ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿ, ವಿಶ್ವೇಶ್ವರ ಹೆಗ್ಡೆ ಕಾಗೇರಿ, ಡಾ ಮಂಜುನಾಥ್, ಮಲ್ಲೇಶ್ ನಿಯೋಗ ದೇವೇಗೌರ ನೇತೃತ್ವದಲ್ಲಿ ಸಂಸತ್‌ನಲ್ಲಿ ನಿರ್ಮಾಲಾ ಸೀತಾರಾಮನ್ ಭೇಟಿ ಮಾಡಿ ಕಾಫಿ ಬೆಳೆಗಾರರಿಗೆ ಉಂಟಾಗುತ್ತಿರುವ ಸಮಸ್ಯೆ ಬಗ್ಗೆ ಚರ್ಚೆ ನಡೆಸಲಾಯಿತು.
ಕಾಫಿ ಬೆಳೆಗಾರರ ಸಮಸ್ಯೆಯನ್ನು ಕೆಲ ಮಧ್ಯವರ್ತಿಗಳು ದುರುಪಯೋಗಪಡಿಸಿಕೊಂಡು ವಿದೇಶಗಳಲ್ಲಿ ಆನ್ ಲೈನ್ ಮೂಲಕ ಖರೀದಿಸಿ ಬಡ ರೈತರ ಭೂಮಿ ಕಬಳಿಸುತ್ತಿದ್ದಾರೆ. ಇದಕ್ಕೆ ಕೆಲವಡೆ ಬ್ಯಾಂಕ್ ಅಧಿಕಾರಿಗಳ ಸಹಕಾರ ನೀಡುತ್ತಿದ್ದಾರೆ ಎಂಬ ದೂರುಗಳಿವೆ.ಕಾಫಿ ಬೆಳೆಗಾರರಲ್ಲಿ ಶೇ.90ಕ್ಕೂ ಕಡಿಮೆ ರೈತರು ಸಣ್ಣ ಹಿಡುವಳಿದಾರರಾಗಿದ್ದು, ಬಹುತೇಕ ಮಂದಿಗೆ ತಮ್ಮ ಭೂಮಿ ಸದರಿ ಕಾಯ್ದೆಯಿಂದ ಆನ್ ಲೈನ್ ಮೂಲಕ ಹರಾಜಾಗುತ್ತಿರುವುದು ಅರಿವಿಗೆ ಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸರ್ಫೇಸಿ ಕಾಯ್ದೆ ವಿರಹಿತಗೊಳಿಸಬೇಕು ಮತ್ತು ಆನ್ ಲೈನ್ ಮೂಲಕ ಕಾಫಿ ಬೆಳೆ ಹರಾಜು ಹಾಕುವುದನ್ನು ತಡಗಟ್ಟಬೇಕೆಂದು ಮನವಿ ಮಾಡಿದರು.
ಕಾಫಿ ಬೆಳೆಗಾರರ ಸಮಸ್ಯೆ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿ ನೇತೃತ್ವದ ನಿಯೋಗ ಮಾಜಿ ಪ್ರಧಾನಿ ದೇವೇಗೌಡರ ಸಮಕ್ಷಮದಲ್ಲಿ ಭೇಟಿ ಮಾಡಿ ಚರ್ಚಿಸಲಾಯಿತು.