ಕಾರ್ಮಿಕರ ಹಕ್ಕುಗಳಿಗಾಗಿ ಡಿ.1ರಂದು ದೆಹಲಿ ಚಲೋ

KannadaprabhaNewsNetwork |  
Published : Nov 06, 2026, 02:00 AM IST
ಫೋಟೋ: 4 ಹೆಚ್‌ಎಸ್‌ಕೆ 2ಹೊಸಕೋಟೆ ತಾಲ್ಲೂಕಿನ ನಂದಗುಡಿ ಗ್ರಾಮದಲ್ಲಿ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.೧ರಂದು ನಡೆಯಲಿರುವ ದೆಹಲಿ ಚಲೋ ಕಾರ್ಯಕ್ರಮದ ಪೋಸ್ಟರ್‌ನ್ನು ಸಿಐಟಿಯು ಹೊಸಕೋಟೆ ತಾಲ್ಲೂಕು ಸಮಿತಿ ಕಾರ್ಯದರ್ಶಿ ಮೋಹನ್ ಬಾಬು ಬಿಡುಗಡೆಗೊಳಿಸಿ  ಮಾತನಾಡಿದರು. | Kannada Prabha

ಸಾರಾಂಶ

ಹೊಸಕೋಟೆ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ದೇಶಾದ್ಯಂತ ಕಾರ್ಮಿಕರು ಒಗ್ಗಟ್ಟಿನಿಂದ ಹೋರಾಟಕ್ಕೆ ಸಜ್ಜಾಗಿದ್ದು, ಸಿಐಟಿಯು ನೇತೃತ್ವದಲ್ಲಿ ಡಿಸೆಂಬರ್ ೧ರಂದು ದೆಹಲಿಯಲ್ಲಿ ಸಂಸತ್ತಿನತ್ತ ಕಾರ್ಮಿಕರ ನಡಿಗೆ "ದೆಹಲಿ ಚಲೋ'' ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ತಾಲೂಕು ಕಾರ್ಯದರ್ಶಿ ಮೋಹನ್ ಬಾಬು ತಿಳಿಸಿದರು

ಹೊಸಕೋಟೆ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ದೇಶಾದ್ಯಂತ ಕಾರ್ಮಿಕರು ಒಗ್ಗಟ್ಟಿನಿಂದ ಹೋರಾಟಕ್ಕೆ ಸಜ್ಜಾಗಿದ್ದು, ಸಿಐಟಿಯು ನೇತೃತ್ವದಲ್ಲಿ ಡಿಸೆಂಬರ್ ೧ರಂದು ದೆಹಲಿಯಲ್ಲಿ ಸಂಸತ್ತಿನತ್ತ ಕಾರ್ಮಿಕರ ನಡಿಗೆ "ದೆಹಲಿ ಚಲೋ'''' ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ತಾಲೂಕು ಕಾರ್ಯದರ್ಶಿ ಮೋಹನ್ ಬಾಬು ತಿಳಿಸಿದರು.

