ಮನರೇಗಾ ನೌಕರರ ವೇತನ ಪಾವತಿ ವಿಳಂಬ: ಜಿಪಂ ಸಿಇಒಗೆ ಮನವಿ ಪತ್ರ ಸಲ್ಲಿಕೆ

KannadaprabhaNewsNetwork |  
Published : Jun 09, 2025, 02:41 AM IST
೮ಕೆಎಂಎನ್‌ಡಿ-೪ಮಂಡ್ಯದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮನರೇಗಾ ಸಿಬ್ಬಂದಿ ಅರು ತಿಂಗಳ ವೇತನ ಬಿಡುಗಡೆ ಕೋರಿ ಜಿಪಂ ಸಿಇಓ ಕೆ.ಆರ್.ನಂದಿನಿ ಅವರಿಗೆ ಮನವಿ ಮಾಡಿದರು. | Kannada Prabha

ಸಾರಾಂಶ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನ ಕೊಡಿಸಿಕೊಡಬೇಕೆಂದು ನರೇಗಾ ಯೋಜನೆಯ ಸಿಬ್ಬಂದಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್.ನಂದಿನಿ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನ ಕೊಡಿಸಿಕೊಡಬೇಕೆಂದು ನರೇಗಾ ಯೋಜನೆಯ ಸಿಬ್ಬಂದಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್.ನಂದಿನಿ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಪಂಚಾಯ್ತಿ ಮಿನಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ನರೇಗಾ ಸಿಬ್ಬಂದಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು ಭೇಟಿ ಮಾಡಿ ಕಳೆದ ೧೨ ವರ್ಷಗಳಿಂದ ಮನರೇಗಾ ಯೋಜನೆಯಲ್ಲಿ ಕೆಲಸ ನಿರ್ವಹಿಸುತ್ತಾ ಬಂದಿದ್ದೇವೆ. ಕಳೆದ ೬ ತಿಂಗಳಿಂದ ವೇತನ ಬಿಡುಗಡೆಯಾಗಿಲ್ಲ. ಜೀವನ ಹಾಗೂ ಕುಟುಂಬ ನಿರ್ವಹಣೆ ಕಷ್ಟಕರವಾಗಿದ್ದು, ಕೂಡಲೇ ವೇತನ ಪಾವತಿಗೆ ಬಿಡುಗಡೆಗೊಳಿಸಲು ಮನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಮನವಿ ಮಾಡಿದರು.

ಉಪಕಾರ್ಯದರ್ಶಿ (ಅಭಿವೃದ್ಧಿ) ಪಿ.ಲಕ್ಷ್ಮೀ, ಸಹಾಯಕ ಕಾರ್ಯದರ್ಶಿ ಚಂದ್ರ ಹಾಗೂ ಜಿಲ್ಲೆಯ ನರೇಗಾ ಸಿಬ್ಬಂದಿ, ಎಡಿಪಿಸಿ, ಡಿಎಂಐಎಸ, ಡಿಐಇಸಿ , ಡಿಎಎಂ ಹಾಗೂ ತಾಲೂಕಿನ ಟಿಸಿ, ಟಿಎಇ, ಟಿಎಂಐಎಸ್, ಬಿಎಫ್‌ಟಿ, ಹಾಗೂ ಜಿಕೆಎಂ ಹಾಜರಿದ್ದರು.

೮ಕೆಎಂಎನ್‌ಡಿ-೪

ಮಂಡ್ಯದ ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲಿ ಮನರೇಗಾ ಸಿಬ್ಬಂದಿ ಅರು ತಿಂಗಳ ವೇತನ ಬಿಡುಗಡೆ ಕೋರಿ ಜಿಪಂ ಸಿಇಒ ಕೆ.ಆರ್.ನಂದಿನಿ ಅವರಿಗೆ ಮನವಿ ಮಾಡಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ

ಶ್ರೀರಂಗಪಟ್ಟಣ:

ಪ್ರಜ್ಞಾವಂತರ ವೇದಿಕೆ ಹಾಗೂ ವಿವಿಧ ಸಂಘಟನೆಯಿಂದ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ಆಚರಿಸಲಾಯಿತು.

ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಒಡೆಯರ್ ಭಾವಚಿತ್ರವನ್ನು ವಾಹನದ ಮೇಲಿರಿಸಿ ಹೂವಿನಿಂದ ಅಲಂಕರಿಸಿ ಪೂಜೆ ಸಲ್ಲಿಸಿದರು.

ನಂತರ ಅದೇ ಮಾರ್ಗವಾಗಿ ಮುಖ್ಯ ಬೀದಿಯಲ್ಲಿ ಸಂಚರಿಸಿ ಮೈಸೂರು- ಬೆಂಗಳೂರು ಹೆದ್ದಾರಿಯ ಗಂಜಾಂ ವೃತ್ತದವರೆಗೂ ಮೆರವಣಿಗೆ ನಡೆಸಲಾಯಿತು.

ವೇದಿಕೆ ಅಧ್ಯಕ್ಷ ವಕೀಲ ಸಿ.ಎಸ್.ವೆಂಕಟೇಶ್ ನಾಲ್ವಡಿ ಅವರ ಜೀವನ ಚರಿತ್ರೆ ಕೆಆರ್‌ಎಸ್ ನಿರ್ಮಾಣ ಹಾಗೂ ಮಂಡ್ಯ ಜಿಲ್ಲೆಗೆ ನೀಡಿದ ಕೊಡುಗೆ ಗಳ ಕುರಿತು ಮಾತನಾಡಿದರು. ಈ ವೇಳೆ ಬುದ್ದ ಮಹಾಸಭಾ ಅಧಕ್ಷ ಕೆ.ಟಿ ರಂಗಯ್ಯ, ಕರವೇ ಸ್ವಾಮಿಗೌಡ, ಡಿಎಸ್‌ಎಸ್ ಸಂಚಾಲಕ ನಂಜುಂಡ, ಬಸವರಾಜು, ಚಿಕ್ಕತಮ್ಮೇಗೌಡ ಸೇರಿದಂತೆ ಇತರರಿದ್ದರು.

PREV

Recommended Stories

ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