುಸರಿಸುತ್ತಿ ರುವ ರಾಜ್ಯಸರ್ಕಾರದ ವಿರುದ್ಧ ಮಾದಿಗ ಮತ್ತು ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ಮುಖಂಡರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.ಇದೇ ಸಂದರ್ಭದಲ್ಲಿ ಬ್ಲೂ ಭೀಮ್ ಆರ್ಮಿ ರಾಜ್ಯಾದ್ಯಕ್ಷ ಶೂದ್ರ ಶ್ರೀನಿವಾಸ್ ಮಾತನಾಡಿ, ಸರ್ವೋಚ್ಚ ನ್ಯಾಯಾಲಯ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೊಳಿಸಬೇಕೆಂದು ಹೇಳಿ ವರ್ಷ ಪೂರೈಸಿದರೂ ರಾಜ್ಯದ ಕಾಂಗ್ರೆಸ್ ಸರ್ಕಾರ ಮೀನಾ ಮೇಷ ಎಣಿಸುವ ಮೂಲಕ ಪರಿಶಿಷ್ಟರಿಗೆ ದ್ರೋಹವೆಸಗುತ್ತಿದೆ ಎಂದು ಆರೋಪಿಸಿದರು. ಒಳ ಮೀಸಲಾತಿ ಸಂಬಂಧ ನ್ಯಾಯಾಲಯದ ತೀರ್ಪನ್ನು ಜಾರಿಗೊಳಿಸಲು ಅನಗತ್ಯವಾಗಿ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ. ಇದರಿಂದ ಸಮುದಾಯದಲ್ಲಿ ತೀವ್ರ ಅಸಮಾಧಾನ ಮತ್ತು ಆತಂಕಕ್ಕೆ ಕಾಣರವಾಗಿದೆ. ಜೊತೆಗೆ ವಿದ್ಯಾರ್ಥಿ ಗಳು, ಉದ್ಯೋಗಾಕಾಂಕ್ಷಿಗಳು, ಕಾರ್ಮಿಕರು ಮತ್ತು ಮಹಿಳೆಯರು ನ್ಯಾಯಯುತ ಹಕ್ಕುಗಳಿಂದ ವಂಚಿತರಾಗಿದ್ದಾರೆ ಎಂದರು.ಸುಪ್ರೀಂಕೋರ್ಟ್ ತೀರ್ಪಿನಂತೆ ಹರಿಯಾಣ, ಆಂಧ್ರಪ್ರದೇಶ, ತೆಲಂಗಾಣ ಸರ್ಕಾರಗಳು ನಿಗಾವಹಿಸಿ ಆಯಾ ರಾಜ್ಯಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸಿ ಸಾಮಾಜಿಕ ನ್ಯಾಯದ ವಿಷಯದಲ್ಲಿ ಮೇಲ್ಪಂಕ್ತಿ ತೋರಿದೆ. ಆದರೆ, ಕರ್ನಾಟಕದಲ್ಲಿ ವಿಳಂಬ ನೀತಿ ಅನುಸರಿಸಿ ಪರಿಶಿಷ್ಟ ಜಾತಿಗಳಲ್ಲಿ ಅದರಲ್ಲೂ ಮುಖ್ಯವಾಗಿ ಮಾದಿಗ ಮತ್ತು ಉಪ ಜಾತಿಗಳಲ್ಲಿ ಜನಾಕ್ರೋಶ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.ದಸಂಸ ರಾಜ್ಯ ಸಮಿತಿ ಸದಸ್ಯ ಮರ್ಲೆ ಅಣ್ಣಯ್ಯ ಮಾತನಾಡಿ, ಪರಿಶಿಷ್ಟರ ಶ್ರೇಯೋಭಿವೃದ್ಧಿ ಸರ್ವೋಚ್ಚ ನ್ಯಾಯಾಲಯ ಒಳ ಮೀಸಲಾತಿ ಜಾರಿಗೊಳಿಸಿದೆ. ಹೀಗಾಗಿ ರಾಜ್ಯದಲ್ಲಿ ಸಂಪೂರ್ಣವಾಗಿ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಅನುಷ್ಟಾನ ಗೊಳಿಸಬೇಕು. ಗಡುವಿನೊಳಗೆ ಬೇಡಿಕೆ ಈಡೇರಿಸಲು ವಿಫಲವಾದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸ ಬೇಕಾಗುವುದು ಎಂದು ಎಚ್ಚರಿಸಿದರು.ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್ ಮಾತನಾಡಿ, ಪರಿಶಿಷ್ಟ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಗಳಿಗೆ ಬಳಸಿಕೊಂಡು ರಾಜ್ಯದ ಕಾಂಗ್ರೆಸ್ ಸರ್ಕಾರ ನಾಟಕವಾಡುತ್ತಿದೆ. ಇದೀಗ ನ್ಯಾಯಾಲಯದ ತೀರ್ಪಿನ ಆದೇಶ ಪಾಲಿಸದೇ ಪರಿಶಿಷ್ಟ ಸೌಲಭ್ಯ ಕಸಿದುಕೊಳ್ಳುತ್ತಿದೆ ಎಂದು ದೂರಿದರು.

ಈ ಸಂದರ್ಭದಲ್ಲಿ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯರಾದ ಲಕ್ಷ್ಮಣ್, ರಮೇಶ್, ಮುಖಂಡರಾದ ಜಗದೀಶ್, ಸಗನಪ್ಪ, ರಮೇಶ್, ವೀರಭದ್ರಯ್ಯ, ಹರೀಶ್‌ಮಿತ್ರ, ಚಂದ್ರಶೇಖರ್, ನವೀನ್, ಸುಜೇಂದ್ರ, ಹಾಲಪ್ಪ, ದಿವಾಕರ್, ಎಚ್.ಕೆ.ಕೇಶವಮೂರ್ತಿ ಹಾಜರಿದ್ದರು.

1 ಕೆಸಿಕೆಎಂ 2ಒಳ ಮೀಸಲಾತಿ ಜಾರಿಗೊಳಿಸದೇ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಮಾದಿಗ ಮತ್ತು ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ಮುಖಂಡರು ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''