ರಾಗಿ ಖರೀದಿ ಪ್ರಕ್ರಿಯೆ ವಿಳಂಬ: ರೈತರ ಆಕ್ರೋಶ

KannadaprabhaNewsNetwork |  
Published : Feb 07, 2026, 01:30 AM IST
ದೊಡ್ಡಬಳ್ಳಾಪುರದಲ್ಲಿ ರಾಗಿ ಖರೀದಿ ಪ್ರಕ್ರಿಯೆ ವಿಳಂಬ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ರೈತರಿಂದ ರಾಗಿ ಖರೀದಿ ಪ್ರಕ್ರಿಯೆನ್ನು ಆರಂಭಿಸದೆ ವಿಳಂಬ ಧೋರಣೆ ಅನುಸರಿಸುತ್ತಿರುವ ಜಿಲ್ಲಾಡಳಿತದ ನಡೆ ಖಂಡನೀಯ ಎಂದು ಕರ್ನಾಟಕ ರಾಜ್ಯ ರೈತ ಸಂಘ ಆರೋಪಿಸಿದರು.

ದೊಡ್ಡಬಳ್ಳಾಪುರ: ರೈತರಿಂದ ರಾಗಿ ಖರೀದಿ ಪ್ರಕ್ರಿಯೆನ್ನು ಆರಂಭಿಸದೆ ವಿಳಂಬ ಧೋರಣೆ ಅನುಸರಿಸುತ್ತಿರುವ ಜಿಲ್ಲಾಡಳಿತದ ನಡೆ ಖಂಡನೀಯ ಎಂದು ಕರ್ನಾಟಕ ರಾಜ್ಯ ರೈತ ಸಂಘ ಆರೋಪಿಸಿದರು.

ದೊಡ್ಡಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ಕೂಡಲೇ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಒತ್ತಾಯಿಸಿದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ರೈತ ಮುಖಂಡರು, ತಾಲೂಕಿನಲ್ಲಿ ಸುಮಾರು 12 ಸಾವಿರಕ್ಕೂ ಅಧಿಕ ರೈತರು ನೊಂದಣಿ ಮಾಡಿದ್ದು, ಕೂಡಲೇ ಖರೀದಿ ಪ್ರಕ್ರಿಯೆ ಆರಂಭಿಸಬೇಕು. ಯುಗಾದಿ ಹಬ್ಬ ಹತ್ತಿರ ಬರುತ್ತಿದ್ದು, ರೈತರು ಮನೆಗಳನ್ನು ಸಜ್ಜುಗೊಳಿಸಬೇಕು. ರಾಗಿ ಫಸಲನ್ನು ಮನೆಗಳಲ್ಲಿ ಇಟ್ಟು ಸಂರಕ್ಷಿಸುವುದು ಸವಾಲಿನ ಕೆಲಸವಾಗಿದೆ ಎಂದರು.

ರಾಗಿ ಇಂಡೆಂಟ್‌ ವಂಚನೆ: ಅರ್ಜಿ ಅಭಿಯಾನ

ರಾಗಿ ಖರೀದಿ ನೋಂದಣಿ ಏಕಾಏಕಿ ನಿಲ್ಲಿಸಿರುವುದರಿಂದ ಹಲವು ರೈತರು ಇಂಡೆಂಟ್ ಪಡೆಯದೆ ವಂಚಿತರಾಗಿದ್ದಾರೆ. ಈ ಹಿನ್ನಲೆ ಇಂತಹ ರೈತರಿಂದ ವ್ಯಕ್ತಿಗತವಾಗಿ ಜಿಲ್ಲಾಡಳಿತಕ್ಕೆ ಅರ್ಜಿ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಎಪಿಎಂಸಿಯ ರೈತ ಭವನದಲ್ಲಿ ಅರ್ಜಿ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಇಂಡೆಂಟ್‌ ವಂಚಿತ ರೈತರು ತಹಶೀಲ್ದಾರ್‌ ಮತ್ತು ಜಿಲ್ಲಾಧಿಕಾರಿಗೆ ಪ್ರತ್ಯೇಕ ಅರ್ಜಿ ನೀಡಲಿದ್ದಾರೆ. ಕೂಡಲೇ ಸರ್ಕಾರ ಈ ಬಗ್ಗೆ ಕ್ರಮ ವಹಿಸಬೇಕು ಎಂದರು.

ಬಜೆಟ್‌ನಲ್ಲಿ ಕಡೆಗಣನೆ:

ಕೇಂದ್ರ ಬಜೆಟ್ನಲ್ಲಿ ರೈತರ ಕಡೆಗಣನೆ ಖಂಡನೀಯ. ರೈತ ಸ್ನೇಹಿಯಾದ ಯಾವುದೇ ಯೋಜನೆಯನ್ನು ಪ್ರಕಟಿಸಿಲ್ಲ. ಬೆಂಬಲ ಬೆಲೆ ಬಗ್ಗೆಯೂ ಸ್ಪಷ್ಟ ಮಾರ್ಗಸೂಚಿ ಇಲ್ಲ ಎಂದು ಟೀಕಿಸಿದರು.

ಈ ವೇಳೆ ರೈತ ಸಂಘದ ಮುಖಂಡರಾದ ಸತೀಶ್, ನಾಗಸಂದ್ರ ಪ್ರಸನ್ನ, ಮುತ್ತೇಗೌಡ, ಹನುಮೇಗೌಡ, ವಾಸು, ತಿಮ್ಮಣ್ಣ, ಹನುಮಂತರಾಯಪ್ಪ, ಕುಮಾರ್, ರವಿಶಿರವಾರ, ಮುರಳಿ, ಮಹದೇವ, ನಾರಾಯಣಪ್ಪ, ಧನಂಜಯ ಮತ್ತಿತರರಿದ್ದರು.

6ಕೆಡಿಬಿಪಿ5-

ದೊಡ್ಡಬಳ್ಳಾಪುರದಲ್ಲಿ ರಾಗಿ ಖರೀದಿ ಪ್ರಕ್ರಿಯೆ ವಿಳಂಬ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಓದಿನಲ್ಲಿ ತಲ್ಲೀನತೆ ಇದ್ದರೆ ಕೆಟ್ಟ ಆಲೋಚನೆಗಳು ದೂರ: ಓಂಕಾರನಾಯ್ಕ
ರಾಷ್ಟ್ರೀಯ ಹೆದ್ದಾರೀಲಿ ಖಾಸಗಿ ಬಸ್‌ ಭಸ್ಮ