ತಾಲೂಕಿನ ನಂದಗುಡಿಯಲ್ಲಿ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.೧ರ ದೆಹಲಿ ಚಲೋ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಾರ್ಮಿಕರ ಹಕ್ಕುಗಳನ್ನು ಕಸಿಯುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕೇಂದ್ರ ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು. ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರು, ಆಶಾ ಫೆಸಿಲಿಟೇಟರ್ ಸೇರಿದಂತೆ ಎಲ್ಲಾ ಸ್ಕೀಂ ಕಾರ್ಮಿಕರನ್ನು ಕಾರ್ಮಿಕರೆಂದು ಪರಿಗಣಿಸಿ ಇಪಿಎಫ್, ಇಎಸ್‌ಐ ಹಾಗೂ ಗ್ರಾಚ್ಯುಟಿ ಸೌಲಭ್ಯಗಳನ್ನು ಒದಗಿಸಬೇಕು. ಎಲ್ಲಾ ಕಾರ್ಮಿಕರಿಗೆ ಕನಿಷ್ಠ ೪೨ ಸಾವಿರ ರು. ವೇತನ ಹಾಗೂ ನಿವೃತ್ತಿ ನಂತರ ಕನಿಷ್ಠ ೨೧ ಸಾವಿರ ರು. ಪಿಂಚಣಿ ನೀಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಲಕ್ಷಾಂತರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಿ, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಫಿಕ್ಸೆಡ್ ಟರ್ಮ್ ಉದ್ಯೋಗ ಪದ್ಧತಿ ರದ್ದುಗೊಳಿಸಿ ಉದ್ಯೋಗ ಭದ್ರತೆ ಕಲ್ಪಿಸಬೇಕು. ಮುಷ್ಕರ ಹಾಗೂ ಪ್ರತಿಭಟನೆ ನಡೆಸುವ ಕಾರ್ಮಿಕರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವುದು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಜಲ, ಜಮೀನು ಮತ್ತು ಅರಣ್ಯ ಸಂಪನ್ಮೂಲಗಳನ್ನು ಕಾರ್ಪೊರೇಟ್ ಕಂಪನಿಗಳಿಗೆ ಹಸ್ತಾಂತರಿಸುವುದನ್ನು ತಡೆಯಬೇಕು. ಬಡವರ ಭೂಮಿ ಒತ್ತುವರಿ ಹಾಗೂ ಕಬಳಿಕೆ ನಿಲ್ಲಿಸಬೇಕು. ಅರಣ್ಯ ಭೂಮಿ ಸೇರಿದಂತೆ ಹಲವು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತ ಕೂಲಿಕಾರರಿಗೆ ಸಾಗುವಳಿ ಚೀಟಿ ಮತ್ತು ಹಕ್ಕುಪತ್ರಗಳನ್ನು ವಿತರಿಸಬೇಕು ಎಂದು ಒತ್ತಾಯಿಸಿದರು. ಕಾರ್ಮಿಕರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ನಡೆಯುತ್ತಿರುವ ಈ ಐತಿಹಾಸಿಕ ಹೋರಾಟದಲ್ಲಿ ನಂದಗುಡಿ ಹೋಬಳಿಯ ಸಂಘಟಿತ ಹಾಗೂ ಅಸಂಘಟಿತ ವಲಯದ ಎಲ್ಲ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೆಹಲಿ ಚಲೋ ಮೆರವಣಿಗೆಯನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಈ ವೇಳೆ ಅಂಗನವಾಡಿ ಕಾರ್ಯಕರ್ತೆಯರಾದ ಶಕುಂತಲಮ್ಮ, ವೆಂಕಟಲಕ್ಷ್ಮಮ್ಮ, ಪ್ರೇಮ, ಮಮತಾ, ಶೋಭಾ, ಉಸ್ಮಾ ಬಾನು, ಅಡುಗೆ ಸಹಾಯಕಿ ಮೀನಾಕ್ಷಮ್ಮ, ಗ್ರಾಪಂ ವಾಟರ್‌ಮನ್‌ಗಳಾದ ಶಿವಕುಮಾರ್, ವೆಂಕಟೇಶಪ್ಪ, ಮುನಿರಾಜು, ಮುನೇಗೌಡ, ಕೃಷ್ಣಪ್ಪ ಉಪಸ್ಥಿತರಿದ್ದರು.

ಫೋಟೋ: 4 ಹೆಚ್‌ಎಸ್‌ಕೆ 2

ಹೊಸಕೋಟೆ ತಾಲೂಕಿನ ನಂದಗುಡಿಯಲ್ಲಿ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.೧ರಂದು ನಡೆಯಲಿರುವ ದೆಹಲಿ ಚಲೋ ಕಾರ್ಯಕ್ರಮದ ಪೋಸ್ಟರ್‌ ಅನ್ನು ಸಿಐಟಿಯು ಹೊಸಕೋಟೆ ತಾಲೂಕು ಸಮಿತಿ ಕಾರ್ಯದರ್ಶಿ ಮೋಹನ್ ಬಾಬು ಬಿಡುಗಡೆ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ಟಿಂಗ್‌: ನ್ಯಾಯಾಲಯಕ್ಕೆ ಹಲವು ದಾಖಲೆ ಸಲ್ಲಿಸಿದ ಖಾಸಗಿ ಸುದ್ದಿವಾಹಿನಿ ಮುಖ್ಯಸ್ಥ
ಮದುವೆ ಆಗುವಂತೆ ಉದ್ಯಮಿಗೆ ಹನಿಟ್ರ್ಯಾಪ್: ₹2 ಕೋಟಿ ಬೇಡಿಕೆ