ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌

KannadaprabhaNewsNetwork |  
Published : Dec 06, 2025, 02:00 AM IST

ಸಾರಾಂಶ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ಕಾಂಗ್ರೆಸ್‌ನ ಗಾಂಧಿ ಕುಟುಂಬಕ್ಕೆ ಕುಣಿಕೆಯಾಗಿ ಸುತ್ತಿಕೊಂಡಿರುವ ಹೊತ್ತಿನಲ್ಲಿ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೂ ದೆಹಲಿ ಪೊಲೀಸರು ಇದಕ್ಕೆ ಸಂಬಂಧಿಸಿದಂತೆ ಹಣಕಾಸು ವಿನಿಮಯದ ಮಾಹಿತಿಗಳನ್ನು ಕೇಳಿ ನೋಟಿಸ್‌ ಜಾರಿ ಮಾಡಿದ್ದಾರೆ.

ಪಿಟಿಐ ನವದೆಹಲಿ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ಕಾಂಗ್ರೆಸ್‌ನ ಗಾಂಧಿ ಕುಟುಂಬಕ್ಕೆ ಕುಣಿಕೆಯಾಗಿ ಸುತ್ತಿಕೊಂಡಿರುವ ಹೊತ್ತಿನಲ್ಲಿ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೂ ದೆಹಲಿ ಪೊಲೀಸರು ಇದಕ್ಕೆ ಸಂಬಂಧಿಸಿದಂತೆ ಹಣಕಾಸು ವಿನಿಮಯದ ಮಾಹಿತಿಗಳನ್ನು ಕೇಳಿ ನೋಟಿಸ್‌ ಜಾರಿ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಕುಮಾರ್‌ ಅವರಿಗೆ ಮಾಹಿತಿ ಇರಬಹುದು ಎಂಬ ಶಂಕೆಯ ಮೇಲೆ ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ ನ.29ರಂದು ಈ ನೋಟಿಸ್‌ ಕಳಿಸಿದೆ. ಅದರಲ್ಲಿ, ಡಿ.19ರ ಒಳಗೆ ತನ್ನೆದುರು ಹಾಜರಾಗಿ ವೈಯಕ್ತಿಕ ಹಿನ್ನೆಲೆ, ಕಾಂಗ್ರೆಸ್‌ ಪಕ್ಷದೊಂದಿಗಿನ ಒಡನಾಟ, ಅವರು ಅಥವಾ ಅವರಿಗೆ ಸೇರಿದ ಸಂಸ್ಥೆಗಳಿಂದ ಯಂಗ್‌ ಇಂಡಿಯಾಗೆ ವರ್ಗಾವಣೆಯಾದ ಹಣದ ಬಗ್ಗೆ ಮಾಹಿತಿ ನೀಡಲು ನಿರ್ದೇಶಿಸಲಾಗಿದೆ. ಜತೆಗೆ, ಆ ವ್ಯವಹಾರಕ್ಕೆ ಸಂಬಂಧಿಸಿದ ಆದಾಯ ತೆರಿಗೆ ದಾಖಲೆ, ಹಣಕಾಸು ಹೇಳಿಕೆ ಮತ್ತು ದೇಣಿಗೆಯ ಪ್ರಮಾಣಪತ್ರಗಳನ್ನೂ ಸಲ್ಲಿಸುವಂತೆ ಸೂಚಿಸಿದೆ.ಕೈ ಆಕ್ರೋಶ:ಡಿಸಿಎಂಗೆ ನೋಟಿಸ್‌ ಜಾರಿ ಆಗುತ್ತಿದ್ದಂತೆ ಕೇಂದ್ರದಲ್ಲಿನ ಆಡಳಿತ ಪಕ್ಷದ ವಿರುದ್ಧ ಅವರ ಆಪ್ತರು ಆಕ್ರೋಶ ವ್ಯಕ್ತಪಡಿಸಿದ್ದು, ‘ಬಿಜೆಪಿಗೆ ಸಹಕಾರ ತೋರದಿದ್ದಕ್ಕೆ ಶಿವಕುಮಾರ್‌ರನ್ನು ಟಾರ್ಗೆಟ್‌ ಮಾಡಲಾಗುತ್ತಿದೆ. ಪಕ್ಷದ ನಾಯಕರ ಪೈಕಿ ಅವರನ್ನೇ ಹೆಚ್ಚು ಕಿರುಕಿಳ ನೀಡಲಾಗುತ್ತಿದೆ. ಆದರೆ ಅವರು ಯಾವುದಕ್ಕೂ ಮಣಿಯುವುದಿಲ್ಲ’ ಎಂದಿದ್ದಾರೆ.ಅ.3ರಂದು ದಿಲ್ಲಿ ಪೊಲೀಸರು ಪ್ರಕರಣವೊಂದನ್ನು ದಾಖಲಿಸಿ, ರಾಹುಲ್‌/ಸೋನಿಯಾ ಗಾಂಧಿ +ಒಡೆತನದ ಯಂಗ್‌ ಇಂಡಿಯನ್‌ ಸಂಸ್ಥೆಗೆ ಕೋಲ್ಕತಾದ ಖೊಟ್ಟಿ ಕಂಪನಿಯೊಂದರಿಂದ 1 ಕೋಟಿ ರು. ಹಣ ಬಂದಿತ್ತು. ಈ ಹಣದಲ್ಲಿ 50 ಲಕ್ಷ ರು.ಗಳನ್ನಷ್ಟೇ ನೀಡಿ 2000 ಕೋಟಿ ರು. ಮೊತ್ತದ ನ್ಯಾಷನಲ್‌ ಹೆರಾಲ್ಡ್‌ ಆಸ್ತಿಪಾಸ್ತಿಗಳನ್ನು ಯಂಗ್‌ ಇಂಡಿಯನ್‌ ಖರೀದಿಸಿತ್ತು. ಈ ರೀತಿ ಮೂಲ ಆಸ್ತಿ ಮರೆಮಾಚಿ ಪುಡಿಗಾಸಿಗೆ ಹೆರಾಲ್ಡ್‌ ಆಸ್ತಿಗಳನ್ನು ಯಂಗ್‌ ಇಂಡಿಯನ್‌ ಖರೀದಿಸಿದೆ ಎಂದು ಆರೋಪಿಸಿತ್ತು. ಈ ಬಗ್ಗೆ ದಿಲ್ಲಿ ಪೊಲೀಸರು ಡಿಕೆಶಿಯಿಂದ ಸ್ಪಷ್ಟನೆ ಬಯಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವೈಜ್ಞಾನಿಕ ಪದ್ಧತಿಯಿಂದ ಉ‍ಳುಮೆ ಮಾಡಿ ಮಣ್ಣನ್ನು ಸಂರಕ್ಷಿಸಿ
ಇಂದು ನಗರಕ್ಕೆ ಸಿಎಂ ಸಿದ್ದರಾಮಯ್ಯ ಡಿಸಿಎಂ